Temple Rules: ಇನ್ನುಮುಂದೆ ದೇವಸ್ಥಾನಕ್ಕೆ ಹೋಗುವವರಿಗೆ ಹೊಸ ನಿಯಮ, ಈ ತಪ್ಪಿಗೆ ಕಟ್ಟಬೇಕು ದಂಡ.
ದೇವಸ್ಥಾನಕ್ಕೆ ಬರುವ ಭಕ್ತರಿಗೆ ಈಗ ಹೊಸ ನಿಯಮವನ್ನ ಜಾರಿಗೆ ತಂದಿದೆ.
Cell Phone Use Temple: ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೆಚ್ಚಿನ ಜನರು ಹೋಗುತ್ತಾರೆ. ದೇವರಲ್ಲಿ ತಮ್ಮ ಪ್ರಾರ್ಥನೆಯನ್ನ ಇಟ್ಟು ಆಶೀರ್ವಾದವನ್ನ ಪಡೆದುಕೊಳ್ಳುತ್ತಾರೆ. ಇನ್ನು ಕೆಲವು ಜನರು ದೇವಸ್ಥಾನಕ್ಕೆ ಶೋಕಿ ಮಾಡಲು ಬರುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ.
ದೇವರಿಗೆ ನಮಸ್ಕರಿಸುವುದನ್ನ ಬಿಟ್ಟು ಜನರು ಬೇರೆ ಕೆಲಸದಲ್ಲಿಯೇ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಇನ್ನು ಈಗ ಸರ್ಕಾರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹೊಸ ನಿಯಮವನ್ನ ಜಾರಿಗೆ ತಂದಿದೆ.
ದೇವಸ್ಥಾನದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಿದ ಸರ್ಕಾರ
ದೇವಸ್ಥಾನದಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಇನ್ನುಮುಂದೆ ಕರ್ನಾಟಕದ ದೇವಾಲಯದ ಒಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಇದೆ ಸೋಮವಾರ ಈ ವಿಚಾರದ ಕುರಿತು ಹಿಂದೂ ಧಾರ್ಮಿಕ ಹಾಗು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆ ವ್ಯಾಪ್ತಿಯ ಆವರಣದಲ್ಲಿ ಮೊಬೈಲ್ ಬಳಕೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸರ್ಕಾರದ ಆದೇಶ ಹೀಗಿದೆ
ಇನ್ನು ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ದೇವಾಲಯಗಳಿವೆ. ದೇವಾಲಯವನ್ನು ಆದಾಯಕ್ಕೆ ಅನುಗುಣವಾಗಿ ಎ, ಬಿ ಮತ್ತು ಸಿ ಎಂದು ವಿಂಗಡಣೆ ಮಾಡಲಾಗಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಕೆಪಿ ಹೇಮಂತರಾಜು ಅವರು ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆಯ ಶಬ್ದಗಳಿಂದ ಹಾಗು ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಧ್ಯಾನ, ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ ಎಂದಿದ್ದಾರೆ.
ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ದೇವಾಲಯಗಳಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ನಿಷೇಧ ಮಾಡಲಾಗುತ್ತಿದೆ ಎಂಬ ಸೂಚನಾ ಫಲಕಗಳನ್ನು ಅಳವಡಿಸಬೇಕು.
ಈ ಮೂಲಕ ದೇವಾಲಯಗಳಿಗೆ ಬರುವ ಭಕ್ತಾದಿಗಳು ದೇವಾಲಯದ ಒಳಗೆ ನೆಮ್ಮದಿಯಿಂದ ದೇವರ ದರ್ಶನ ಮಾಡಿಕೊಂಡು ಹೋಗಲು ಅವಕಾಶ ನೀಡುವಂತೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ.