Narendra Modi: ಪ್ರಮಾಣವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಅವರಿಗೆ ಕನ್ನಡದಲ್ಲಿ ವಿಶ್ ಮಾಡಿದ ನರೇಂದ್ರ ಮೋದಿ.
ಪ್ರಧಾನಿ ನರೇಂದ್ರ ಮೋದಿ (Narendra Modi) ಕರ್ನಾಟಕಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಅವರಿಗ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.
Narendra Modi Wish Siddaramaiah: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ರಚನೆ ಆಗಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ.
ರಾಜ್ಯದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರ ನಡೆಯಲಿದೆ. ಅದ್ದೂರಿ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ಸ್ ಹಾಗು ಹಲವು ರಾಷ್ಟ್ರೀಯ ನಾಯಕರು ಭಾಗಿಯಾಗಿ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಅವರಿಗೆ ಕನ್ನಡದಲ್ಲಿಯೇ ಶುಭಾಶಯ ತಿಳಿಸಿದ ಮೋದಿ
ಇದೀಗ ಪ್ರಧಾನಿ ನರೇಂದ್ರ ಮೋದಿ (Narendra Modi) ಕರ್ನಾಟಕಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಅವರಿಗ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ಹದಿನಾರನೇ ವಿಧಾನಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಹಾಗು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರು ಉಪ ಮುಖ್ಯಮಂತ್ರಿಯಾಗಿ ಇಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ.
ನರೇಂದ್ರ ಮೋದಿ ಟ್ವೀಟ್
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.