Ration Card Application: ಹೊಸ ರೇಷನ್ ಕಾರ್ಡಿಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, ಸರ್ಕಾರದ ಇನ್ನೊಂದು ಘೋಷಣೆ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ರಾಜ್ಯದ ಜನತೆ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಿರಲಿಲ್ಲ. ಇದೀಗ ಲೋಕಸಭಾ ಚುನಾವಣೆ ಮುಗಿದ ಕೆಲವು ದಿನಗಳ ನಂತ್ರ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

New Ration Card Application
Image Credit: Samayam

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರಿಗೆ ಬಿಗ್ ಅಪ್ಡೇಟ್
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ರಾಜ್ಯ ಸರ್ಕಾರ ಘೋಷಿಸಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಎಲ್ಲ ಜನರು ಈಗ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯ ಸ್ಥಿತಿಯನ್ನು ಸಹ ಪರಿಶೀಲಿಸಬಹುದು ಎಂದು ತಿಳಿಸಿದೆ.

ಈ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.  ಇನ್ನು 2024 ರ ಜುಲೈ 2 ರಿಂದ 2024 ರ ಜುನೈ 3 ರ ವರೆಗೆ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗದೆ. ಹಾಗೆಯೆ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಜೆ 4 ರಿಂದ 6 ಗಂಟೆಯವರೆಗೆ ಸಮಯಾವಕಾಶ ನೀಡಲಾಗಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಬಹುದು.

New Ration Card Apply
Image Credit: Informal Newz

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
*ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರುವುದು ಕಡ್ಡಾಯವಾಗಿರುತ್ತದೆ.

Join Nadunudi News WhatsApp Group

*ಅರ್ಜಿದಾರರು ಈಗಾಗಲೇ ಯಾವುದೇ ಪಡಿತರ ಚೀಟಿ ಹೊಂದಿರಬಾರದು.

*ಕುಟುಂಬದ ಅರ್ಹತೆಗೆ ಅನುಗುಣವಾಗಿ ಪಡಿತರ ಚೀಟಿಯನ್ನು ನೀಡಲಾಗುವುದು.

ಈ ದಾಖಲೆಗಳು ಇದ್ದರೆ ಮಾತ್ರ ಅರ್ಜಿ ಸಲ್ಲಿಕೆ ಸಾಧ್ಯ
•ಮತದಾರರ ಗುರುತಿನ ಚೀಟಿ

•ಆಧಾರ್ ಕಾರ್ಡ್

•ವಯಸ್ಸಿನ ಪ್ರಮಾಣಪತ್ರ

•ಚಾಲನಾ ಪರವಾನಿಗೆ

•ಸ್ವಯಂ ಘೋಷಿತ ಪ್ರಮಾಣಪತ್ರ

•ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

•ಮೊಬೈಲ್ ನಂ.

•ಮನೆಯ ಸದಸ್ಯರ ಬಗ್ಗೆ ಮಾಹಿತಿ

Document Required For New Ration Card Application
Image Credit: India TV

Join Nadunudi News WhatsApp Group