LIC Pension: ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಬರಲಿದೆ 12,500 ರೂ ಪಿಂಚಣಿ, ಇಂದೇ ಫಾರ್ಮ್ ಭರ್ತಿ ಮಾಡಿ.

ಕಡಿಮೆ ಹೂಡಿಕೆ ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯುವ ಈ ಪಿಂಚಣಿ ಯೋಜನೆಯ ಬಗ್ಗೆ ಒಂದಿಷ್ಟು ಮಾಹಿತಿ ತಿಳಿಯಿರಿ.

LIC Saral Pension Yojana: ದೇಶದ ಅತಿ ದೊಡ್ಡ ವಿಮಾ ಕಂಪನಿಯಾಗಿರುವ ಎಲ್ ಐಸಿ (LIC) ಜೀವ ವಿಮಾ ಯೋಜನೆಯ ಜೊತೆಗೆ ವಿವಿಧ ರೀತಿಯ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ. ನಿವೃತ್ತರು ತಮ್ಮ ನಿವೃತ್ತಿಯ ನಂತರವೂ ಕೂಡ ಆದಾಯ ಪಡೆಯಲು ಪಿಂಚಣಿ ಯೋಜನೆಯು ಸಹಾಯವಾಗುತ್ತದೆ. ಇನ್ನು ಅಂಚೆ ಕಚೇರಿಯಲ್ಲಿ ಕೂಡ ವಿವಿಧ ರೀತಿಯ ಪಿಂಚಣಿ ಯೋಜನೆಗಳಿವೆ.

ಪೋಸ್ಟ್ ಆಫೀಸ್ ನ ಜೊತೆಗೆ ಜೀವ ವಿಮಾ ಕಂಪನಿಯು ಕೂಡ ವಿವಿಧ ರೀತಿಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ಸಾಮಾನ್ಯವಾಗಿ ಪಿಂಚಣಿ ಯೋಜನೆಯು 60 ವರ್ಷದಿಂದ ಪ್ರಾರಂಭವಾಗುತ್ತದೆ. ಆದರೆ ಇದೀಗ ಎಲ್ ಐಸಿ ಹೊಸ ಯೋಜನೆಯನ್ನು ಬಿಡುಗಡೆ ಮಾಡಿದ್ದು ಈ ಯೋಜನೆಯ ಮೂಲಕ ನೀವು ಕೇವಲ 40 ವರ್ಷದಿಂದಲೇ ಪಿಂಚಣಿಯನ್ನು ಪಡೆಯಬಹುದಾಗಿದೆ.

Once you invest in this scheme, you will get a pension of Rs 12,500 every month
Image Credit: Navbharattimes

LIC ಸರಳ ಪಿಂಚಣಿ ಯೋಜನಾ (LIC Saral Pension Yojana) 
ಭಾರತೀಯ ಜೀವ ವಿಮೆ ಇದೀಗ 40 ವರ್ಷ ಮೇಲ್ಪಟ್ಟವರಿಗೆ ಪಿಂಚಣಿ ಪಡೆಯುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಎಲ್ ಐಸಿ ಸರಳ ಪಿಂಚಣಿ ಯೋಜನೆಯ ಮೂಲಕ 40 ವರ್ಷದಿಂದ 80 ವರ್ಷದ ವಯಸ್ಸಿನವರು ಈ ಸರಳ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಿ ಯೋಜನೆಯ ಲಾಭವನ್ನು ಪಡೆಯಬಹುದು.

ಈ ಪಾಲಿಸಿಯಲ್ಲಿ ಪ್ರೀಮಿಯಂ ಅನ್ನು ಕೇವಲ ಒಂದು ಬಾರಿ ಮಾತ್ರ ಠೇವಣಿ ಮಾಡಲಾಗುತ್ತದೆ. ಇನ್ನು ಪಿಂಚಣಿದಾರರು ಮರಣ ಹೊಂದಿದರೆ, ವ್ಯಕ್ತಿಯು ಠೇವಣಿ ಮಾಡಿದ ಮೊತ್ತದ ಹಣವನ್ನು ಮರಳಿ ಪಡೆಯಬಹುದಾಗಿದೆ.

ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಬರಲಿದೆ 12,500 ರೂ ಪಿಂಚಣಿ
LIC ಸರಳ ಪಿಂಚಣಿ ಯೋಜನೆಯ ಪಾಲಿಸಿದಾರರು 6 ತಿಂಗಳ ನಂತರ ಪಾಲಿಸಿಯನ್ನು ಯಾವುದೇ ಸಮಯದಲ್ಲಿ ಬೇಕಾದರೂ ಸರೆಂಡರ್ ಮಾಡಬಹುದಾಗಿದೆ. ಪಾಲಿಸಿ ಪಡೆದ ನಂತರ ಪಾಲಿಸಿದಾರರ ಜೀವತಾವದಿಯವರೆಗೂ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ.

Join Nadunudi News WhatsApp Group

LIC Saral Pension Yojana updates
Image Credit: Jagran

ಇನ್ನು ಪಾಲಿಸಿದಾರರ ಮರಣದ ನಂತರ ಹಣವನ್ನು ನಾಮಿನಿಗೆ ನೀಡಲಾಗುತ್ತದೆ. 42 ವರ್ಷ ವಯಸ್ಸಿನ ವ್ಯಕ್ತಿಯು 30 ಲಕ್ಷ ರೂ. ವರ್ಷಾಶನವನ್ನು ತೆಗೆದುಕೊಂಡರೆ ಅವರು ಮಾಸಿಕ ಸುಮಾರು 12,388 ರೂ.ಗಳ ಪಿಂಚಣಿ ಪಡೆಯಬಹುದು.

ಮಾಸಿಕ 1000 ಹೂಡಿಕೆ ಅಗತ್ಯ
ಒಂದು ವೇಳೆ ಜಂಟಿ ಖಾತೆಯಲ್ಲಿ ಪಾಲಿಸಿ ತೆಗೆದುಕೊಂಡಿದ್ದರೆ, ಪಾಲಿಸಿದಾರರ ಮರಣದ ನಂತರ ಹಣವನ್ನು ಪತಿ ಅಥವಾ ಹೆಂಡತಿ ಪಿಂಚಣಿ ಪಡೆಯುತ್ತಾರೆ. ಇಬ್ಬರ ಮರಣದ ನಂತರ ಠೇವಣಿಯ ಮೊತ್ತವು ನಾಮಿನಿಗೆ ತಲುಪುತ್ತದೆ.

ಈ ಯೋಜನೆಯಡಿ ಮಾಸಿಕವಾಗಿ ಕನಿಷ್ಠ 1000 ರೂ. ಹೂಡಿಕೆ ಮಾಡಬಹುದು ಹೂಡಿಕೆಗೆ ಗರಿಷ್ಟ ಮಿತಿಯಿಲ್ಲ. LIC ಸರಳ ಪಿಂಚಣಿ ಯೋಜನೆಯ ಅಡಿಯಲ್ಲಿ ಮಾಸಿಕ, ತ್ರೈಮಾಸಿಕ, ಅರ್ಧವಾರ್ಷಿಕ ಮತ್ತು ವಾರ್ಷಿಕ ಪ್ರೀಮಿಯಂ ಆಯ್ಕೆಯನ್ನು ಆರಿಸಿಕೊಳ್ಳಬಹುದಾಗಿದೆ.

Join Nadunudi News WhatsApp Group