Swift 2023: ಕಡಿಮೆ ಬೆಲೆಗೆ ಬೈಕ್ ಗಿಂತ ಹೆಚ್ಚು ಮೈಲೇಜ್ ಕೊಡುವ ಸ್ವಿಫ್ಟ್ ಕಾರ್ ಲಾಂಚ್, ಒಂದೇ ದಿನದಲ್ಲಿ 1 ಲಕ್ಷ ಬುಕಿಂಗ್.
ಬೈಕ್ ನಂತೆ ಹೆಚ್ಚಿನ ಮೈಲೇಜ್ ನೀಡಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರ್
Maruti Suzuki Swift Car Launch: ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ (Maruti Suzuki) ಕಂಪನಿಯ ಕಾರುಗಳು ಅತಿ ಹೆಚ್ಚು ಬೇಡಿಕೆಯಿರುವ ಕಾರ್ ಗಳಾಗಿವೆ. ಇನ್ನು ಮಾರುತಿ ಸ್ವಿಫ್ಟ್ ಕಾರ್ ಗಳ ಬೇಡಿಕೆಗೆ ಅನುಗುಣವಾಗಿ ಮಾರಾಟ ಕೂಡ ಹೆಚ್ಚುತ್ತಿದೆ. ಮಾರುತಿ ಸ್ವಿಫ್ಟ್ ಕಾರ್ (Maruti Swift Car) ಗಳು ಅತಿ ಆಕರ್ಷಣೀಯವಾಗಿದ್ದು ಗ್ರಾಹಕರಿಗೆ ಹೆಚ್ಚಿನ ಮೈಲೇಜ್ ನೀಡುತ್ತದೆ.
ಮಾರುತಿ ಸುಜುಕಿ ಕಂಪನಿ ಅತಿ ಕಡಿಮೆ ಬೆಲೆಯಲ್ಲಿ ಮಾರುತಿ ಸ್ವಿಫ್ಟ್ ಕಾರನ್ನು ಬಿಡುಗಡೆ ಮಾಡಿದೆ. ಗ್ರಾಹಕರು ಬಜೆಟ್ ಬೆಲೆಯಲ್ಲಿ ಸ್ವಿಫ್ಟ್ ಕಾರನ್ನು ಖರೀದಿಸಬಹುದಾಗಿದೆ. ಹೊಸ ಮಾದರಿಯ ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಮಾರುತಿ ಸುಜುಕಿ ಸಂಪೂರ್ಣ ತಯಾರಿಯಲ್ಲಿದೆ.
ಜನಪ್ರಿಯ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ
ಶಕ್ತಿಯುತ ಎಂಜಿನ್ ಮತ್ತು ವಿವಿಧ ಸುಧಾರಿತ ವೈಶಿಷ್ಟ್ಯಗಳನ್ನು ಅಳವಡಿಸಿರುವ ಮಾರುತಿ ಸುಜುಕಿ ಸ್ವಿಫ್ಟ್ ಗ್ರಾಹಕರಿಗೆ ಇಷ್ಟವಾಗಲಿದೆ. ಕಂಪನಿಯು ಶೀಘ್ರದಲ್ಲೇ ಹೊಸ ರೂಪಾಂತರದಲ್ಲಿ ಅತ್ಯಂತ ಜನಪ್ರಿಯ ಕಾರು ಸ್ವಿಫ್ಟ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಕಾರಿನಲ್ಲಿ ಹೊಸ ಎಂಜಿನ್ ಜೊತೆಗೆ 35 ಕಿ.ಮೀ.ಗೂ ಹೆಚ್ಚು ಮೈಲೇಜ್ ನೀಡುವುದನ್ನು ಕಾಣಬಹುದಾಗಿದೆ. ಮಾರುತಿ ಸುಜುಕಿ ಸ್ವಿಫ್ಟ್ ಸದ್ಯದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡುವ ಸಾಧ್ಯತೆ ಇದೆ.
ಬೈಕ್ ನಂತೆ ಹೆಚ್ಚಿನ ಮೈಲೇಜ್ ನೀಡಲಿದೆ ಹೊಸ ಸ್ವಿಫ್ಟ್ ಕಾರ್
ಮಾರುತಿ ಸುಜುಕಿ ಸ್ವಿಫ್ಟ್ ನಲ್ಲಿ ಅತ್ಯಂತ ಶಕ್ತಿಶಾಲಿ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಹೊಸ ಸ್ವಿಫ್ಟ್‌ನಲ್ಲಿ 1.2 ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಒದಗಿಸಿದೆ. ಇದರಲ್ಲಿ ಅಳವಡಿಸಲಾದ ಹೈಬ್ರಿಡ್ ತಂತ್ರಜ್ಞಾನದಿಂದ ಈ ಕಾರು 35 ರಿಂದ 40 kmpl ಮೈಲೇಜ್ ನೀಡುತ್ತದೆ.
ಇನ್ನು ಕಂಪನಿಯು ಮಾರುತಿ ಸುಜುಕಿ ಸ್ವಿಫ್ಟ್ ನ ಬೆಲೆಯ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿಲ್ಲ. ಆದರೆ ಹಳೆಯ ಮಾದರಿಯ ಕಾರ್ ಗಿಂತ ಇದರಲ್ಲಿ ಹೆಚ್ಚಿನ ಸುಧಾರಿತ ವೈಶಿಷ್ಟ್ಯಗಳನ್ನು ಅಳವಡಿಸಿರುವ ಕಾರಣ 5.99 ರಿಂದ 9.03 ಲಕ್ಷ ಹಣವನ್ನು ನಿಗದಿಪಡಿಸಬಹುದು ಎಂದು ಅಂದಾಜಿಸಲಾಗಿದೆ. ಇನ್ನು 2024 ರ ಫೆಬ್ರವರಿ ವೇಳೆಯಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎಂದು ಕಂಪನಿಯು ಅಧಿಕೃತ ಘೋಷಣೆ ಹೊರಡಿಸಿದೆ.