Gruha Lakshmi: ಇಂತಹ ಮಹಿಳೆಯರಿಗೆ ಇಲ್ಲ ಗೃಹಲಕ್ಷ್ಮಿ ಯೋಜನೆಯ ಹಣ, ಸರ್ಕಾರದ ಬೇದಭಾವಕ್ಕೆ ಮಹಿಳೆಯರ ಆಕ್ರೋಶ.
ಗೃಹ ಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್, ಯೋಜನೆಗೆ ಹೊಸ ಷರತ್ತುಗಳನ್ನು ಜಾರಿಗೊಳಿಸಿದ ರಾಜ್ಯ ಸರ್ಕಾರ.
New Condition For Gruha Lakshmi Scheme: ಗೃಹ ಲಕ್ಷ್ಮಿ (Gruha Lakshmi) ಯೋಜನೆಯ ಲಾಭ ಪಡೆಯಲು ರಾಜ್ಯದ ಮಹಿಳೆಯರು ಕಾಯುತ್ತಿದ್ದಾರೆ. ಮಾಸಿಕ 2000 ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತಾಗಿ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಲೇ ಇದೆ.
ಯೋಜನೆಯ ಲಾಭ ಪಡೆಯಲು ಈಗಾಗಲೇ ಲಕ್ಷಾಂತರ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ 70 ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ ಪೂರ್ಣಗೊಂಡಿದೆ. ಅರ್ಜಿ ಸಲ್ಲಿಸಿದವರು ಯೋಜನೆಯ ಲಾಭ ಪಡೆಯಲು ಕಾಯುತ್ತಿದ್ದಾರೆ. ಇನ್ನು ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.
ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನದ ಬಗ್ಗೆ ಆತಂಕ ಹೊರಹಾಕಿದ ಹಣಕಾಸು ಇಲಾಖೆ
ಇನ್ನು ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಸಾಕಷ್ಟು ಹೊರೆ ಬಿದ್ದಿದೆ. ಗ್ಯಾರಂಟಿ ಯೋಜನೆಯಿಂದಾಗಿ ಜನಸಾಮಾನ್ಯರು ಬೆಲೆ ಏರಿಕೆಯ ಪರಿಣಾಮವನ್ನು ಎದುರಿಸಬೇಕಾಗಿದೆ. ಸರ್ಕಾರ ಆಗಸ್ಟ್ ನಲ್ಲಿ ಗೃಹ ಲಕ್ಷ್ಮಿಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದೆ.
ಗೃಹ ಲಕ್ಷ್ಮಿ ಯೋಜನೆಗೆ ವಾರ್ಷಿಕವಾಗಿ 31 ಸಾವಿರ ಕೋಟಿ
ಆದರೆ ಗೃಹ ಲಕ್ಷ್ಮಿ ಜಾರಿಗೂ ಮುನ್ನ ಸರ್ಕಾರ ಇದೀಗ ಹೊಸ ಹೊಸ ಷರತ್ತುಗಳನ್ನು ವಿಧಿಸಿದೆ. ಇನ್ನು ಕಾಂಗ್ರೆಸ್ ಐದು ಗ್ಯಾರಂಟಿಗಳಿಗೆ ವಾರ್ಷಿಕವಾಗಿ 50 ರಿಂದ 60 ಕೋಟಿ ಅನುದಾನ ಬೇಕಾಗಿದೆ. ಪ್ರಸ್ತುತ ಗೃಹ ಲಕ್ಷ್ಮಿ ಯೋಜನೆಯ ಘೋಷಣೆಯ ಬೆನ್ನಲ್ಲೇ ಹಣಕಾಸು ಇಲಾಖೆ ಆತಂಕ ಹೊರಹಾಕಿದೆ. ಗೃಹ ಲಕ್ಷ್ಮಿ ಯೋಜನೆ ವಾರ್ಷಿಕವಾಗಿ 31 ಸಾವಿರ ಕೋಟಿ ಹಣ ಬೇಕಾಗಿದೆ. ಈಗಾಗಲೇ ಯೋಜನೆಗೆ ಹಲವು ಷರತ್ತುಗಳನ್ನು ವಿಧಿಸುವ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿದೆ.
ಗೃಹ ಲಕ್ಷ್ಮಿ ಯೋಜನೆಗೆ ಹೊಸ ಷರತ್ತುಗಳನ್ನು ಜಾರಿಗೊಳಿಸಿದ ಸರ್ಕಾರ
*ಕೇವಲ ಬಿಪಿಎಲ್ ಪಡಿತರದಾರರಿಗೆ ಮಾತ್ರ ಗೃಹ ಲಕ್ಷ್ಮಿ ಯೋಜನೆಯ ಲಾಭ.
*ಆದಾಯ ತೆರಿಗೆ ಪಾವತಿದಾರರ ಕುಟುಂಬಕ್ಕೆ ಗೃಹ ಲಕ್ಷ್ಮಿ ಯೋಜನೆ ಜಾರಿಯಾಗುವುದಿಲ್ಲ ಎನ್ನಲಾಗುತ್ತಿದೆ.
*GST ಪಾವತಿದಾರರು, ಪ್ರೊಫೆಷನ್ ಟ್ಯಾಕ್ಸ್ ಪಾವತಿದಾರರು, 5 ಎಕರೆಗಿಂತ ಹೆಚ್ಚಿನ ಒಣ ಭೂಮಿ ಇದ್ದವರು ಯೋಜನೆಗೆ ಅರ್ಹರಾಗಿರುವುದಿಲ್ಲ.
*ವಾರ್ಷಿಕವಾಗಿ 1.2 ಲಕ್ಷ ಆದಾಯಕ್ಕಿಂತ ಹೆಚ್ಚಿದ್ದರೆ ಅಂತವರು ಗೃಹ ಲಕ್ಷ್ಮಿ ಯೋಜನೆಗೆ ಅರ್ಹಾರಾಗಿರುವುದಿಲ್ಲ.
*ನಾಲ್ಕು ಚಕ್ರ ವಾಹನ ಹೊಂದಿರುವವರು, ಸರ್ಕಾರೀ ನೌಕರರು ಮತ್ತು ಪಿಂಚಣಿ ಪಡೆಯುವವರಿಗೆ ಯೋಜನೆ ಲಭ್ಯವಿಲ್ಲ.
*ಅಂಗನವಾಡಿ ಆಶಾ ಕಾರ್ಯಕರ್ತರು, ಸರ್ಕಾರದ ಗುತ್ತಿಗೆದಾರರು, ಅತಿಥಿ ಶಿಕ್ಷಕರು, ಗ್ರಾಮ ಸಹಾಯಕರಿಗೆ ಯೋಜನೆ ಲಾಭ ಸಿಗುವುದಿಲ್ಲ.