Ration Card Apply: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ…? ಬೇಕಾಗಿರುವ ದಾಖಲೆಗಳು ಏನು ನೋಡಿ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿ.

New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿರುವವರು ಸರ್ಕಾರ ಹೊಸ ನಿಯಮಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಸರ್ಕಾರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹೇಗೆ ಅನ್ನುವ ಬಗ್ಗೆ ನಾವೀಗ ತಿಳಿಯೋಣ.

New Ration Card Application
Image Credit: Informal Newz

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವುದು ಹೇಗೆ…?
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಬಗ್ಗೆ ರಾಜ್ಯ ಸರ್ಕಾರ ಘೋಷಿಸಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿಲ್ಲದ ಎಲ್ಲ ಜನರು ಈಗ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯ ಸ್ಥಿತಿಯನ್ನು ಸಹ ಪರಿಶೀಲಿಸಬಹುದು ಎಂದು ತಿಳಿಸಿದೆ. ಈ ಮೂಲಕ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.   ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/Home/EServices ಗೆ ಭೇಟಿ ನೀಡಬಹುದು.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
*ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರುವುದು ಕಡ್ಡಾಯವಾಗಿರುತ್ತದೆ.

Join Nadunudi News WhatsApp Group

*ಅರ್ಜಿದಾರರು ಈಗಾಗಲೇ ಯಾವುದೇ ಪಡಿತರ ಚೀಟಿ ಹೊಂದಿರಬಾರದು.

*ಕುಟುಂಬದ ಅರ್ಹತೆಗೆ ಅನುಗುಣವಾಗಿ ಪಡಿತರ ಚೀಟಿಯನ್ನು ನೀಡಲಾಗುವುದು.

Ration Card Application Latest Update
Image Credit: Kannada Samachara

ಈ ದಾಖಲೆಗಳು ಇದ್ದರೆ ಮಾತ್ರ ಅರ್ಜಿ ಸಲ್ಲಿಕೆ ಸಾಧ್ಯ
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ

Document Required For Ration Card
Image Credit: News 18

Join Nadunudi News WhatsApp Group