LPG Cylinder Price: ಜೂಲೈ ಮೊದಲ ದಿನವೇ ಭರ್ಜರಿ ಇಳಿಕೆ ಕಂಡ ಗ್ಯಾಸ್ ಬೆಲೆ, ದೇಶದ ಜನತೆಗೆ ಗುಡ್ ನ್ಯೂಸ್

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆ

LPG Cylinder Price Down: ದೇಶದ ಜನತೆ 2023 ರ ಆರಂಭದಿಂದ ಹಣದುಬ್ಬರತೆಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಾಗುತ್ತಿತ್ತು. ಅದರಲ್ಲೂ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು.

ಸದ್ಯ ಕೇಂದ್ರ ಸರ್ಕಾರ 2024 ವರ್ಷದಲ್ಲಿ ಆರು ತಿಂಗಳು ಮುಗಿದ ಬಳಿಕ LPG ಸಿಲಿಂಡರ್ ಬೆಲೆ ಇಳಿಕೆ ಮಾಡಲು ನಿರ್ಧರಿಸಿದೆ. ಈ ಮೂಲಕ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ ಎನ್ನಬಹುದು. ಸಧ್ಯ ಮನೆಯಲ್ಲಿ ಗ್ಯಾಸ್ ಬಳಸುವವರಿಗೆ ಕೇಂದ್ರದಿಂದ ಬಿಗ್ ರಿಲೀಫ್ ನೀಡಿದ್ದು, ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆಗೆ ಮುಂದಾಗಿದೆ. ಈ ಬಾರಿ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಎಷ್ಟು ಇಳಿಕೆ ಮಾಡಿದೆ ಎನ್ನುವ ಬಗ್ಗೆ ತಿಳಿಯಲು ಈ ಲೇಖನವನ್ನು ಓದಿ.

LPG Cylinder Price Down
Image Credit: Fortuneindia

ಜುಲೈ ಮೊದಲ ದಿನವೇ ದೇಶದ ಜನತೆಗೆ ಗುಡ್ ನ್ಯೂಸ್
ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬಹುತೇಕ ಏರಿಕೆ ಕಂಡು ಬರುತ್ತಿರುವ ಹಿನ್ನಲೆ ಜನಸಮಾನ್ಯರು ಹೆಚ್ಚಿನ ಆರ್ಥಿಕ ನಷ್ಟಕ್ಕೆ ಗುರಿಯಾಗುವಂತಾಗಿದೆ. ಆದರೂ ಜುಲೈ ನಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಈ ಇಳಿಕೆಯು ಎಲ್ಲರಿಗೂ ಅನ್ವಯವಾಗವುದಿಲ್ಲ.

ಕೆಲ ವರ್ಗಕ್ಕೆ ಮಾತ್ರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಅನ್ವಯವಾಗಲಿದೆ. ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ (Commercial gas cylinder) ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದ್ದು, ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ರಷ್ಟು ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

LPG Cylinder Price Update
Image Credit: Businesstoday

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂಡಿಯನ್ ಆಯಿಲ್ ಅಥಾರಿಟಿ ಪ್ರಕಾರ, ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂ.ಗೆ ಇಳಿಯಲಿದೆ. ಜೂನ್‌ ನಲ್ಲಿ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1,787 ರೂ. ಆಗಿತ್ತು. ಈಗ 31 ರೂಪಾಯಿ ಇಳಿಕೆಯಾಗಿದೆ.

Join Nadunudi News WhatsApp Group

ದೇಶದ ಇತರ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಎಷ್ಟು ಇಳಿಕೆಯಾಗಿದೆ ಎನ್ನುವುದು ನೋಡುವುದಾದರೆ, ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಎರಡೂ ನಗರಗಳು 31 ರೂಪಾಯಿ ಇಳಿಕೆ ಕಂಡಿವೆ.

Gas Cylinder Price In India
Image Credit: India today

Join Nadunudi News WhatsApp Group