Maruti Suzuki Ignis: ಕೇವಲ 5 ಲಕ್ಷಕ್ಕೆ 20km ಮೈಲೇಜ್ ನ ಕಾರ್, ಪುಟ್ಟ ಕುಟುಂಬಕ್ಕೆ ಬೆಸ್ಟ್ ಕಾರ್.
ಕೇವಲ 5 ಲಕ್ಷಕ್ಕೆ 20km ಮೈಲೇಜ್ ನ ಕಾರ್
Maruti Suzuki Ignis Price And Feature: ಸಾಮಾನ್ಯವಾಗಿ ಕಾರು ಖರೀದಿಸುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ. ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ವರೆಗೆ ಕಾರುಗಳು ಮಾರುಕಟ್ಟೆಯಲ್ಲಿ ಬಿಡುಗಡೆಯಾಗುತ್ತಿವೆ. Maruti Suzuki ಇದೀಗ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಹೊಸ ಹೊಸ ಕಾರ್ ಗಳನ್ನೂ ಬಿಡುಗಡೆ ಮಾಡುತ್ತಿವೆ.
ಈಗಾಗಲೇ ಮಾರುತಿ ತನ್ನ ಹೊಸ ಹೊಸ ಮಾದರಿಯ ಕಾರ್ ಅನ್ನು ಬಿಡುಗಡೆ ಮಾಡುವ ಮೂಲಕ ವಿವಿಧ ಕಂಪನಿಗಳಿಗೆ ಪೈಪೋಟಿ ನೀಡುತ್ತಿದೆ. ಸದ್ಯ ದೇಶದ ಅತಿ ದೊಡ್ಡ ಕಾರ್ ತಯಾರಕ ಕಂಪೆನಿಗಳಲ್ಲಿ ಒಂದಾದ ಮಾರುತಿ ಸುಜುಕಿ ಹೊಸ ತನ್ನ Maruti suzuki Ignis ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ನೀವು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರುತಿ ಇಗ್ನಿಸ್ ಮಾದರಿಯನ್ನು ಖರೀದಿಸಬಹುದು.
ಪುಟ್ಟ ಕುಟುಂಬಕ್ಕೆ ಬೆಸ್ಟ್ ಕಾರ್
ಸದ್ಯ ಮಾರುಕಟ್ಟೆಯಲ್ಲಿ ಹೊಸ ಮಾರುತಿ ಸುಜುಕಿ ಇಗ್ನಿಸ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. Maruti suzuki Ignis ರೂ. 5.49 ಲಕ್ಷದಿಂದ ರೂ 8.06 ಲಕ್ಷದವರೆಗೆ ಎಕ್ಸ್ ಶೋರೂಂನಲ್ಲಿ ಪ್ರಾರಂಭವಾಗುತ್ತದೆ. ಇದು ಸಿಗ್ಮಾ, ಡೆಲ್ಟಾ, ಝೀಟಾ ಮತ್ತು ಆಲ್ಫಾ ರೂಪಾಂತರಗಳ ಆಯ್ಕೆಯನ್ನು ಸಹ ಪಡೆಯುತ್ತದೆ. ಈ ಇಗ್ನಿಸ್ ಕಾರು ಶಕ್ತಿಶಾಲಿ ಪವರ್ ಟ್ರೈನ್ ಹೊಂದಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 PS ಗರಿಷ್ಠ ಶಕ್ತಿ ಮತ್ತು 113 Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಇಗ್ನಿಸ್ ಮಾದರಿಯು 20.89 kmpl ವರೆಗೆ ಮೈಲೇಜ್ ನೀಡುತ್ತದೆ.
ಕೇವಲ 5 ಲಕ್ಷಕ್ಕೆ 20km ಮೈಲೇಜ್ ನ ಕಾರ್
ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್ ಬ್ಯಾಕ್ 5 ಸೀಟ್ ಆಯ್ಕೆಗಳನ್ನು ಹೊಂದಿದೆ. ಇದು ಪ್ರಯಾಣಿಸುವಾಗ ಹೆಚ್ಚಿನ ಲಗೇಜ್ ಅನ್ನು ಸಾಗಿಸಲು 260 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಒಳಗೊಂಡಿದೆ. Nexa Blue, Lucent Orange, Silky Silver, Turquoise Blue, Glistening Grey, Pearl Arctic White ಸೇರಿದಂತೆ ಹಲವು ಬಣ್ಣಗಳಲ್ಲಿ ಲಭ್ಯವಿದೆ. ಈ ಕಾರು ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸ್ವಯಂಚಾಲಿತ ಹವಾಮಾನ ನಿಯಂತ್ರಣ, ಎತ್ತರ ಹೊಂದಾಣಿಕೆ ಡ್ರೈವರ್ ಸೀಟ್, ಎಲ್‌ಇಡಿ ಪ್ರೊಜೆಕ್ಟರ್ ಹೆಡ್ ಲೈಟ್ ಮತ್ತು ಡಿಆರ್ ಎಲ್ ಗಳನ್ನು ಪಡೆಯುತ್ತದೆ. ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ನೀಡುತ್ತದೆ. ಇದು ಮುಂಭಾಗದ ಡ್ಯುಯಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಹಿಂಭಾಗದ ಪಾರ್ಕಿಂಗ್ ಸಂವೇದಕಗಳನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಇಗ್ನಿಸ್ ಟಾಟಾ ಟಿಯಾಗೊಗೆ ದೊಡ್ಡ ಪ್ರತಿಸ್ಪರ್ಧಿಯಾಗಲಿದೆ.