NEP Education: ಡಿಗ್ರಿ ಮಾಡುವ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್, ವರ್ಷದಲ್ಲಿ ಕಡಿತ ಮಾಡಿದ ಸರ್ಕಾರ

ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಿದ ರಾಜ್ಯ ಸರ್ಕಾರ

NEP Education Rule Change: ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಪದವಿ ಶಿಕ್ಷಣ ನೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧಾರ ಕೈಗೊಂಡಿದೆ. ಹೊಸ ಶಿಕ್ಷಣ ನೀತಿಯನ್ನು ರದ್ದುಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ರಾಜ್ಯದ ಮುಖ್ಯಮಂತ್ರಿ Siddaramaiah ಅವರು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೊಸ ನಿಯಮ ಜಾರಿಯಾಗಲಿದೆ.

CM Siddaramaiah Latest News
Image Credit: The Hans India

ಮುಂದಿನ ವರ್ಷದಿಂದ ಹೊಸ ಶಿಕ್ಷಣ ನೀತಿ ಜಾರಿಯಾಗುತ್ತ…?
ಈ ಹಿಂದೆ ಬಿಜೆಪಿ ಸರ್ಕಾರ ಪದವಿ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (National Education Policy) ಯನ್ನು ಜಾರಿಗೊಳಿಸಲು ನಿರ್ಧರಿಸಿತ್ತು. NEP ಅಡಿಯಲ್ಲಿ ನಾಲ್ಕು ವರ್ಷಗಳ ಅವಧಿಯ ಪದವಿ ಕೋರ್ಸ್ ಆರಂಭಿಸುವ ತೀರ್ಮಾನ ಕೈಗೊಂಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ರಾಜ್ಯದ ಈ ಶಿಕ್ಷಣ ನೀತಿಯನ್ನು ಬದಲಾಯಿಸಲು ತೀರ್ಮಾನಿಸಿದೆ. ಸದ್ಯ ಕಾಂಗ್ರೆಸ್ ಸರ್ಕಾರ NEP ರದ್ದತಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.

NEP Education Rule Change
Image Credit: Digitallearning

ರಾಜ್ಯದಲ್ಲಿ 4 ವರ್ಷ ಪದವಿ ಕೋರ್ಸ್ ಕೈಬಿಟ್ಟ ಸರ್ಕಾರ
ರಾಜ್ಯದಲ್ಲಿ ಏನ್ ಇಪಿ ಅನುಷ್ಠಾನವನ್ನು ಕೈಬಿಟ್ಟು ಪ್ರತ್ಯೇಕವಾದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪದವಿ ಕೋರ್ಸ್ ಗಳನ್ನೂ ಮೂರು ವರ್ಷಕ್ಕೆ ಸೀಮಿತಗೊಳಿಸುವ ಕುರಿತು ನಿರ್ಧಾರ ಕೈಗೊಂಡಿದೆ.

ಹಿಂದಿನ ಸರ್ಕಾರ ನಿರ್ಧರಿಸಿರುವ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ನೀಡುವ ತೀರ್ಮಾನವನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ. ಇನ್ನುಮುಂದೆ ಏನ್ ಇಪಿ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಕೋರ್ಸ್ ಸ್ಥಗಿತ ಆಗಲಿದೆ. ಕರ್ನಾಟಕದಲ್ಲಿ 2024 -25 ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.

Join Nadunudi News WhatsApp Group

Join Nadunudi News WhatsApp Group