Ads By Google

Kushboo Sundar Health: ಅನಾರೋಗ್ಯದಿಂದ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು, ಆತಂಕ ವ್ಯಕ್ತಪಡಿಸಿದ ಅಭಿಮಾನಿಗಳು.

Actress Khushbu Sundar has been hospitalized due to fever and headache. Currently, the actress's health has recovered and no one needs to fear.
Ads By Google

Actress Kushboo Sundar Hospitalized: ಖ್ಯಾತ ನಟಿ ಖುಷ್ಬೂ (Khusbu)ಇದೀಗ ಸುದ್ದಿಯಲ್ಲಿದ್ದಾರೆ. ಬಹುಭಾಷಾ ನಟಿ ಖುಷ್ಬೂ ತಮ್ಮ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಇನ್ನು ನಟಿ ಖುಷ್ಬೂ ನಟನೆಯಲ್ಲಿ ಹೊಸ ಹೊಸ ಛಾಪು ಮೂಡಿಸಿದ್ದಾರೆ. ನಟಿ ಖುಷ್ಬೂ ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಕೂಡ ಹರಡಿದೆ.

Image Credit: economictimes.indiatimes

ನಟಿ ಖುಷ್ಬೂ ಆರೋಗ್ಯದಲ್ಲಿ ಏರುಪೇರು
ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಟಿ ಖುಷ್ಬೂ ಅವರ ಆರೋಗ್ಯ ಏರುಪೇರಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ನಟಿ ಖುಷ್ಬೂ
ನಟಿ ಖುಷ್ಬೂ ಅವರು ಇತ್ತೀಚಿನ ದಿನಗಳಲ್ಲಿ ಜ್ವರ ಮತ್ತು ಬಾಡಿ ವೀಕ್ ನೆಸ್ ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸೋಶಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ. ವೀಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನ್ನನ್ನು ಕೊಲ್ಲುತ್ತಿದೆ, ಆದರೆ ನಾನು ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಯಾರೂ ಕೂಡ ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಎಂದು ಬರೆದುಕೊಂಡಿದ್ದಾರೆ.

Image Credit: mathrubhumi

ಬಹುಭಾಷಾ ನಟಿ ಖುಷ್ಬೂ
ನಟಿ ಖುಷ್ಬೂ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಕೂಡ ಸೈ ಎನಿಸಿಕೊಂಡಿದ್ದಾರೆ. ಕನ್ನಡದ ರಣಧೀರ. ಶಾಂತಿ ಕ್ರಾಂತಿ, ಹೃದಯಗೀತೆ, ಪಾಳೇಗಾರ ಸೇರಿದಂತೆ ಪರಭಾಷೆಗಳಲ್ಲೂ ನಟಿ ಖುಷ್ಬೂ ಸುಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಸಿನಿಮಾ ರಾಜಕೀಯ ಎರಡು ಕ್ಷೇತ್ರಗಳಲ್ಲೂ ಅವರು ಗುರುತಿಸಿಕೊಂಡಿದ್ದಾರೆ. ನಟಿ ಖುಷ್ಬೂ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನನ್ನ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field