Students Bag: 1 ರಿಂದ 10 ನೇ ತರಗತಿ ಮಕ್ಕಳಿಗೆ ಬಂಪರ್ ಗುಡ್ ನ್ಯೂಸ್, ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ.

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಇಳಿಕೆ.

Students Bag Weight Decrease: ಇದೀಗ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ ಒಂದು ಹೊರ ಬಿದ್ದಿದೆ. ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಾಥಮಿಕ ಹಾಗು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೆ ಕಲಿಯುವ ವಾತಾವರಣವನ್ನು ರೂಪಿಸುವ ಸಲುವಾಗಿ centre for child and law NLSUI , Benga ri ರವರ ಸಹಯೋಗದೊಂದಿಗೆ ಡಿ.ಎಸ್.ಇ.ಆರ್.ಟಿ ರವರು ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ.

New information for class 1 to 10 students
Image Credit: Thelogicalindian

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ಮಾಹಿತಿ
ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡಾ 10 ರಿಂದ 15 ರಷ್ಟು ತೂಕದ ಶಾಲಾ ಬ್ಯಾಗ್ ಗಳನ್ನೂ ತೆಗೆದುಕೊಂಡು ಹೋಗಬಹುದಾಗಿ ಮೂಲೆ ತಜ್ಞರು ಶಿಫಾರಸು ಮಾಡಿರುತ್ತಾರೆ.

ಈ ಕುರಿತು ಸರ್ಕಾರೀ ಆದೇಶದಲ್ಲಿ ಕ್ರಮವಹಿಸಲು ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸರ್ಕಾರೀ ಅನುದಾನಿತ ಹಾಗು ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಸೂಚಿಸಿದೆ.

New information for class 1 to 10 students
Image Credit: bangaloremirror

ವಿದ್ಯಾರ್ಥಿ ಶಾಲಾ ಬ್ಯಾಗ್ ನ ತೂಕ ಇಷ್ಟಿರಬೇಕು
* 1 ರಿಂದ 2 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 1 .5 ರಿಂದ 2 ಕೆಜಿ.
* 3 ರಿಂದ 5 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 2 ರಿಂದ 3 ಕೆಜಿ.
* 6 ರಿಂದ 8 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 3 ರಿಂದ 5 ಕೆಜಿ.
* 9 ರಿಂದ 10 ನೇ ತರಗತಿ ಮಕ್ಕಳಿಗೆ ಶಾಲಾ ಬ್ಯಾಗ್ ತೂಕ 4 ರಿಂದ 5 ಕೆಜಿ.

Join Nadunudi News WhatsApp Group

Join Nadunudi News WhatsApp Group