Library Facility: 1 ರಿಂದ 10 ನೇ ತರಗತಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್, ಹೊಸ ಯೋಜನೆ ಜಾರಿ
ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಗ್ರಂಥಾಲಯ ಕಾರ್ಯಕ್ರಮ
Library Facility For 1 to 10th Class Students: ಪ್ರಸ್ತುತ ರಾಜ್ಯ ಸರ್ಕಾರ ಶಾಲಾ ಮಕ್ಕಳಿಗಾಗಿ ವಿವಿಧ ಸೌಲಭ್ಯವನ್ನು ಒದಗಿಸುತ್ತಿದೆ. ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರದ ಗುರಿಯಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಯಾವುದೇ ಕೊರತೆಯಾಗಬಾರದು ಎನ್ನುವ ದೃಷ್ಟಿಯಿಂದ ರಾಜ್ಯ ಸರ್ಕಾರ ಈಗಾಗಲೇ ನಾನಾ ಸೌಲಭ್ಯವನ್ನು ಜಾರಿಗೊಳಿಸಿದೆ. ಸದ್ಯ ರಾಜ್ಯ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗ್ಗಿ ವಿಶೇಷ ಸೌಲಭ್ಯವನ್ನು ನೀಡಲು ಮುಂದಾಗಿದೆ. ಈ ಹೊಸ ಸೌಲಭ್ಯವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಇನ್ನಷ್ಟು ಸಹಾಯವಾಗಲಿದೆ.
ಶಾಲಾ ಮಕ್ಕಳಿಗೆ ಇನ್ನುಮುಂದೆ ವಾರಕ್ಕೊಮ್ಮೆ ಗ್ರಂಥಾಲಯ ಕಾರ್ಯಕ್ರಮ ಕಡ್ಡಾಯ
ರಾಜ್ಯದಲ್ಲಿ 01ನೇ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ವಾರಕ್ಕೊಮ್ಮೆ ಗ್ರಂಥಾಲಯ ಕಾರ್ಯಕ್ರಮ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ತಿಳಿಸಿರುವಂತೆ ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ಶಾಲೆಯಲ್ಲಿ ಕಡ್ಡಾಯವಾಗಿ ಗ್ರಂಥಾಲಯ ಸ್ಥಾಪಿಸಿ ಅಭಿವೃದ್ಧಿಪಡಿಸಲು ಮತ್ತು ಮಕ್ಕಳ ಬಳಕೆಗೆ ಯೋಗ್ಯವಾಗಿಸಿ ಮತ್ತು ನಿರಂತರ ಬಳಕೆಗೆ ಲಭ್ಯವಾಗುವಂತೆ ಉಲ್ಲೇಖೀಸಿದಂತೆ “ಶಾಲೆಗಳಲ್ಲಿ ಓದುವ ಹವ್ಯಾಸ ಮತ್ತು ಜ್ಞಾನದ ಅಭಿವೃದ್ಧಿ” ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಕಾರ್ಯಕ್ರಮದಡಿ ಶಾಲೆಗಳಲ್ಲಿ ವಾರಕ್ಕೆ ಒಂದು ಗ್ರಂಥಾಲಯ ಅಧಿವೇಶನ ಏರ್ಪಡಿಸಲಾಗಿದೆ.
ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಈ ಸೌಲಭ್ಯ ಜಾರಿ
ಸಮಗ್ರ ಶಿಕ್ಷಣ ಕರ್ನಾಟಕದಿಂದ ರಾಜ್ಯದ ಎಲ್ಲಾ ಶಾಲೆಗಳಿಗೆ ಪ್ರತಿ ವರ್ಷ ಗ್ರಂಥಾಲಯ ಅನುದಾನ ನೀಡಲಾಗುತ್ತದೆ. ಅಲ್ಲದೆ, ವಿದ್ಯಾರ್ಥಿಗಳು ಸಂಗ್ರಹಿಸಿದ ರೀಡಿಂಗ್ ರೂಮ್ (ಆರ್‌ಆರ್) ನಿಧಿಯಿಂದ ಶಾಲೆಗಳಲ್ಲಿ ಅನುದಾನವೂ ಲಭ್ಯವಿದೆ. ಈ ಅನುದಾನವನ್ನು ಬಳಸಿಕೊಂಡು, ಗ್ರಂಥಾಲಯಗಳು ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗೆ ಗುಣಮಟ್ಟದ ಓದುವ ಸಾಮಗ್ರಿಗಳನ್ನು ಖರೀದಿಸಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು ಪ್ರಾತಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುಣಮಟ್ಟದ ಪುಸ್ತಕಗಳ ಪಟ್ಟಿಯನ್ನು ಶಿಫಾರಸ್ಸು ಮಾಡಿದೆ.