New Update: ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ, ಹೊಸ ಯೋಜನೆಗೆ ಸಿದ್ಧತೆ

ಸೋಮವಾರದಂದು ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ನೌಕರರ ಹಾಜರಾತಿ ಕಡ್ಡಾಯ

New Facility For Farmers: ಸದ್ಯ ರಾಜ್ಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ರೈತರ ಏಳಿಗೆಗಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ಪರಿಚಯಿಸುತ್ತ ಕೃಷಿ ಬೆಳವಣಿಗೆಗೆ ಸಹಾಯ ಮಾಡುತ್ತಿದೆ. ಈಗಾಗಲೇ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನು ಪರಿಚಯಿಸಿದ್ದು, ರೈತರು ಎಲ್ಲ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ.

ಸರ್ಕಾರ ಪರಿಚಯಿಸಿರುವ ಯೋಜನೆಗಳು ರೈತರ ಕೃಷಿ ಬೆಳವಣಿಗೆಗೆ ಆರ್ಥಿಕವಾಗಿ ಸಾಕಷ್ಟು ಸಹಾಯ ಮಾಡುತ್ತದೆ. ಸದ್ಯ ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವಂತಹ ವಿಶೇಷ ಯೋಜನೆಯನ್ನು ಪರಿಚಯಿಸಿದೆ. ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ವಿಶೇಷ ಸೌಲಭ್ಯವನ್ನು ಜಾರಿಗೆ ತರಲು ಮುಂದಾಗಿದೆ.

Karnataka government employees, officers attendance compulsory on Monday at office
Image Credit: India TV News

ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪ್ರತಿ ಸೋಮವಾರ ಕಡ್ಡಾಯವಾಗಿ ಅಧಿಕಾರಿಗಳು ಮತ್ತು ನೌಕರರು ಕಚೇರಿಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಎಲ್ಲ ಸರ್ಕಾರಿ ಇಲಾಖೆಗಳಿಗೆ ಆದೇಶ ಹೊರಡಿಸಿದ್ದಾರೆ.

ಸೋಮವಾರದಂದು ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ನೌಕರರ ಹಾಜರಾತಿ ಕಡ್ಡಾಯ
ಕರ್ನಾಟಕವು ಕೃಷಿ ಪ್ರಧಾನ ರಾಜ್ಯವಾಗಿದ್ದು, ರೈತರು ಸಾಮಾನ್ಯವಾಗಿ ಸೋಮವಾರದಂದು ಕೃಷಿ ಚಟುವಟಿಕೆಗಳಿಗೆ ವಿರಾಮ ತೆಗೆದುಕೊಂಡು ತಮ್ಮ ಕೆಲಸಕ್ಕಾಗಿ ಸಂತೆ, ಪಟ್ಟಣ ಕೆಲಸಗಳು ಮತ್ತು ಕಚೇರಿಗಳಿಗೆ ಹೋಗುವುದು ಬಹಳ ಹಿಂದಿನಿಂದಲೂ ಸಂಪ್ರದಾಯವಾಗಿದೆ. ಈ ಹಿಂದೆ ಪ್ರತಿ ಸೋಮವಾರ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಕೇಂದ್ರ ಕಚೇರಿಗಳಲ್ಲಿಯೇ ಇದ್ದು ಜನಪರ ಕೆಲಸ ಮಾಡುತ್ತಿದ್ದರು.

ಆದರೆ, ಕೃಷಿಯೇತರ ಹಿನ್ನೆಲೆಯ ಅಧಿಕಾರಿಗಳು ಮತ್ತು ನೌಕರರ ಸಂಖ್ಯೆ ಹೆಚ್ಚಾದ ಕಾರಣ ಈ ವ್ಯವಸ್ಥೆ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಆದ್ದರಿಂದ ಪ್ರತಿ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಪ್ರತಿ ಸೋಮವಾರ ತಮ್ಮ ಕೇಂದ್ರ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಂಎಲ್ ಸಿ ಅಡಗೂರು ಎಚ್.ವಿಶ್ವನಾಥ್ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇನ್ನುಮುಂದೆ ಸೋಮವಾರದಂದು ಕಚೇರಿಗಳಲ್ಲಿ ಅಧಿಕಾರಿಗಳು ನೌಕರರು ಹಾಜರಿರುತ್ತಾರೆ.

Join Nadunudi News WhatsApp Group

Govt Employees Attendance Mandatory
Image Credit: The News Minute

Join Nadunudi News WhatsApp Group