BPL Card: ಹೊಸ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಮತ್ತೆ ಬೇಸರದ ಸುದ್ದಿ, ರಾಜ್ಯ ಸರ್ಕಾರದ ಇನ್ನೊಂದು ಘೋಷಣೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ.
BPL Ration Card Applicatio Stop: ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ (Ration Card) ಸಂಬಂಧಿತ ಅನೇಕ ರೀತಿಯ ಹೊಸ ಹೊಸ ಅಪ್ಡೇಟ್ ಗಳು ಹೊರಬೀಳುತ್ತಿದೆ. ರೇಷನ್ ಕಾರ್ಡ್ ಇತ್ತೀಚಿಗೆ ಬಹುಮುಖ್ಯ ದಾಖಲೆಯಾಗುತ್ತಿದೆ. ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ರೇಷನ್ ಕಾರ್ಡ್ ಹೆಚ್ಚಿನ ಬೇಡಿಕೆ ಪಡೆಯುತ್ತಿದೆ.
ರಾಜ್ಯ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚಿನ ಯೋಜನೆಗಳನ್ನು ಹೊಸ ಹೊಸ ಸೌಲಭ್ಯವನ್ನು ಕೂಡ ನೀಡುತ್ತಿದೆ. ಅರ್ಹ ಫಲಾನುಭವಿಗಳು ಸರ್ಕಾರ ಯೋಜನೆಯ ಲಾಭ ಪಡೆಯುತ್ತಿದ್ದಾರೆ.
ಬಿಪಿಎಲ್ ಪಡಿತರ ಚೀಟಿದಾರರಿಗೆ ನೀಡುವ ಯೋಜನೆಗಳು ಹೆಚ್ಚುತ್ತಿರುವ ಕಾರಣ ಹೆಚ್ಚಾಗಿ ಎಲ್ಲರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈಗಾಗಲೇ ಸರ್ಕಾರ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಈಗಾಗಲೇ ಲಕ್ಷಾಂತರ ಜನರು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಸರ್ಕಾರ ಹೊಸ ಪಡಿತರ ಚೀಟಿ ಅರ್ಜಿದಾರರಿಗೆ ಶಾಕ್ ನೀಡಿದೆ.
ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ
ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಕರೆಯಲಾಗುವುದು ಎಂದು ಆರೋಗ್ಯ ಸಚಿವ ಮುನಿಯಪ್ಪ ಅವರು ಈ ಹಿಂದೆ ಮಾಹಿತಿ ನೀಡಿದ್ದರು. ಆದರೆ ಇದೀಗ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯಲ್ಲಿ ಬಿಗ್ ಟ್ವಿಸ್ಟ್ ಎದುರಾಗಿದೆ. ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಸರ್ಕಾರದ ಮುಂದಿನ ಆದೇಶದವರೆಗೂ ಹೊಸ ಪಡಿತರ ಚೀಟಿಗಳನ್ನು ಮಂಜೂರು ಮಾಡದಂತೆ ಆದೇಶ ಹೊರಡಿಸಲಾಗಿದೆ.
ಸದ್ಯದಲ್ಲೇ 10 ಕೆಜಿ ಅಕ್ಕಿ ವಿತರಣೆ ಸಾಧ್ಯತೆ
ಆರೋಗ್ಯ ಸಚಿವ ಮುನಿಯಪ್ಪ ಅವರು ಅನ್ನಭಾಗ್ಯ ಯೋಜನೆಯ ಬಗ್ಗೆ ಕೂಡಾ ಮಾಹಿತಿ ನೀಡಿದ್ದಾರೆ. ಈ ಹಿಂದೆ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಿತ್ತು.
ಆದರೆ ಅಕ್ಕಿ ಸರಬರಾಜಿನ ಕೊರತೆಯಿಂದ 5 ಕೆಜಿ ಅಕ್ಕಿ ಹಾಗು 5 ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೀಡುವುದಾಗಿ ಘೋಷಣೆ ಹೊರಡಿಸಲಾಗಿದೆ. ಇನ್ನು ಸೆಪ್ಟೆಂಬರ್ ನಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿ ವಿತರಿಸುವುದಾಗಿ ಮಾಹಿತಿ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಸೆಪ್ಟೆಂಬರ್ ನಲ್ಲಿಯೇ 10 ಕೆಜಿ ಅಕ್ಕಿಯನ್ನು ಅರ್ಹ ಫಲಾನುಭವಿಗಳು ಪಡೆಯಬಹುದಾಗಿದೆ.