Lakshmi Hebbelkar: ರಾಜ್ಯದ ಹಿರಿಯ ನಾಗರಿಕರಿಗೆ ಇನ್ನೊಂದು ಗ್ಯಾರೆಂಟಿ, “ಒಂದೇ ಸೂರಿನಡಿ ಎಲ್ಲಾ” ಯೋಜನೆಗೆ ಜಾರಿಗೆ.
ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯವನ್ನು ಒದಗಿಸುವ ಯೋಜನೆ.
New Facility for Senior Citizens: ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಪರಿಚಯಿಸುತ್ತ ಜನರಿಗೆ ಸಹಾಯವಾಗುತ್ತಿದೆ. ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಕಾಯುತ್ತಿದ್ದ ಜನತೆಗೆ ಈಗಾಗಲೇ ನಾಲ್ಕು ಯೋಜನೆಗಳ ಲಾಭ ದೊರೆಯುತ್ತಿದೆ .
ಇನ್ನೇನು ಸದ್ಯದಲ್ಲೇ ಯುವ ನಿಧಿ ಯೋಜನೆ ಕೂಡ ಅನುಷ್ಠಾನಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಎಲ್ಲ ಉಚಿತ ಗ್ಯಾರಂಟಿಯನ್ನು ಅನುಷ್ಠಾನಗೊಳಿಸುವುದರ ಜೊತೆಗೆ ರಾಜ್ಯ ಸರ್ಕಾರ ರಾಜ್ಯ ಜನತೆಗೆ ಹೆಚ್ಚಿನ ಸೌಲಭ್ಯವನ್ನು ನೀಡುತ್ತಿದೆ.
ಉಚಿತ ಚಿಕೆತ್ಸೆಯ ಖುಷಿಯಲ್ಲಿದ್ದ ಜನತೆಗೆ ಸರ್ಕಾರದ ಮತ್ತೊಂದು ಘೋಷಣೆ
ಉಚಿತ ಭಾಗ್ಯಗಳ ಜೊತೆಗೆ ಆರೋಗ್ಯ ಯೋಜನೆಗಳನ್ನು ಕೂಡ ರಾಜ್ಯ ಸರ್ಕಾರ ರೂಪಿಸಿತ್ತು. ರಾಜ್ಯದಲ್ಲಿನ ಬಡ ಜನತೆಯ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳನ್ನು ಕಳುಹಿಸಿ ಆರೋಗ್ಯ ತಪಾಸಣೆ, ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಹಾಗೂ ಆಯ್ದ ಸಮಸ್ಯೆಗಳಿಗೆ ಉಚಿತವಾಗಿ ಔಷಧ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇನ್ನು ರಾಜ್ಯದ ಜನತೆ ಉಚಿತ ಚಿಕೆತ್ಸೆಯ ಖುಷಿಯಲ್ಲಿದ್ದ ಬೆನ್ನಲ್ಲೇ ಸರ್ಕಾರ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಸದ್ಯ ಹಿರಿಯ ನಾಗರಿಕರ ಒಳಿತಿಗಾಗಿ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಿರಿಯ ನಾಗರೀಕರಿಗಾಗಿ ಹೊಸ ಸೌಲಭ್ಯವನ್ನು ನೀಡಲು ನಿರ್ಧರಿಸಿದೆ. ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ “ಒಂದೇ ಸೂರಿನಡಿ ಎಲ್ಲಾ ಸೌಲಭ್ಯ”ವನ್ನು ಒದಗಿಸುವ ಯೋಜನೆಯನ್ನು ರೂಪಿಸಲಾಗಿದೆ. ಈ ಸೌಲಭ್ಯ ರಾಜ್ಯದ ಜನತೆಗೆ ಎಲ್ಲಾ ಸೌಲಭ್ಯಗಳ ಲಾಭ ಪಡೆಯಲು ಸಹಾಯವಾಗಲಿದೆ.
ಒಂದೇ ಸೂರಿನಡಿ ಎಲ್ಲಾ ಸೌಲಭ್ಯ
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbelkar) ಅವರು ಮಾಹಿತಿ ನೀಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ ಒಂದೇ ಸೂರಿನಲ್ಲಿ ಎಲ್ಲ ಸೌಲಭ್ಯಗಳನ್ನು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತು ಯೋಜನೆಯನ್ನು ಜಾರಿಗೊಳಿಸಲಾಗುವುದು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗವುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.