Modi Tweet: ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ.

ಬಲರಾಮನ ನಿಧನಕ್ಕೆ ಪ್ರಧಾನಿ ಮೋದಿ ಅವರು ಟ್ವೀಟ್ ನ ಮೂಲಕ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿಯೇ ಮೋದಿ ಸಂತಾಪ ಸೂಚಿಸಿದ್ದಾರೆ.

PM Narendra Modi: ಮೈಸೂರಿಂದ ದಸರಾ ಜಂಬೂಸವಾರಿಗೆ ಕರ್ನಾಟಕದಲ್ಲಿ ವಿಶೇಷ ಮಹತ್ವವಿದೆ. ಇನ್ನು ಮೈಸೂರು ದಸರಾದಲ್ಲಿ ಗಜರಾಜ ಬಲರಾಮ ಹೆಚ್ಚು ಪ್ರಮುಕನಾಗಿದ್ದನು. 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ (Balarama) ಆನೆ ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ಬಲರಾಮನ ನಿಧನಕ್ಕೆ ಪ್ರಧಾನಿ ಮೋದಿ ಅವರು ಟ್ವೀಟ್ ನ ಮೂಲಕ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿಯೇ ಮೋದಿ ಸಂತಾಪ ಸೂಚಿಸಿದ್ದಾರೆ.

balarama is no more
Image Credit: twitter

ಬಲರಾಮನ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
“ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿ ಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖ್ಖವಾಗಿದೆ” ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ನ ಮೂಲಕ ಬಲರಾಮನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

PM Narendra Modi About Balarama Elephant
Image Credit: oneindia

ಆನೆಯ ಅಗಲಿಕೆಗೆ ಸಿದ್ದರಾಮಯ್ಯ ಸಂತಾಪ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೂಡ ಬಲರಾಮನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಮೈಸೂರು ದಸರಾದ ಕೇಂದ್ರ ಬಿಂದುವಾದ ಜಂಬೂಸವಾರಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲ ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಜನರ ಪ್ರೀತಿಪಾತ್ರಾನಾಗಿದ್ದ ಆನೆ ‘ಬಲರಾಮ’ ಇನ್ನಿಲ್ಲ ಎಂಬ ಸುದ್ದಿ ತಿಳಿದು ನೋವಾಯಿತು. 14 ಬಾರಿ ಚಿನ್ನದ ಅಂಬಾರಿ ಹೊರುವ ಮೂಲಕ ತಾಯಿ ಚಾಮುಂಡೇಶ್ವರಿಯ ಸೇವೆಗೈದಿದ್ದ ಬಲರಾಮ ಇಂದು ನಮ್ಮ ನಡುವೆ ಇಲ್ಲದಿದ್ದರೂ, ಅವನ ನೆನಪು ನಮ್ಮ ಮನದಲ್ಲಿ ಶಾಶ್ವತವಾಗಿರಲಿದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Join Nadunudi News WhatsApp Group

PM Narendra Modi tweet
Image Source: Oneindia kannada

Join Nadunudi News WhatsApp Group