ದೇಶದಲ್ಲಿ ಕರೋನ ಮಹಾಮಾರಿ ಯಾವ ರೀತಿಯಲ್ಲಿ ಹರಡುತ್ತಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ ಎಂದು ಹೇಳಬಹುದು. ಬಹಳ ವೇಗವಾಗಿ ಕರೋನ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿದ್ದು ಜನರು ಬಹಳ ಭಯದಲ್ಲಿ ಜೀವನವನ್ನ ಮಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದ ಕೆಲವು ರಾಜ್ಯಗಳನ್ನ ಲಾಕ್ ಡೌನ್ ಮಾಡಲಾಗಿದ್ದು ಜನರು ಕೂಡ ಸರ್ಕಾರದ ಲಾಕ್ ಡೌನ್ ಗೆ ಸಹಕರಿಸುತ್ತಿದ್ದಾರೆ ಎಂದು ಹೇಳಬಹುದು. ಇನ್ನು ರಾಜ್ಯದಲ್ಲಿ ಲಾಕ್ ಡೌನ್ ಇರುವ ಕಾರಣ ಅದೆಷ್ಟೋ ಕುಟುಂಬಗಳು ಅನ್ನಕ್ಕಾಗಿ ಪರದಾಡುತ್ತಿದ್ದಾರೆ ಎಂದು ಹೇಳಬಹುದು. ಇನ್ನು ಈಗ ರಾಜ್ಯ ಸರ್ಕಾರ ಲಾಕ್ ಡೌನ್ ಸಮಯದಲ್ಲಿ ಪಡಿತರ ಚೀಟಿದಾರರಿಗೆ ದೊಡ್ಡ ಗುಡ್ ನ್ಯೂಸ್ ಒಂದನ್ನ ನೀಡಿದ್ದು ಇದನ್ನ ಕೇಳಿ ಜನರು ಸಂತಸವನ್ನ ವ್ಯಕ್ತಪಡಿಸಿದ್ದಾರೆ ಎಂದು ಹೇಳಬಹುದು.
ಹಾಗಾದರೆ ಏನದು ಸಿಹಿಸುದ್ದಿ ಅನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೇ. 10 ರಿಂದ ಮೇ. 24 ರವರೆಗೆ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಬಡ ಕುಟುಂಬಗಳಿಗೆ ಉಚಿತವಾಗಿ 10 ಕೆಜಿ ಪಡಿತರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಕರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಂದಿರುವ ಸಾರ್ವಜನಿಕ ಹಿತಾಶಕ್ತಿ ಅರ್ಜಿಗಳನ್ನ ಪರಿಶೀಲನೆ ಮಾಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರಿದ್ದ ನ್ಯಾಯಪೀಠಕ್ಕೆ ಈ ಮಾಹಿತಿ ನೀಡಿದ ಸರ್ಕಾರದ ಪರ ವಕೀಲರು, ಬುಧವಾರದಿಂದ ಬಿಬಿಎಂಪಿ ಕ್ಯಾಂಟೀನ್ ಗಳಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಉಚಿತವಾಗಿ ಮೂರು ಹೊತ್ತು ಊಟದ ವ್ಯವಸ್ಥೆ ಮತ್ತು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 150 ಆಹಾರ ಕಿಟ್ ಗಳನ್ನು ಅಗತ್ಯವಿರುವವರಿಗೆ ಪೂರೈಸಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ಜನರು ಆಹಾರಕ್ಕಾಗಿ ಕಷ್ಟ ಪಡಬಾರದು ಅನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನ ಜಾರಿಗೆ ತಂದಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಲಾಕ್ ಡೌನ್ ಅವಧಿ ಮುಕ್ತಾಯ ಆಗುವ ತನಕ ಪಡಿತರ ಚೀಟಿಯನ್ನ ಹೊಂದಿರುವ ಎಲ್ಲರಿಗೂ ಹತ್ತು ಕೆಜಿ ಅಕ್ಕಿಯನ್ನ ವಿತರಣೆ ಮಾಡಲಾಗುತ್ತದೆ. ಜನರು ಮುಂದಿನ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಹತ್ತು ಕೆಜಿ ಅಕ್ಕಿಯನ್ನ ಪಡೆಯಬಹುದಾಗಿದೆ ಎಂದು ಹೇಳಬಹುದು. ಸ್ನೇಹಿತರೆ ಈ ಮಾಹಿತಿಯನ್ನ ಪಡಿತರ ಚೀಟಿಯನ್ನ ಹೊಂದಿರುವ ಎಲ್ಲರಿಗೂ ತಲುಪಿಸಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.