Ration Card: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ, Online ಮೂಲಕ ಈ ರೀತಿ ಅರ್ಜಿ ಸಲ್ಲಿಸಿ

ಇಂತವರು ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

New Ration Card Application 2024: ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ ಹೊರಬೀಳುತ್ತಿದೆ. ಜನಸಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ, ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ.

ಇನ್ನು ಮಾರ್ಚ್ 31 ರೊಳಗಳೇ ಎಲ್ಲ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಇದೀಗ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದು.

New Ration Card Apply
Image Credit: Informalnewz

ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ
ಹೊಸ ಆದ್ಯತಾ ಪಡಿತರ ಚೀಟಿಗಾಗಿ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಅರ್ಜಿಗಳು ಸಲ್ಲಿಕೆಯಾಗಿದ್ದವು. ಚುನಾವಣೆ ಮತ್ತಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1 ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.

Ration Card Latest News Updates
Image Credit: TV9telugu

ಇಂತವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು
•ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.

Join Nadunudi News WhatsApp Group

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಅಗತ್ಯ
*ಮತದಾರರ ಗುರುತಿನ ಚೀಟಿ
*ಆಧಾರ್ ಕಾರ್ಡ್
*ವಯಸ್ಸಿನ ಪ್ರಮಾಣಪತ್ರ
*ಚಾಲನಾ ಪರವಾನಿಗೆ
*ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
*ಮೊಬೈಲ್ ನಂ
*ಸ್ವಯಂ ಘೋಷಿತ ಪ್ರಮಾಣಪತ್ರ

Join Nadunudi News WhatsApp Group