Mohammed Shami: ಈ ಕಾರಣಕ್ಕೆ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ನಿಂದ ಹೊರಬಿದ್ದ ಮೊಹಮ್ಮದ್ ಶಮಿ, ಬೇಸರದಲ್ಲಿ ಕ್ರಿಕೆಟ್ ಫ್ಯಾನ್ಸ್

ಗಾಯದ ಕಾರಣ ದಕ್ಷಿಣ ಆಫ್ರಿಕಾ ಟೆಸ್ಟ್ ಪಂದ್ಯದಿಂದ ಹೊರಬಂದ ಮೊಹಮ್ಮದ್ ಶಮಿ

Mohammed Shami out from South Africa Test: India ಹಾಗೂ South Africa ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ December 26 ರಿಂದ ಆರಂಭವಾಗಲಿದೆ. ಭಾರತ ತಂಡದಡಲ್ಲಿ ಸಾಕಷ್ಟು ಅನುಭವಿ ಆಟಗಾರರು ಈ ಬಾರಿ ಕಣಕ್ಕಿಳಿದಿದ್ದಾರೆ. ಪ್ರಸ್ತುತ ಎರಡು ತಂಡಗಳು T20 ಕ್ರಿಕೆಟ್ ಸರಣಿಯಲ್ಲಿ ಕಾದಾಟ ನಡೆಸುತ್ತಿದೆ. ಟೆಸ್ಟ್ ಪಂದ್ಯ ರೋಚಕ ತಿರುವು ಪಡೆಯುತ್ತಿರುವ ಬೆನ್ನಲ್ಲೇ ಇದೀಗ ಭಾರತ ತಂಡದ ವೇಗಿ ಆಟಗಾರ Mohammed Shami ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ.

Mohammed Shami Leg Injury
Image Credit: News 18

ಈ ಕಾರಣಕ್ಕೆ ದಕ್ಷಿಣ ಆಫ್ರಿಕಾ ವಿರುದ್ದದ ಟೆಸ್ಟ್ ನಿಂದ ಹೊರಬಿದ್ದ ಮೊಹಮ್ಮದ್ ಶಮಿ
ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾದ ಹಿರಿಯ ವೇಗಿ Mohammed Shami ಅವರು ಪಾದದ ನೋವಿನ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಎನ್ನುವ ಬಗ್ಗೆ ವರದಿಯಾಗಿದೆ. ಏಕದಿನ ವಿಶ್ವಕಪ್‌ ನಲ್ಲಿ ಶಮಿ ನೋವಿನಿಂದ ಬೌಲಿಂಗ್ ಮಾಡಿದ್ದರು.

ಆದಾಗ್ಯೂ, ಸಂಪೂರ್ಣ ಚೇತರಿಸಿಕೊಳ್ಳಲು ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್‌ ಬಜ್ ವರದಿ ಮಾಡಿದೆ. ಸದ್ಯ ಭಾರತ ಮತ್ತು ಆಫ್ರಿಕಾ ತಂಡಗಳು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸೆಣಸುತ್ತಿವೆ. ವೈಟ್ ಬಾಲ್ ಸರಣಿಯ ನಂತರ ಎರಡೂ ತಂಡಗಳು ಡಿಸೆಂಬರ್ 26 ರಿಂದ ಟೆಸ್ಟ್ ಸರಣಿಯಲ್ಲಿ ಸೆಣಸಾಡಲಿವೆ.

Mohammed Shami latest News Update
Image Credit: ABP News

ಬೇಸರದಲ್ಲಿ ಕ್ರಿಕೆಟ್ ಫ್ಯಾನ್ಸ್
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ವಿಮಾನದ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದ್ದಾರೆ. ಆದರೆ, ಮೊಹಮ್ಮದ್ ಶಮಿ ಅವರೊಂದಿಗೆ ಹೋಗಿಲ್ಲ ಎಂದು ಕ್ರಿಕ್ ಬಜ್ ವರದಿ ಮಾಡಿದೆ. ಈ ಮೂವರು ಹಿರಿಯ ಆಟಗಾರರೊಂದಿಗೆ ನವದೀಪ್ ಸೈನಿ ಮತ್ತು ಹರ್ಷಿತ್ ರಾಣಾ ಕೂಡ ವಿಮಾನದಲ್ಲಿ ತೆರಳಿದ್ದಾರೆ ಎಂದು ವರದಿಯಾಗಿದೆ.

ಮೊಹಮ್ಮದ್ ಶಮಿ ಇತ್ತೀಚೆಗೆ ಬೌಲಿಂಗ್ ಮಾಡುವಾಗ ಕಾಲು ನೋವು ಎಂದು ಹೇಳಿಕೊಂಡಿದ್ದರು. ಕಳೆದ ಏಕದಿನ ವಿಶ್ವಕಪ್ ಟೂರ್ನಿಯ ವೇಳೆ ಮೊಹಮ್ಮದ್ ಶಮಿಗೆ ಕಾಲು ನೋವು ಕಾಣಿಸಿಕೊಂಡಿತ್ತು. ಆದರೆ ನೋವಿನಿಂದ ಬೌಲಿಂಗ್ ಮಾಡಿದರು. ಆದರೆ ಇತ್ತೀಚಿನ ವರದಿಗಳ ಪ್ರಕಾರ ಶಮಿ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿಯಲಿದ್ದಾರೆ. ಆದರೆ, ಟೆಸ್ಟ್ ಸರಣಿಗೂ ಮುನ್ನ ಶಮಿ ಸಂಪೂರ್ಣ ಫಿಟ್ ಆಗಿದ್ದರೆ ಹರಿಣಗಳ ನಾಡಿಗೆ ಪ್ರಯಾಣಿಸಿದರು ಅಚ್ಚರಿಯಿಲ್ಲ.

Join Nadunudi News WhatsApp Group

Join Nadunudi News WhatsApp Group