Rain Alert: ಮುಂದಿನ 48 ಘಂಟೆಗಳ ಕಾಲ ಈ ಭಾಗದಲ್ಲಿ ಆಗಲಿದೆ ಭಯಂಕರ ಮಳೆ, ರೆಡ್ ಅಲರ್ಟ್ ಘೋಷಣೆ.

ಮುಂದಿನ 48 ಗಂಟೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದೆಯೆಂದು ಮಾಹಿತಿ ನೀಡಿದ ಹವಾಮಾನ ಇಲಾಖೆ.

Rain Alert Update: ಹಲವು ದಿನಗಳಿಂದ ಜನರು ಬೇಸಿಗೆ ದಿನದ ಸುಡು ಬಿಸಿಲಿನಿಂದ ತತ್ತರಿಸಿದ್ದರು. ಇದೀಗ ಮಳೆಗಾಲ ಆರಂಭವಾಗಲು ಶುರುವಾಗಿದೆ. ಈಗಾಗಲೇ ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆರ್ಭಟ ಶುರುವಾಗಿದೆ. ಆದರೆ ಇನ್ನು ಕೆಲವು ಭಾಗಗಳಲ್ಲಿ ಮಳೆ ಬಂದಿಲ್ಲ. ಇನ್ನುಮುಂದೆ ಸಹ ವರುಣನ ಆರ್ಭಟ ಹೆಚ್ಚಾಗಲಿದೆಯೆಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Meteorological Department has issued a warning about rain
Image Credit: firstpost

ಮಳೆಯ ಬಗ್ಗೆ ಸೂಚನೆ ನೀಡಿದ ಹವಾಮಾನ ಇಲಾಖೆ
ಕರಾವಳಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ವರೆಗೆ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯೂ ಗಂಟೆಗೆ 40 ರಿಂದ 50 ಕಿಮಿಯಿಂದ 60 ಕಿ. ಮೀ ವೇಗದಲ್ಲಿ ಬೀಸುವ ವಾತಾವಾರಣವಿರುತ್ತದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆರಾಯನ ಆಗಮನಕ್ಕೆ ಕಾಯುತ್ತಿರುವ ರೈತರು
ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗಿದ್ದು ರಾಜ್ಯದ ರೈತರನ್ನು ಚಿಂತೆಗೀಡು ಮಾಡಿದೆ. ಹೊಲಗಳನ್ನು ಬಿತ್ತನೆಗೆ ಅಣಿಗೊಳಿಸಿರುವ ಅನ್ನದಾತರು ಬೀಜ ಗೊಬ್ಬರ ಖರೀದಿಸಿ ಆಕಾಶದತ್ತ ಮುಖ ಮಾಡಿ ಮಳೆರಾಯನ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

Meteorological Department has issued a warning about rain
Image Credit: timesofindia

ಇದೀಗ ರಾಜ್ಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಮುಂದಿನ 48 ಗಂಟೆಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ. ಮೀ. ತಲುಪುವ ಸಾಧ್ಯತೆ ಇದೆ ಎಂದು ಹೇಳಿದೆ.

Join Nadunudi News WhatsApp Group

Join Nadunudi News WhatsApp Group