BPL Card: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಬೇಸರದ ಸುದ್ದಿ, ಸರ್ಕಾರದ ಇನ್ನೊಂದು ಘೋಷಣೆ.
ಹೊಸ BPL ಕಾರ್ಡಿಗೆ ಸಂಬಂಧಿಸಿದಂತೆ ಇನ್ನೊಂದು ಘೋಷಣೆ ಮಾಡಿದ ರಾಜ್ಯ ಸರ್ಕಾರ.
BPL Ration Card Latest Update: ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ (Ration Card) ಸಂಬಂಧಿತ ಅನೇಕ ರೀತಿಯ ಹೊಸ ಹೊಸ ಅಪ್ಡೇಟ್ ಗಳು ಹೊರಬೀಳುತ್ತಿದೆ. ರೇಷನ್ ಕಾರ್ಡ್ ಇತ್ತೀಚಿಗೆ ಬಹುಮುಖ್ಯ ದಾಖಲೆಯಾಗುತ್ತಿದೆ. ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ರೇಷನ್ ಕಾರ್ಡ್ ಹೆಚ್ಚಿನ ಬೇಡಿಕೆ ಪಡೆಯುತ್ತಿದೆ. ರಾಜ್ಯ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚಿನ ಯೋಜನೆಗಳನ್ನು ಹೊಸ ಹೊಸ ಸೌಲಭ್ಯವನ್ನು ಕೂಡ ನೀಡುತ್ತಿದೆ. ಅರ್ಹ ಫಲಾನುಭವಿಗಳು ಸರ್ಕಾರ ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುವ ಯೋಜನೆಗಳು ಹೆಚ್ಚುತ್ತಿರುವ ಕಾರಣ ಹೆಚ್ಚಾಗಿ ಎಲ್ಲರೂ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗಾಗಲೇ ಸರ್ಕಾರ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಸದ್ಯ ಲಕ್ಷಾಂತರ ಜನರು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಸರ್ಕಾರ ಹೊಸ ಪಡಿತರ ಚೀಟಿ ಅರ್ಜಿದಾರರಿಗೆ ಶಾಕ್ ನೀಡಿದೆ.
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ
ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗುವುದು ಎಂದು ಆರೋಗ್ಯ ಸಚಿವ ಮುನಿಯಪ್ಪ ಅವರು ಈ ಹಿಂದೆ ಮಾಹಿತಿ ನೀಡಿದ್ದರು. ಆದರೆ ಇದೀಗ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯಲ್ಲಿ ಬಿಗ್ ಟ್ವಿಸ್ಟ್ ಎದುರಾಗಿದೆ. ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಸರ್ಕಾರದ ಮುಂದಿನ ಆದೇಶದವರೆಗೂ ಹೊಸ ಪಡಿತರ ಚೀಟಿಗಳನ್ನು ಮಂಜೂರು ಮಾಡದಂತೆ ಆದೇಶ ಹೊರಡಿಸಲಾಗಿದೆ.
ಹೊಸ ಬಿಪಿಎಲ್ ಕಾರ್ಡ್ ವಿತರಣೆ ಸ್ಥಗಿತ
ನಿಗದಿಪಡಿಸಿದ ಸಂಖ್ಯೆಗಿಂತ ಹೆಚ್ಚುವರಿಯಾಗಿ ಈಗಾಗಲೇ ರೇಷನ್ ಕಾರ್ಡ್ ನೀಡಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಣೆಯನ್ನು ಸ್ಥಗಿತಗೊಳಿಸುವ ಬಗ್ಗೆ ಆಹಾರ ಇಲಾಖೆ ನಿರ್ಧರಿಸಿದೆ.
ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ಯಾವಾಗ ಅನುಮತಿ ನೀಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಆರ್ಥಿಕವಾಗಿ ಸಬಲರಾಗಿದ್ದವರು ಬಿಪಿಎಲ್ ರೇಷನ್ ಕಾರ್ಡ್ ಗೆ ರ್ಜಿ ಸಲ್ಲಿಸಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಈ ಕಾರಣಕ್ಕೆ ಅನರ್ಹರ ಬಿಪಿಎಲ್ ಕಾರ್ಡ್ ರದ್ದಾದ ಬಳಿಕ ಅರ್ಜಿ ವಿಲೇವಾರಿ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.