Mask Mandatory In Bus: ಕೊರೋನಾ ಹೆಚ್ಚಾದ ಕಾರಣ ಬಸ್ಸಿನಲ್ಲಿ ಪ್ರಯಾಣಿಸುವವರಿಗೆ ಹೊಸ ನಿಯಮ, ರಾಜ್ಯ ಸರ್ಕಾರದ ಆದೇಶ.

Corona Virus Information: ದೇಶದಲ್ಲಿ ಕೊರೋನಾ ಭೀತಿಯಿಂದಾಗಿ ಸಾಕಷ್ಟು ಜನರು ಕಂಗಾಲಾಗಿ ಹೋಗಿದ್ದಾರೆ.  ಹಿಂದೆ ಬಂದಿರುವ ಕೊರೋನಾ ವೈರಸ್ (Corona Virus) ನಿಂದ ದೇಶದಲ್ಲಿ ಸಾಕಷ್ಟು ಜನರು ಈ ಕಾಯಿಲೆಗೆ ತುತ್ತಾಗಿ ಜೀವನ್ಮರಣ ಹೋರಾಟ ನಡೆಸಿದ್ದರು. ಇದೀಗ ದೇಶದಲ್ಲಿ ಮತ್ತೆ ಕೊರೋನಾ ಭೀತಿ ಶುರು ಆಗುತ್ತಿದೆ.

Due to the increase in Corona, new rule for bus passengers, state government order.
Image Credit: moneycontrol

ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ
ಚೀನಾ ಸೇರಿದಂತೆ ಹಲವು ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕೊರೋನಾ ಆತಂಕ ಶುರುವಾಗಿದೆ. ಹೀಗಾಗಿ ಬಿಎಂಟಿಸಿ, ಕೆಎಸ್ ಆರ್ ಟಿಸಿ (KSRTC) ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ (BMTC) ಮತ್ತು ಕೆಎಸ್ ಆರ್ ಟಿಸಿ (KSRTC) ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಇಲಾಖೆ ಆದೇಶ ಹೊರಡಿಸಿದೆ.

Masks are mandatory in Bengaluru due to the increasing number of corona infections
Image Credit: ndtv

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ
ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊರೋನಾ ರೂಪಾಂತರಿ ತಳಿ BF .7 ಆತಂಕ ಹಿನ್ನಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಬಸ್ ಗಳ ಕಂಡಕ್ಟರ್ , ಡ್ರೈವರ್, ಪ್ರಯಾಣಿಸುಯುವವರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್ ಲೈನ್ ಬಿಡುಗಡೆ ಮಾಡಲಿದೆ.

ಇಂದಿನಿಂದ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಒಂದು ವೇಳೆ ಮಾಸ್ಕ್ ಹಾಕಿಲ್ಲ ಅಂದರೆ ಬಸ್‌ ಗೆ ಹೋಗಲು ಅವಕಾಶ ನೀಡಲ್ಲ ಎಂದು ಸಾರಿಗೆ ಇಲಾಖೆ ಸೂಚನೆ ನೀಡಿದೆ.

Join Nadunudi News WhatsApp Group

Due to the increasing number of corona cases in India, masks are mandatory on the bus in Bangalore.
Image Credit: ndtv

ಮೋದಿ ಜನತೆಗೆ ನೀಡಿದ ಮಾಹಿತಿ
ನರೇಂದ್ರ ಮೋದಿ ದೇಶದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಳ್ಳುತಿದ್ದಾರೆ. ಅದೇ ರೀತಿ ಕೊರೋನಾ ಸಂದರ್ಭದಲ್ಲೂ ಅದನ್ನು ಎದುರಿಸಲು ಸಾಕಷ್ಟು ಪಣ ತೊಟ್ಟಿದ್ದರು. ಮೊನ್ನೆಯಷ್ಟೇ ನಡೆದ ಸಭೆಯಲ್ಲಿ ನರೇಂದ್ರ ಮೋದಿ (Narendra Modi) ಜನರಿಗೆ ಅನಗತ್ಯವಾಗಿ ಕೊರೋನಾ ಬಗ್ಗೆ ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Join Nadunudi News WhatsApp Group