Mid day Meal: ಶಾಲಾ ಮಕ್ಕಳ ಊಟದ ನಿಯಮದಲ್ಲಿ ಬದಲಾವಣೆ ಮಾಡಿದ ಸಿದ್ದರಾಮಯ್ಯ, ಎಲ್ಲಾ ಮಕ್ಕಳಿಗೂ ಅನ್ವಯ

ಇನ್ನುಮುಂದೆ ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ

Mid day Meal Scheme: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸರ್ಕಾರಿ ಶಾಲಾ ಮಕ್ಕಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಸದ್ಯ ಶಾಲಾ ಮಕ್ಕಳು ಸರ್ಕಾರದ ಸಾಕಷ್ಟು ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಇದೀಗ ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ.

Mid day Meal Scheme
Image Credit: Pratidhvani

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆ ಮೊಟ್ಟೆ
ಸರ್ಕಾರೀ ಶಾಲಾ ಮಕ್ಕಳಿಗೆ ಸರ್ಕಾರ ವಿವಿಧ ಸೌಲಭ್ಯವನ್ನು ನೀಡುತ್ತಿದೆ. ಈಗಾಗಲೇ ಮಕ್ಕಳಿಗೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಮಾಡಿಕೊಡಲಾಗಿತ್ತು. ಈ ಹಿಂದೆ ಈ ಸೌಲಭ್ಯವನ್ನು ಸರ್ಕಾರ ಮತ್ತಷ್ಟು ವಿಸ್ತರಿಸಿ 8 ನೇ ತರಗತಿ ವರೆಗೆ ವಾರದಲ್ಲಿ ಒಮ್ಮೆ ಮೊಟ್ಟೆಯನ್ನು ನೀಡಲಾಗುತಿತ್ತು. ಆದರೆ ಈಗ ನಮ್ಮ ಸರ್ಕಾರ ಬಂದ ನಂತರ ವಾರಕ್ಕೆ ಎರಡು ಬಾರಿ ಮೊಟ್ಟೆಯನ್ನು 10 ನೇ ತರಗತಿ ವರೆಗೆ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

Mid-day Meal For School Children
Image Credit: Hindustan Times

ಇನ್ನುಮುಂದೆ ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಬಿಸಿಯೂಟ
ಇನ್ನುಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ಕೂಡ ಬಿಸಿಯೂಟ ನೀಡಲಾಗುತ್ತದೆ. ಹೌದು ಇದೀಗ ಸರ್ಕಾರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರೀ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನೆಡೆಸುತ್ತಿದೆ.

ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸದ್ಯ CM ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನೆಡೆಸಿ ಶಾಲಾ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿಯೂ ಬಿಸಿಯೂಟ ಮುಂದುವರೆಸಲು ಅನುಮೋದನೆ ಪಡೆದ ಬಳಿಕ ಆದೇಶ ಹೊರಡಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group