Land Tenure Scheme: ಸ್ವಂತ ಭೂಮಿ ಇಲ್ಲದ ಜನರಿಗೆ ಭೂಮಿ ಒಡೆತನ ಮಾಡಿಕೊಳ್ಳಲು ಹೊಸ ಅರ್ಜಿ ಆಹ್ವಾನ, ಬೇಗನೆ ಅರ್ಜಿ ಸಲ್ಲಿಸಿ

ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗೆ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನ, ಅರ್ಹರು ಇಂದೇ ಅರ್ಜಿ ಸಲ್ಲಿಸಿ

Land Ownership Scheme Application: ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಠ ಜಾತಿ ಹಾಗೂ ಪಂಗಡದವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಈ ವರ್ಗದ ಜನರು ಆರ್ಥಿಕ ನೆರವು ಪಡೆದುಕೊಳ್ಳಬಹುದಾಗಿದೆ.

ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನವನ್ನು ರೂಪಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗು ಈ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Land Tenure Scheme
Image Credit: Myrepublica

ಈ ಯೋಜನೆಗೆ ಅರ್ಜಿ ಸಲ್ಲಿಸುವ ಬಗ್ಗೆ ವಿವರ

ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಅರ್ಹ ರಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್‌ 15 ಕೊನೆಯ ದಿನವಾಗಿದೆ. ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅರ್ಹರು ಡಿಸೆಂಬರ್‌ 15 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

Land Ownership Scheme Application
Image Credit: Indiafilings

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗು ದಾಖಲೆಗಳು

Join Nadunudi News WhatsApp Group

Land Tenure Scheme ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು,ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ ಆಗಿರಬೇಕು. ಜಾತಿ ಪ್ರಮಾಣಪತ್ರ ಹೊಂದಿರಬೇಕು ಹಾಗು ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು. ಗ್ರಾಮೀಣ ಪ್ರದೇಶದಲ್ಲಿ ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ ಆದಾಯ ಮಿತಿ ಹೊಂದಿರಬೇಕು.

ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್. ಆಧಾರ್ ಕಾರ್ಡ್ ದಾಖಲೆಗಳು ಕಡ್ಡಾಯ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ತ 24×7 ಸಹಾಯವಾಣಿ 9482300400 com Xand @SWDGok swd.gok ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆದಷ್ಟು ಬೇಗನೆ ಆಸಕ್ತರು ಈ ಯೋಜನೆಗಳ ಮಾಹಿತಿ ಪಡೆದುಕೊಳ್ಳಿ.

Join Nadunudi News WhatsApp Group