Karnataka Manaswini Scheme Womens Pension: ದೇಶದಲ್ಲಿ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿ ಮಾಡಲು ರಾಜ್ಯ ಹಾಗು ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಕರ್ನಾಟಕದಲ್ಲಿ ಬಡತನದಲ್ಲಿ ಬದುಕುತ್ತಿರುವ ಅನೇಕ ಮಹಿಳೆಯರು ಸಾಮಾಜಿಕ ಮತ್ತು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಮಹಿಳೆಯರಿಗಾಗಿ ಕರ್ನಾಟಕ ರಾಜ್ಯದಲ್ಲಿ ಮನಸ್ವಿನಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಈ ಮನಸ್ವಿನಿ ಯೋಜನೆಯ ಅಡಿಯಲ್ಲಿ ಅರ್ಹ ಮಹಿಳೆಯರು ಮಾಸಿಕವಾಗಿ 800 ರೂಪಾಯಿ ಹಣವನ್ನು ಪಡೆದುಕೊಳ್ಳಬಹುದು. ಹಾಗಾದರೆ ಕರ್ನಾಟಕ ರಾಜ್ಯ ಸರ್ಕಾರದ ಈ ಮನಸ್ವಿನಿ ಯೋಜನೆಗೆ ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಬೇಕಾಗಿರುವ ದಾಖಲೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಮನಸ್ವಿನಿ ಯೋಜನೆ ಎಂದರೇನು?
ಕರ್ನಾಟಕ ರಾಜ್ಯ ಸರ್ಕಾರವು 2013 ರಲ್ಲಿ ಮನಸ್ವಿನಿ ಯೋಜನೆಯನ್ನು ಜಾರಿಗೆ ತಂದಿದೆ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ, ಮತ್ತು ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ನೆರವು ನೀಡುದು ಇದರ ಮುಖ್ಯ ಉದ್ದೇಶ ಆಗಿದೆ. ಈ ಯೋಜನೆಯಡಿ 40 ರಿಂದ 64 ವರ್ಷದೊಳಗಿನ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸುಮಾರು 800 ರೂಪಾಯಿ ಹಣವನ್ನ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ಯೋಜನೆ ಬಡತನದಲ್ಲಿರುವ ನಿರ್ದಿಷ್ಟ ವರ್ಗದ ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡುವ ಕರ್ನಾಟಕದ ಒಂದು ಸಾಮಾಜಿಕ ಭದ್ರತಾ ಯೋಜನೆ.
ಮನಸ್ವಿನಿ ಯೋಜನೆಯ ಅರ್ಹತೆ
* ಕರ್ನಾಟಕದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
* 40 ರಿಂದ 64 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
* ಅವಿವಾಹಿತ ಅಥವಾ ವಿಚ್ಛೇದಿತರಾಗಿರಬೇಕು (ವಿಧವೆಯರಿಗೆ ಬೇರೆ ಯೋಜನೆಗಳಿವೆ)
* BPL ಕಾರ್ಡ್ ಪಡೆದುಕೊಂಡ ಕುಟುಂಬದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
* ಆದಾಯ ಪ್ರಮಾಣ ಪತ್ರ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.
* 64 ವರ್ಷ ದಾಟಿದರೆ ಸ್ವಯಂಚಾಲಿತವಾಗಿ ಹಿರಿಯ ನಾಗರಿಕ ಪಿಂಚಣಿ ಯೋಜನೆಗೆ ಸೇರ್ಪಡೆಯಾಗುತ್ತದೆ.
ಈ ರೀತಿಯಾಗಿ ಅರ್ಜಿ ಸಲ್ಲಿಸಿ
ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಿಮ್ಮ ಹತ್ತಿರದ ಅಟಲ್ ಜೀ ಜನಸ್ನೇಹಿ ಕೇಂದ್ರ, ನಾಡಕಚೇರಿ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಆನ್ಲೈನ್ ಮೂಲಕ, ಅಂದರೆ ಸೇವ ಸಿಂಧೂ ಪೋರ್ಟಲ್ (https://sevasindhuservices.karnataka.gov.in/) ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಯೋಜನೆಯ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
* ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು
* ಭಾವಚಿತ್ರ
* ರೇಷನ್ ಕಾರ್ಡ್
* ಆಧಾರ್ ಕಾರ್ಡ್
* ವಯಸ್ಸು ಪ್ರಮಾಣ ಪತ್ರ
* ವಿವಾಹ ವಿಚ್ಚೇದಿತರು ವಿಚ್ಚೇದನದ ಸ್ವಯಂ ಘೋಷಿತ ಪ್ರಮಾಣ ಪತ್ರ
* ಅವಿವಾಹಿತರು ತಮಗೆ ವಿವಾಹ ಆಗಿಲ್ಲದಿರುವ ಬಗ್ಗೆ ಸ್ವಯಂ ಘೋಷಿತ ಪ್ರಮಾಣ ಪತ್ರ
ಮನಸ್ವಿನಿ ಯೋಜನೆಯ ಪ್ರಯೋಜನಗಳು
* ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 800 ರೂ. ಪಿಂಚಣಿ ನೀಡಲಾಗುತ್ತದೆ. ಅವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ, ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಸಹಾಯವನ್ನು ಸಹ ಒದಗಿಸಲಾಗುತ್ತದೆ.
* ಅವಿವಾಹಿತ, ವಿಧವೆ ಮತ್ತು ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆಯನ್ನು ಒದಗಿಸುತ್ತದೆ.
* ಅವರಿಗೆ ಸಾಮಾಜಿಕ ಭದ್ರತೆ ಮತ್ತು ಗೌರವದ ಭಾವನೆಯನ್ನು ನೀಡುತ್ತದೆ.
* ಸಮಾಜದಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
Disclaimer: This information is provided for awareness purposes only. For personalised legal advice, consult a qualified professional and refer to official government notifications.

