Ration Card: ಇಂದಿನಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ, ಅರ್ಜಿ ಸಲ್ಲಿಸುವವರಿಗೆ ಈ ಷರತ್ತುಗಳು ಅನ್ವಯ

ಇಂದಿನಿಂದ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

New Ration Card Application Start From April 1st: ಪ್ರಸ್ತುತ Ration Card ಗೆ ಹೆಚ್ಚಿನ ಮಹತ್ವವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು Ration Card ಅತಿ ಮುಖ್ಯವಾಗಿದೆ.

ಇನ್ನು ರಾಜ್ಯದಲ್ಲಂತೂ ಕಾಂಗ್ರೆಸ್ ಸರ್ಕಾರ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರಸ್ತುತ ಈ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ಯೋಜನೆಗಳ ಲಾಭ ಪಡೆಯಲು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಸದ್ಯ ಇಂದಿನಿಂದ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

New Ration Card Application Start From April 1st
Image Credit: Kannada News

ಇಂದಿನಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ
ರಾಜ್ಯ ಸರ್ಕಾರ ಇಂದಿನಿಂದ ಅಂದರೆ April 1 ರಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಿದೆ. ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವವರು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಹೊಸ ಪಡಿತರ ಚೀಟಿಗೆ ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇನ್ನು ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ ಅರ್ಜಿ ಸಲ್ಲಿಕೆಗೆ ಅರ್ಹತಾ ಮಾನದಂಡವನ್ನು ಕೂಡ ಘೋಷಿಸಿದೆ. ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು ಎನ್ನುವ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.

New Ration Card Apply From April 1st
Image Credit: Timesbull

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಷರತ್ತುಗಳೇನು…?
•ಕರ್ನಾಟಕದ ಖಾಯಂ ನಿವಾಸಿ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Join Nadunudi News WhatsApp Group

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು.

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಯಾವ ದಾಖಾಲಾಗಳು ಅಗತ್ಯ
*Voter ID Card

*Aadhaar Card

*Mobile no.

*Age certificate

*Driving License

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮನೆಯ ಸದಸ್ಯರ ಬಗ್ಗೆ ಮಾಹಿತಿ

New Ration Card Application
Image Credit: Samayam

Join Nadunudi News WhatsApp Group