Labour Card: ಇಂತವರ ಕಾರ್ಮಿಕ ಕಾರ್ಡ್ ರದ್ದು ಮಾಡಲು ಸರ್ಕಾರದ ಆದೇಶ, ಇಂತಹ ಕಾರ್ಮಿಕರ ಮೇಲೆ ಕಠಿಣ ಕ್ರಮಕ್ಕೆ ಆದೇಶ

ಕಾರ್ಮಿಕ ಕಾರ್ಡ್ ವಿಷಯವಾಗಿ ಹೊಸ ನಿಯಮವನ್ನ ಜಾರಿಗೆ ತರಲಾಗಿದೆ ಮತ್ತು ಇಂತಹ ಕಾರ್ಮಿಕ ರದ್ದು ಮಾಡಲು ಆದೇಶ ಹೊರಡಿಸಲಾಗಿದೆ

Labour Card Latest Update: ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣಕ್ಕಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಲವು ರೀತಿಯಲ್ಲಿ ಕಾರ್ಮಿಕರಿಗೆ ಸಹಾಯ ಮಾಡುತ್ತಿದೆ. ಕಾರ್ಮಿಕರು ಮಂಡಳಿಯ ಗುರುತಿನ ಚೀಟಿ ಹೊಂದಿದ್ದರೆ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಹಲವು ರೀತಿಯ ಆರ್ಥಿಕ ಸಹಾಯ ಪಡೆಯಬಹುದಾಗಿದೆ.

ಬಹಳ ವರ್ಷಗಳಿಂದ ಕಾರ್ಮಿಕ ಕಲ್ಯಾಣ ಮಂಡಳಿ ಜಾರಿಯಲ್ಲಿದ್ದು, ಲಕ್ಷಾಂತರ ಕಾರ್ಮಿಕರು ಇದರ ಸದಸ್ಯರಾಗಿ ಆರ್ಥಿಕ ನೆರವು ಪಡೆದಿದ್ದಾರೆ. ಆದರೆ ಇನ್ನು ಹಲವರು ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಸೌಲಭ್ಯ ಪಡೆಯುತ್ತಿದ್ದು, ಅಂಥವರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಶಾಕಿಂಗ್ ಸುದ್ದಿ ನೀಡಿದೆ.

Labor Card Latest Update
Image Credit: Deccanherald

ನಕಲಿ ದಾಖಲೆ ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸುವುದು ಶಿಕ್ಷಾರ್ಹ ಅಪರಾಧ

ಕಟ್ಟಡ ನಿರ್ಮಾಣ ಕಾರ್ಮಿಕರಲ್ಲದವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮ೦ಡಳಿಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ನೋಂದಣಿಯಾಗಿದ್ದು, ಮಂಡಳಿಗೆ ನಕಲಿ ದಾಖಲೆ ನೀಡಿ ಕಾರ್ಮಿಕರೆಂದು ನೋಂದಣಿ ಮಾಡಿಸಿಕೊಂಡು ಮಂಡಳಿಯ ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ.

ಅಂತಹವರು ತಾವೇ ಖುದ್ದಾಗಿ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಭೇಟಿ ನೀಡಿ ಕಾರ್ಮಿಕ ಕಾರ್ಡ್ ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಸೂಚನೆ ನೀಡಿದೆ. ಮೂಲ ಗುರುತಿನ ಚೀಟಿಯನ್ನು ಹಿಂದಿರುಗಿಸುವ ಮೂಲಕ ತಮ್ಮ ನೋಂದಣಿಯನ್ನು ರದ್ದುಪಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ.

Join Nadunudi News WhatsApp Group

Fake Labour Card Update
Image Credit: Business-standard

ನಕಲಿ ಕಾರ್ಮಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ನಕಲಿ ಅನರ್ಹ ಕಾರ್ಮಿಕರನ್ನು ಪತ್ತೆಹಚ್ಚಲು ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಪರಿಶೀಲನೆಯ ಸಮಯದಲ್ಲಿ ಅನರ್ಹರು ನೋಂದಣಿಯಾಗಿರುವುದು ಕಂಡುಬಂದಲ್ಲಿ ಅವರ ನೋಂದಣಿಯನ್ನು ರದ್ದುಪಡಿಸಿ, ಅವರು ಮಂಡಳಿಯಿಂದ ಇಲ್ಲಿಯವರೆಗೂ ಪಡೆದ ಎಲ್ಲಾ ಸೌಲಭ್ಯಗಳನ್ನು ದಂಡಸಹಿತ ಹಿಂಪಡೆಯಲು ಕ್ರಮ ವಹಿಸಲಾಗುವುದು ಹಾಗೂ ಅವರ ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Join Nadunudi News WhatsApp Group