Ration Card: ಏಪ್ರಿಲ್ 1 ರಿಂದ ಇಂತವರು ಮಾತ್ರ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು, ಷರತ್ತುಗಳು ಅನ್ವಯ.

ಏಪ್ರಿಲ್ 1 ರಿಂದ ಇಂತವರು ಮಾತ್ರ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು

New Ration Card Apply From April 1st: ರಾಜ್ಯದಲ್ಲಿ ಪಡಿತರ ಚೀಟಿಗೆ ಎಷ್ಟು ಮಹತ್ವವಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳ ಲಾಭವನ್ನು ಪಡೆಯಲು ರೇಷನ್ Card ಮುಖ್ಯ ದಾಖಾಲೆಯಾಗಿದೆ. ಈ ಕಾರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಯಾಗುತ್ತಿದೆ.

ಅದರಲ್ಲೂ ಹೆಚ್ಚಾಗಿ BPL Ration Card ಗೆ ಅರ್ಜಿ ಸಲ್ಲಿಕೆ ಹೆಚ್ಚುತ್ತಿದೆ. ಸದ್ಯ ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆ ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಇಲ್ಲಿದೆ.

Ration Card Apply
Image Credit: Gulf Hindi

ಏಪ್ರಿಲ್ 1 ರಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ
ಹೊಸ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೊಸ ಪಡಿತರ ಚೀಟಿ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಇನ್ನು ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ನೀಡುವ ಅಗತ್ಯವಿದೆ. ಈ ದಾಖಲೆಗಳು ಇಲ್ಲವಾದರೆ ನೀವು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

New Ration Card Apply From April 1st
Image Credit: Timesbull

ಏಪ್ರಿಲ್ 1 ರಿಂದ ಇಂತವರು ಮಾತ್ರ BPL ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
•ಕರ್ನಾಟಕದ ಖಾಯಂ ನಿವಾಸಿ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Join Nadunudi News WhatsApp Group

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು.

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

New Ration Card Apply
Image Credit: DNA India

ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಅಗತ್ಯ
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ

BPL Ration Card Application
Image Credit: TV 9 Kannada

Join Nadunudi News WhatsApp Group