Loksabha Election: ಬ್ಯಾಂಕ್ ಖಾತೆಯಿಂದ ಇನ್ಮುಂದೆ 50 ಸಾವಿರಕ್ಕಿಂತ ಹೆಚ್ಚು ಹಣ ತಗೆಯುವಂತಿಲ್ಲ, RBI ಹೊಸ ರೂಲ್ಸ್

ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಹೆಚ್ಚಿನ ಹಣ ಕೊಂಡೊಯ್ಯುವಂತಿಲ್ಲ...!

Loksabha Election 2024 New Update: ದೇಶದಲ್ಲಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಏಪ್ರಿಲ್ 19, 2024 ರಿಂದ ಲೋಕಸಭಾ ಚುನಾವಣೆ ನಡೆಯಲಿದೆ. ದೇಶದಾದ್ಯಂತ ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಸದ್ಯ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೊಳಿಸುತ್ತಿದೆ.

ಚುನಾವಣೆಯ ಕಾರಣ ಹಣದ ವಹಿವಾಟು ನಡೆಯುವುದು ಸಾಮಾನ್ಯ. ಹೀಗಾಗಿ ಚುನಾವಣಾ ಆಯೋಗ ದೇಶದಲ್ಲಿ ನೆಡಯುವ ಹಣಕಾಸಿನ ವಹಿವಾಟಿನ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಜನಸಮಯರು ಹಣ ಕೊಡೊಯ್ಯುವ ಬಗ್ಗೆ ಹೊಸ ನಿಯಮವನ್ನು ಜಾರಿ ಮಾಡಿದೆ.

Lok Sabha Election 2024
Image Credit: Financial Express

ದಾಖಲೆಗಳಿಲ್ಲದೆ 50 ಸಾವಿರಕ್ಕಿಂತ ಹೆಚ್ಚಿನ ಹಣ ಕೊಂಡೊಯ್ಯುವಂತಿಲ್ಲ…!
ಲೋಕಸಭೆ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ, ಸೂಕ್ತ ದಾಖಲೆಗಳಿಲ್ಲದೆ ರೂ.50 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಸಾಗಿಸಲು ಅವಕಾಶವಿಲ್ಲ. ದಾಖಲೆಗಳಿಲ್ಲದೆ ಸಾಗಿಸಿದ ನಗದನ್ನು ಚುನಾವಣಾ ತಂಡಗಳು ಜಪ್ತಿ ಮಾಡಿ ಸಮಿತಿಗೆ ಹಾಜರುಪಡಿಸಿ ವರದಿ ಸಲ್ಲಿಸಲಾಗುವುದು.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ಜಿಲ್ಲಾ ಕುಂದು ಕೊರತೆ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಚುನಾವಣಾ ತಂಡದಿಂದ ನಗದು ಜಪ್ತಿಯಾದಲ್ಲಿ ಹಣವನ್ನು ಬಿಡುಗಡೆ ಮಾಡಲು ಸೂಕ್ತ ದಾಖಲೆಗಳೊಂದಿಗೆ ಸಾರ್ವಜನಿಕರು ಜಿಲ್ಲಾ ಕುಂದು ಕೊರತೆ ಸಮಿತಿಗೆ ಮನವಿ ಸಲ್ಲಿಸಬಹುದು ಎಂದಿದ್ದಾರೆ.

Loksabha Election 2024 New Rule
Image Credit: Business-Standard

ಬ್ಯಾಂಕ್ ಖಾತೆಯಿಂದ ಇದಕ್ಕಿಂತ ಹೆಚ್ಚು ಹಣ ಹಿಂಪಡೆಯುವಂತಿಲ್ಲ
ಯಾವುದೇ ಪೂರ್ವ ಸೂಚನೆಗಳಿಲ್ಲದೆ ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಹಲವಾರು ವ್ಯಕ್ತಿಗಳ ಖಾತೆಗಳಿಗೆ RTGS/NEFT (RTGS/NEFT) ಮೂಲಕ ದೊಡ್ಡ ಮೊತ್ತದ ಹಣವನ್ನು ವರ್ಗಾವಣೆ ಮಾಡುವುದು, ಯಾವುದೇ ಅನುಮಾನಾಸ್ಪದವಾಗಿ ಯಾವುದೇ ನಗದು ಠೇವಣಿ ಅಥವಾ ರೂ.1 ಲಕ್ಷಕ್ಕಿಂತ ಹೆಚ್ಚಿನ ನಗದು ಹಿಂಪಡೆಯುವಿಕೆ, ಮತದಾರರಿಗೆ ಹಣ ನೀಡಲು ಬಳಸಬಹುದಾದ ನಗದು ವಹಿವಾಟಿನ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಚುನಾವಣಾ ಇಲಾಖೆಗೆ ಸೂಚಿಸಿದರು. ಈ ಮೂಲಕ ಲೋಕಸಭಾ ಚುನವಣಾ ಸಮಯದಲ್ಲಿ ಬ್ಯಾಂಕ್ ಖಾತೆಯಿಂದ ಖಾತೆದಾರರು 1 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಹಿಂಪಡೆಯುವಂತಿಲ್ಲ ಎಂದು ನಿಯಮವನ್ನು ರೂಪಿಸಿದ್ದಾರೆ.

Join Nadunudi News WhatsApp Group

Lok Sabha Election 2024 New Update
Image Credit: Economictimes

Join Nadunudi News WhatsApp Group