SSY Deadline: ಸುಕನ್ಯಾ ಸಮೃದ್ಧಿ ಖಾತೆ ಇದ್ದವರು ಮಾರ್ಚ್ 31 ರೊಳಗೆ ಈ ಕೆಲಸ ಮಾಡಿ, ಇಲ್ಲವಾದರೆ ಖಾತೆ ಕ್ಲೋಸ್.
ಸುಕನ್ಯಾ ಸಮೃದ್ಧಿ ಖಾತೆ ಇದ್ದವವರಿಗೆ ಹೊಸ ರೂಲ್ಸ್ ಜಾರಿ
Minimum Balance Mandatory In SSY Account: ಕೇಂದ್ರ ಸರ್ಕಾರದ ಸಾಕಷ್ಟು ಯೋಜನೆಗಳಲ್ಲಿ Sukanya Samriddhi Yojana ಕೂಡ ಒಂದಾಗಿದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಪೋಷಕರು ತಮ್ಮ ಹೆಣ್ಣು ಮಗುವಿನ ಹೆಸರಿನಲ್ಲಿ ಹೂಡಿಕೆಯನ್ನು ಆರಂಭಿಸಿದ್ದಾರೆ. ನಿಮ್ಮ ಮನೆಯ ಹೆಣ್ಣು ಮಗಳ ವಿದ್ಯಾಭ್ಯಾಸ, ಮದುವೆಗೆ ಸಹಾಯವಾಗಲು ಈ SSY ಯೋಜನೆ ಸಹಾಯವಾಗಲಿದೆ.
ಹೆಣ್ಣುಮಕ್ಕಳ ಉತ್ತಮ ಭವಿಷ್ಯಕ್ಕಾಗಿ SSY ಉತ್ತಮ ಆಯ್ಕೆ ಎನ್ನಬಹುದು. ಸದ್ಯ ಕೇಂದ್ರ ಸರ್ಕಾರ SSY ಹೂಡಿಕೆದಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ. SSY ಹೂಡಿಕೆದಾರರು ಈ ನಿಯಮವನ್ನು ಪಾಲಿಸುವುದು ಕಡ್ಡಾಯವಾಗಿದೆ. ನಿಗದಿತ ಸಮಯದೊಳಗೆ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳದಿದ್ದರೆ ನಿಮ್ಮ ಖಾತೆ ನಿಷ್ಕ್ರಿಯವಾಗಬಹುದು ಎಚ್ಚರ.
![SSY Latest News Update](https://nadunudi.in/wp-content/uploads/2024/02/SSY-Latest-News-Update.png)
ಸುಕನ್ಯಾ ಸಮೃದ್ಧಿ ಖಾತೆ ಇದ್ದವರು ಮಾರ್ಚ್ 31 ರೊಳಗೆ ಈ ಕೆಲಸ ಮಾಡಿ
ಸದ್ಯ ಕೇಂದ್ರದಿಂದ ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಹೊಸ ರೂಲ್ಸ್ ಜಾರಿಯಾಗಿದೆ. Sukanya Samriddhi Yojana (SSY) ಖಾತೆಯನ್ನು ಸಕ್ರಿಯವಾಗಿಡಲು ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಹೊಸ ನಿಯಮವೂ ಜಾರಿಗೆ ಬಂದಿದೆ.
ಮಾರ್ಚ್ 31, 2024 ರ ವರೆಗೆ ಈ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಖಾತೆದಾರರು ತನ್ನ ಬ್ಯಾಲೆನ್ಸ್ ಅನ್ನು ನಿರ್ವಹಿಸದಿದ್ದರೆ ಅಂತವರ ಖಾತೆಯು ನಿಷ್ಕ್ರಿಯವಾಗಬಹುದು. ನಿಷ್ಕ್ರಿಯ ಖಾತೆಯನ್ನು ಪುನಃ ತೆರೆಯಲು, ಖಾತೆದಾರರು ದಂಡವನ್ನು ಪಾವತಿಸಬೇಕಾಗುತ್ತದೆ. ಇದೀಗ ನಾವು ಸುಕನ್ಯಾ ಸಮೃದ್ಧಿ ಖಾತೆಯಲ್ಲಿ ನಿರ್ವಹಿಸಬೇಕಾದ ಕನಿಷ್ಠ ಬ್ಯಾಲೆನ್ಸ್ ಎಷ್ಟು..? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
![Minimum Balance Mandatory In SSY Account](https://nadunudi.in/wp-content/uploads/2024/02/Minimum-Balance-Mandatory-In-SSY-Account.png)
ನಿಮ್ಮ SSY ಖಾತೆಯಲ್ಲಿ ಇಷ್ಟು ಹಣ ಇಲ್ಲವಾದರೆ ಖಾತೆ ಕ್ಲೋಸ್
ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಕನಿಷ್ಠ ಬ್ಯಾಲೆನ್ಸ್ 250 ರೂ. ಆಗಿದೆ. ಅಂದರೆ ಖಾತೆಯನ್ನು ಸಕ್ರಿಯವಾಗಿಡಲು ಆರ್ಥಿಕ ವರ್ಷದಲ್ಲಿ 250 ರೂ. ಗಳನ್ನು ಹೂಡಿಕೆ ಮಾಡುವುದು ಅಗತ್ಯ. ನೀವು ಈ ಯೋಜನೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಹೂಡಿಕೆ ಮಾಡದಿದ್ದರೆ ಖಾತೆಯನ್ನು ಫ್ರೀಜ್ ಮಾಡಲಾಗುತ್ತದೆ. ಖಾತೆಯನ್ನು ಮತ್ತೆ ಸಕ್ರಿಯಗೊಳಿಸಲು ಖಾತೆದಾರನು ವರ್ಷಕ್ಕೆ 50 ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ ಎನ್ನುವುದು ನಿಮಗೆ ತಿಳಿದಿರಲಿ.