Sarala Pension Plan: LIC ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 10 ಸಾವಿರ ರೂ ಪಿಂಚಣಿ, ಇಂದೇ ಅರ್ಜಿ ಸಲ್ಲಿಸಿ.

LIC ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 10 ಸಾವಿರ ರೂ ಪಿಂಚಣಿ

LIC Sarala Pension Scheme Investment Details: ಉತ್ತಮ ಪಿಂಚಣಿ ಯೋಜನೆಗಾಗಿ ನೀವು ಹುಡುಕುತ್ತಿದ್ದರೆ ಎಲ್ಐಸಿ ಅಡಿಯಲ್ಲಿ ಅಂತಹ ಅನೇಕ ಯೋಜನೆಗಳು ಲಭ್ಯವಿದೆ. ಪಿಂಚಣಿ ಯೋಜನೆಯಲ್ಲಿ ಹೂಡಿಕೆಯನ್ನು ಮಾಡುವ ಮೂಲಕ ನೀವು ಹೆಚ್ಚಿನ ಆದಾಯವನ್ನು ಗಳಿಸಬಹುದು.

ಪಿಂಚಣಿಯ ಯೋಜನೆಯಲ್ಲಿ ಹೂಡಿಕೆ ಮಾಡಿ ಹೆಚ್ಚು ಆದಾಯವನ್ನು ಗಳಿಸಲು LIC Sarala Pension Scheme ಉತ್ತಮ ಹೂಡಿಕೆಯ ವಿಧಾನವಾಗಿದೆ. ಈ ಯೋಜನೆಯ ವಿಶೇಷತೆ ಏನೆಂದರೆ ನೀವು 40 ವರ್ಷ ವಯಸ್ಸಿನಿಂದ ನಿಮ್ಮ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು. ನಾವೀಗ ಈ ಲೇಖನದಲ್ಲಿ LIC ಸರಳ ಪಿಂಚಣಿ ಯೋಜನೆಯ ಬಗ್ಗೆ ಮಾಹಿತಿ ಹೇಳಲಿದ್ದೇವೆ.

LIC Saral Pension Scheme
Image Credit: Informal Newz

LIC ಸರಳ ಪಿಂಚಣಿ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು…?
ಇನ್ನು LIC Sarala Pension Scheme ಒಂದು ರೀತಿಯಲ್ಲಿ ವರ್ಷಾಶನ ಯೋಜನೆಯಾಗಿದೆ. ಎಲ್ ಐಸಿ ಸರಳ ಪಿಂಚಣಿ ಯೋಜನೆಯ ಮೂಲಕ 40 ವರ್ಷದಿಂದ 80 ವರ್ಷದ ವಯಸ್ಸಿನವರು ಈ ಸರಳ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಿ ಯೋಜನೆಯ ಲಾಭವನ್ನು ಪಡೆಯಬಹುದು. ಈ ಪಾಲಿಸಿಯಲ್ಲಿ ಪ್ರೀಮಿಯಂ ಅನ್ನು ಕೇವಲ ಒಂದು ಬಾರಿ ಮಾತ್ರ ಠೇವಣಿ ಮಾಡಲಾಗುತ್ತದೆ. ಇನ್ನು ಪಿಂಚಣಿದಾರರು ಮರಣ ಹೊಂದಿದರೆ ವ್ಯಕ್ತಿಯ ನಾಮಿನಿ ಠೇವಣಿ ಮಾಡಿದ ಮೊತ್ತದ ಹಣವನ್ನು ಮರಳಿ ಪಡೆಯಬಹುದಾಗಿದೆ.

LIC ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 10 ಸಾವಿರ ರೂ ಪಿಂಚಣಿ
LIC ಸರಳ ಪಿಂಚಣಿ ಯೋಜನೆಯ ಅಡಿಯಲ್ಲಿ ಮಾಸಿಕ, ತ್ರೈಮಾಸಿಕ, ಅರ್ಧವಾರ್ಷಿಕ ಮತ್ತು ವಾರ್ಷಿಕ ಪ್ರೀಮಿಯಂ ಆಯ್ಕೆಯನ್ನು ಆರಿಸಿಕೊಳ್ಳಬಹುದಾಗಿದೆ. ಇನ್ನು 42 ವರ್ಷ ವಯಸ್ಸಿನ ವ್ಯಕ್ತಿಯು 30 ಲಕ್ಷ ರೂ. ವರ್ಷಾಶನವನ್ನು ತೆಗೆದುಕೊಂಡರೆ ಅವರು ಮಾಸಿಕ ಸುಮಾರು 12,388 ರೂ.ಗಳ ಪಿಂಚಣಿ ಪಡೆಯಬಹುದು. ಈ ಯೋಜನೆಯಡಿ ಮಾಸಿಕವಾಗಿ ಕನಿಷ್ಠ 1,000 ರೂ. ಹೂಡಿಕೆ ಮಾಡಬಹುದು ಹೂಡಿಕೆಗೆ ಗರಿಷ್ಟ ಮಿತಿಯಿಲ್ಲ.

LIC Saral Pension Scheme Investment Details
Image Credit: Grownxtdigital

LIC ಸರಳ ಪಿಂಚಣಿ ಯೋಜನೆಯ ಪಾಲಿಸಿದಾರರು 6 ತಿಂಗಳ ನಂತರ ಪಾಲಿಸಿಯನ್ನು ಯಾವುದೇ ಸಮಯದಲ್ಲಿ ಬೇಕಾದರೂ ಸರೆಂಡರ್ ಮಾಡಬಹುದಾಗಿದೆ. ಪಾಲಿಸಿ ಪಡೆದ ನಂತರ ಪಾಲಿಸಿದಾರರ ಜೀವತಾವದಿಯವರೆಗೂ ಪಿಂಚಣಿಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಇನ್ನು ಪಾಲಿಸಿದಾರರ ಮರಣದ ನಂತರ ಹಣವನ್ನು ನಾಮಿನಿಗೆ ನೀಡಲಾಗುತ್ತದೆ. ನೀವು ಜಂಟಿ ಖಾತೆಯನ್ನು ಹೊಂದಿದ್ದರೆ, ನಿಮ್ಮ ಹೆಂಡತಿಯು ಪಾಲಿಸಿಯ ಸಂಪೂರ್ಣ ಲಾಭವನ್ನು ಪಡೆಯಲು ಅರ್ಹರಾಗುತ್ತಾರೆ.

Join Nadunudi News WhatsApp Group

LIC Saral Pension Plan
Image Credit: News 18

Join Nadunudi News WhatsApp Group