Maitri Cup: ರಾಜ್ಯದ ಎಲ್ಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, ಮೈತ್ರಿ ಕಪ್ ಯೋಜನೆ ಜಾರಿಗೆ.

ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ 'ಮೈತ್ರಿ ಕಪ್' ವಿತರಣೆ ನೀಡುವ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಿದೆ.

Maitri Menstrual Cup For Girls Student’s: ರಾಜ್ಯದಲ್ಲಿ ಈ ಬಾರಿ ಶೆಕ್ಷಣಿಕ ನೀತಿಯಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಪ್ರಸ್ತುತ ಶಾಲಾ ಮಕ್ಕಳು ಹೊಸ ಶಿಕ್ಷಣ ನೀತಿಯ ಪ್ರಕಾರ ಶಿಕ್ಷಣವನ್ನು ಪಡೆಯುತ್ತಿದ್ದಾರೆ.

ಇನ್ನು ಶಾಲಾ ಮಕ್ಕಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಶಾಲೆಗಲ್ಲಿ ವಿವಿಧ ರೀತಿಯ ಸೌಲಭ್ಯವನ್ನು ನೀಡಲಾಗುತ್ತಿದೆ. ಅನೇಕ ಸೌಲಭ್ಯಗಳ ಜೊತೆಗೆ ಹೆಚ್ಚಿನ ನಿಯಮಗಳನ್ನು ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಶಿಸ್ತಿನ ವಿದ್ಯಾಭ್ಯಾಸ ನೀಡಲಾಗುತ್ತಿದೆ.

Maitri Menstrual Cup For Girls Student's
Image Credit: Timesofindia

ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
ಇನ್ನು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲಾಗುತ್ತದೆ. ಈ ಹಿಂದೆ ಹೆಣ್ಣು ಮಕ್ಕಳ ಆರೋಗ್ಯದ ಕುರಿತು ನಿಗಾ ವಹಿಸಲು ಹೆಣ್ಣು ಮಕ್ಕಳಿಗಾಗಿ ಉಚಿತ ಸ್ಯಾನಿಟರಿ ಪ್ಯಾಡ್ (Sanitary Pad) ಗಳನ್ನೂ ನೀಡಲು ಸರ್ಕಾರ ನಿರ್ಧರಿಸಿತ್ತು.

ರಾಜ್ಯದಲ್ಲಿನ ಎಲ್ಲಾ ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಲಾಗುತ್ತಿದೆ. ಉಚಿತ ಸ್ಯಾನಿಟರಿ ಪ್ಯಾಡ್ ನೀಡುತ್ತಿರುವ ಸರ್ಕಾರ ಇದೀಗ ಇದರ ಬೆನ್ನಲ್ಲೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದಾದ್ಯಂತ ವಿದ್ಯಾರ್ಥಿನಿಯರಿಗಾಗಿ ಮೈತ್ರಿ ಕಪ್ ಯೋಜನೆ ಜಾರಿ
ಹೆಣ್ಣುಮಕ್ಕಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಇದೀಗ ಹೊಸ ಸೌಲಭ್ಯವನ್ನು ನೀಡಲು ಮುಂದಾಗಿದೆ. ಶಾಲೆಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರ (State Government) ಇದೀಗ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ರಾಜ್ಯದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ‘ಮೈತ್ರಿ ಕಪ್’ ವಿತರಣೆ ನೀಡುವ ಬಗ್ಗೆ ಸರ್ಕಾರ ಘೋಷಣೆ ಹೊರಡಿಸಿದೆ.

Join Nadunudi News WhatsApp Group

Maitri Menstrual Cup For Girls Student's
Image Credit: Timesofindia

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಮೈತ್ರಿ ಕಪ್’ ವಿತರಣೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಮುಂದಿನ ತಿಂಗಳಿನಿಂದ ರಾಜ್ಯದ ಎಲ್ಲ ವಿದ್ಯಾರ್ಥಿನಿಯರಿಗೆ ಮೈತ್ರಿ ಕಪ್ ವಿತರಣೆ ಮಾಡುವ ಬಗ್ಗೆ ಘೋಷಣೆ ಹೊರಡಿಸಲಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ 15 ಸಾವಿರ ವಿದ್ಯಾರ್ಥಿನಿಯರಿಗೆ ಮೈತ್ರಿ ಕಪ್ ವಿತರಣೆ ಮಾಡಲಾಗಿದ್ದು, ಸದ್ಯದಲ್ಲೇ ರಾಜ್ಯದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೈತ್ರಿ ಕಪ್ ವಿತರಣೆ ಮಾಡಲಾಗುತ್ತದೆ.

Join Nadunudi News WhatsApp Group