Madhu Bangarappa: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಶಿಕ್ಷಣ ಸಚಿವರ ಅಧಿಕೃತ ಘೋಷಣೆ.

ಇನ್ನುಮುಂದೆ SSLC ಮತ್ತು PUC ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ, ಶಿಕ್ಷಣ ಇಲಾಖೆಯ ಹೊಸ ನಿರ್ಧಾರ.

Madhu Bangarappa About Annual Exam: ಸದ್ಯ ರಾಜ್ಯದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಅನೇಕ ನಿಯಮಗಳು ಬದಲಾಗುತ್ತಿವೆ. ಈ ಬಾರಿಯ ಶಿಕ್ಷಣ ನೀತಿಯಲ್ಲಿ ಹೊಸ ಹೊಸ ನಿಯಮಾವಳಿಗಳು ರೂಪುಗೊಂಡಿದೆ. ಕಳೆದ ವರ್ಷದ ಶಿಕ್ಷಣ ನೀತಿಗೆ ಹೋಲಿಸಿದರೆ ಈ ಬಾರಿಯ ಶಿಕ್ಷಣ ನೀತಿಯಲ್ಲಿ ಸಂಪೂರ್ಣ ಬದಲಾವಣೆ ಆಗಿದೆ.

ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಹೆಚ್ಚಾಗಬಾರ್ದು ಎನ್ನುವ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡಿದೆ. ವಿದ್ಯಾರ್ಥಿಗಳು ಈ ಬಾರಿ SSLC ಮತ್ತು PUC ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇರುವುದಿಲ್ಲ.

Madhu Bangarappa About Annual Exam
Image Credit: etvbharat

ವಿದ್ಯಾರ್ಥಿಗಳೇ ಎಕ್ಸಾಂನಲ್ಲಿ ಫೇಲ್ ಆದರೆ ಚಿಂತಿಸಬೇಡಿ..!
ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮಕ್ಕಳ ಬೌದ್ಧಿಕ ಬೆಳವಣಿಗೆಯನ್ನು ಹೆಚ್ಚಿಸಲು ಈ ವರ್ಷ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲಾಗುತ್ತಿದೆ. ಸಪ್ಲಿಮೆಂಟರಿ ಪರೀಕ್ಷೆಯನ್ನು ರದ್ದುಪಡಿಸಿ ಮುಖ್ಯ ಪರೀಕ್ಷೆಯನ್ನು ಮೂರು ಬಾರಿ ನಡೆಸಲಾಗುತ್ತದೆ. ಹಾಗಾಗಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದರೂ ವಿದ್ಯಾರ್ಥಿಗಳು ತಲೆ ಕೆಡಿಸಿಕೊಳ್ಳಬೇಕಿಲ್ಲ. ಮೂರು ಬಾರಿ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತದೆ.

ಶಿಕ್ಷಣ ಸಚಿವರ ಅಧಿಕೃತ ಘೋಷಣೆ
ಈ ಹಿಂದೆ ವಾರ್ಷಿಕ ಪರೀಕ್ಷೆ ನಂತರ ಸಪ್ಲಿಮೆಂಟರಿ ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ಅದನ್ನು ಬದಲಿಸಿ ಪರೀಕ್ಷೆಯನ್ನು ಮೂರು ಬಾರಿ ನಡೆಸಲಾಗುತ್ತದೆ. ಮಕ್ಕಳ ಮಾರ್ಕ್ಸ್ ಕಾರ್ಡ್ ನಲ್ಲಿ ಅನುತ್ತೀರ್ಣ ಎಂದು ತೋರಿಸಬಾರದು ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

SSLC And PUC Annual Exam
Image Credit: Original Source

ಈ ವರ್ಷದಿಂದ ಮೂರು ಬಾರಿ SSLC ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಅನುತ್ತೀರ್ಣರಾದ ವಿದ್ಯಾರ್ಥಿಗಳು, ಕಡಿಮೆ ಅಂಕ ಪಡೆದವರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಈ ಬಾರಿ ಮೂರು ಬಾರಿ ವಾರ್ಷಿಕ ಪರೀಕ್ಷೆಯನ್ನು ನಡೆಸುತ್ತಿರೋದರಿಂದ ಎಲ್ಲಿಯೂ ವಿದ್ಯಾರ್ಥಿ ಫೇಲ್ ಆಗಿರೋ ಬಗ್ಗೆ ಮಾರ್ಕ್ಸ್ ಕಾರ್ಡ್ ನಲ್ಲಿ ಮಾಹಿತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ತಾವು ಫೇಲ್ ಆಗಿದ್ದೇವೆ ಎನ್ನುವ ಚಿಂತೆ ಕಾಡಬಾರದು ಎನ್ನುವ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ಕೈಗೊಂಡಿದೆ.

Join Nadunudi News WhatsApp Group

Join Nadunudi News WhatsApp Group