LPG: ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿರೀಕ್ಷೆಯಲ್ಲಿ ಇದ್ದವರಿಗೆ ಸಿಹಿಸುದ್ದಿ, ಕೇಂದ್ರ ಸರ್ಕಾರದ ಮಹತ್ವದ ಘೋಷಣೆ.

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.

LPG Gas Subsidy: ಕೇಂದ್ರ ಸರ್ಕಾರದಿಂದ ಹೊಸ ಹೊಸ ನಿಯಮಗಳು ಜಾರಿ ಆಗುತ್ತಿದೆ. ಪ್ರತಿ ತಿಂಗಳ ಆರಂಭದಲ್ಲಿ ಅನೇಕ ಬದಲಾವಣೆಗಳು ಆಗುತ್ತದೆ. ಇದೀಗ ಜುಲೈ ತಿಂಗಳ ಕೊನೆ ವಾರದಲ್ಲಿದ್ದು ಇನ್ನು ಆಗಸ್ಟ್ ತಿಂಗಳಿನಲ್ಲಿ ಅನೇಕ ನಿಯಮಗಳು ಬದಲಾಗಲಿದೆ. ಇದೀಗ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಒಂದನ್ನು ಹೊರಡಿಸಿದೆ.

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಕೇಂದ್ರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಸಂಪನ್ಮೂಲ ಸಚಿವಾಲಯ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹಲವು ವಿವರಗಳನ್ನು ಬಹಿರಂಗಪಡಿಸಿದೆ.

lpg gas subsidy updates
Image Credit: Srbpost

ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ
ಗೃಹಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ನಿಯಂತ್ರಣದಲ್ಲಿರಿಸುತ್ತಿರುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎಲ್ ಪಿ ಜಿ ಗೆ ನೇರ ಲಾಭ ವರ್ಗಾವಣೆ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸಬ್ಸಿಡಿಯನ್ನು ಜಮಾ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಭಾರತದಲ್ಲಿ ವಿಶೇಷವಾಗಿ ಬಡವರಿಗೆ ಸಹಾಯಧನ ಯೋಜನೆಯನ್ನು ಪ್ರಾರಂಭಿಸಿದೆ ಎಂದು ಸರ್ಕಾರ ಹೇಳಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 21 ಮೇ 2022 ರಿಂದ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್ ಗೆ ರೂಪಾಯಿ 200 ಸಬ್ಸಿಡಿಯನ್ನು ಘೋಷಿಸಿದೆ. ಈ ಸಬ್ಸಿಡಿ ವರ್ಷಕ್ಕೆ 12 ಸಿಲಿಂಡರ್ ಗಳಿಗೆ ಅನ್ವಯಿಸುತ್ತದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 2022 -23 ಮತ್ತು 2023 -24 ರ ಆರ್ಥಿಕ ವರ್ಷಗಳಲ್ಲಿ 200 ರೂಪಾಯಿ ಸಬ್ಸಿಡಿಯೊಂದಿಗೆ ಗ್ಯಾಸ್ ಸಿಲಿಂಡರ್ ಗಳನ್ನೂ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

Join Nadunudi News WhatsApp Group

The central government has made an important announcement about LPG gas cylinder subsidy.
Image Credit: Economictimes

ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಯೋಜನೆಯಲ್ಲಿ 9 ಕೋಟಿಗೂ ಹೆಚ್ಚು ಫಲಾನುಭವಿಗಳಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡವರು ವರ್ಷಕ್ಕೆ 12 ಗ್ಯಾಸ್ ಸಿಲಿಂಡರ್ ಗಾಲ ಮೇಲೆ 2400 ಸಬ್ಸಿಡಿ ಪಡೆಯಬಹುದು. ಉಜ್ವಲ 2.0 ಯೋಜನೆಯಡಿ ಸಂಪರ್ಕ ಪಡೆಯಲು ವಿವಿಧ ಅರ್ಹತೆಗಳಿವೆ. ಅರ್ಜಿದಾರರು ಮಹಿಳೆಯರಾಗಿರಬೇಕು. 18 ವರ್ಷ ವಯಸ್ಸಾಗಿರಬೇಕು.

Join Nadunudi News WhatsApp Group