Nada Geethe: ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ, ಸರ್ಕಾರದ ಇನ್ನೊಂದು ಆದೇಶ

ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ, ಸರ್ಕಾರದ ಆದೇಶ

Nada Geethe Is Not Mandatory For Privates Schools: ಸದ್ಯ ರಾಜ್ಯದಲ್ಲಿ ಕರ್ನಾಟಕ ಸರ್ಕಾರ ಸಾಕಷ್ಟು ಹೊಸ ಹೊಸ ನಿಯಮವನ್ನು ಜಾರಿಗೊಳಿಸಿದೆ. ಇನ್ನು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೂಡ ರಾಜ್ಯ ಸರ್ಕಾರ ಅನೇಕ ಬದಲಾವಣೆಯನ್ನು ಮಾಡಿದೆ ಎನ್ನಬಹುದು. ರಾಜ್ಯ ಸರ್ಕಾರ ಈ ಹಿಂದೆ ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಶಾಲೆಗಳಲ್ಲಿ ದಿನನಿತ್ಯದ ಚಟುವಟಿಕೆ ಆರಂಭಕ್ಕೂ ಮುನ್ನ ಹಾಗೂ ಸರಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರ್ಕಾರೀ ಅಧಿಕೃತ ಕಾರ್ಯಕ್ರಮಗಳ ಆರಂಭದಲ್ಲಿ ರಾಷ್ಟ್ರಕವಿ ಕುವೆಂಪು ರಚಿಸಿದ ಜಯಭಾರತ ಜನನಿಯ ತನುಜಾತೆ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಿತ್ತು. ಸದ್ಯ ಈ ಆದೇಶನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಹೊಸ ವಿವಾದಕ್ಕೆ ಸಿಲುಕಿಕೊಂಡಿದೆ ಎನ್ನಬಹುದು.

Nada Geethe Is Not Mandatory For Private Schools
Image Credit: Oneindia

ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ
ರಾಜ್ಯ ಸರ್ಕಾರ ಆಗಾಗ ಒಂದಲ್ಲ ಒಂದು ವಿವಾದದಲ್ಲಿ ಸಿಲುಕಿಕೊಳ್ಳುತ್ತದೆ. ಇತ್ತೀಚೆಗಷ್ಟೇ ವಸತಿ ಶಾಲೆಗಳಲ್ಲಿನ ಬರಹದ ವಿಚಾರಕ್ಕೆ ಸರ್ಕಾರ ವಿವಾದಕ್ಕೆ ಸಿಲುಕಿತ್ತು. ಇದೀಗ ಇದರ ಬೆನ್ನಲ್ಲೇ ನಾಡಗೀತೆ ಹಾಡುವ ಆದೇಶಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿದ್ದು, ಹೊಸ ವಿವಾದಕ್ಕೆ ಗುರಿಯಾಗಿದೆ. “ಖಾಸಗಿ ಶಾಲೆಯಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ” ಎನ್ನುವುದನ್ನು ರಾಜ್ಯ ಸರ್ಕಾರ ಉಲ್ಲೇಖಿಸಿದೆ. ಈ ಆದೇಶ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ ಎನ್ನಬಹುದು.

ಸರ್ಕಾರದ ಇನ್ನೊಂದು ಆದೇಶ
ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪು ಅವರ ‘ಜಯ ಭಾರತ ಜನನಿಯ ತನುಜಾತೆ’ ಕಾವ್ಯವನ್ನು ‘ನಾಡಗೀತೆ’ ಎಂದು ಘೋಷಿಸಿ ಹೊರಡಿಸಿದ ಸರ್ಕಾರಿ ಆದೇಶ ಸಂ. 207 ಕಸದ 2003, ದಿನಾಂಕ: 07-01-2004ರ ಹಾಗೂ ತಿದ್ದುಪಡಿ ದಿನಾಂಕ:01-02-2024ರ “(ಇ) ‘ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ಮತ್ತು ಸರ್ಕಾರಿ ಇಲಾಖೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು ಇತ್ಯಾದಿಗಳು ಆಯೋಜಿಸುವ ಅಧಿಕೃತ ಕಾರ್ಯಕ್ರಮಗಳ ಪ್ರಾರಂಭದಲ್ಲಿ ನಾಡಗೀತೆ ಹಾಡುವುದು’ ಎನ್ನುವ ಆದೇಶದ ಬದಲು,

Nada Geethe Latest News Update
Image Credit: Original Source

‘ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಪ್ರಾರಂಭವಾಗುವ ಮೊದಲು ಮತ್ತು ಸರ್ಕಾರಿ ಇಲಾಖೆಗಳು ಮತ್ತು ನಿಗಮ ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರೀ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂದು ಕನ್ನಡ ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

Join Nadunudi News WhatsApp Group

Join Nadunudi News WhatsApp Group