Menstrual Leave: ಮಹಿಳಾ ನೌಕರರಿಗೆ ಪ್ರತಿ ತಿಂಗಳು ಮುಟ್ಟಿನ ರಜೆ, ಮಹತ್ವದ ಯೋಜನೆಯತ್ತ ಸಿದ್ದರಾಮಯ್ಯ ಸರ್ಕಾರ.

ಮಹಿಳಾ ನೌಕರರಿಗೆ ಮುಟ್ಟಿನ ರ್ಜೆ ನೀಡುವುದರ ಬಗ್ಗೆ ಸಿದ್ದರಾಮಯ್ಯ ಅವರು ಚರ್ಚೆ ಮಾಡುತ್ತಿದ್ದಾರೆ.

CM Siddaramaiah: ಸಿಎಂ ಸಿದ್ದರಾಮಯ್ಯ (Siddaramaiah)ಸರ್ಕಾರೀ ಮಹಿಳಾ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ನಿನ್ನೆ ನಗರದಲ್ಲಿ ಜನಮ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಭುದ್ದ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

Siddaramaiah has decided to implement a new scheme in the state for the health of women in the state.
Image Credit: deccanherald

ಸರ್ಕಾರೀ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ರಾಜ್ಯದ ಸರ್ಕಾರೀ ಮಹಿಳಾ ನೌಕರರಿಗೆ ಪಿರಿಯಡ್ಸ್ ಸಂದರ್ಭದಲ್ಲಿ ರಜೆ ನೀಡುವ ಬಗ್ಗೆ ಹಲವು ದಿನಗಳಿಂದ ಬೇಡಿಕೆಯನ್ನು ಸರ್ಕಾರಕ್ಕೆ ಇಡಲಾಗಿದೆ. ಈ ಬಗ್ಗೆ ಶೀಘ್ರವೇ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಅನ್ನುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಸರ್ಕಾರೀ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಅನೇಕ ಯೋಜನೆಗಳನ್ನು ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ
ಇನ್ನು ಮೊನ್ನೆಯಷ್ಟೇ ವಿಧಾನಸಭೆಯ ಮಂಡನೆ ಸಭೆಯಲ್ಲಿ ಅನೇಕ ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಸರ್ಕಾರೀ ಅನುದಾನಿತ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಮಾಡಲಾಗುವುದು. ಈ ಮೊದಲು ವಾರದಲ್ಲಿ ಒಂದು ದಿನ ನೀಡುತ್ತಿದ್ದ ಮೊಟ್ಟೆಯನ್ನು ಎರಡು ದಿನ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Now the state government is discussing to give period leave to women every month.
Image Credit: ndtv

ಸಿದ್ದರಾಮಯ್ಯ ಬಜೆಟ್ ಮಂಡಿಸಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸರ್ಕಾರೀ ಹಾಗು ಅನುದಾನಿತ ಶಾಲಾ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಚಿಕ್ಕಿ, ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇದಲ್ಲದೆ ರಾಜ್ಯದ ರೈತರಿಗೆ ಮೊದಲು 3 ಲಕ್ಷದ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿತ್ತು. ಈ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದಲ್ಲದೇ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗುತ್ತದೆ. ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದ ವರೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದರು.

Join Nadunudi News WhatsApp Group

Join Nadunudi News WhatsApp Group