New Ration Card: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗೂಸ್ ನ್ಯೂಸ್, ಈ ದಿನದಂದು ಸಿಗಲಿದೆ ಹೊಸ ಕಾರ್ಡ್

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್, ಈ ದಿನದಂದು ಕಾರ್ಡ್ ವಿತರಣೆ

New Ration Card Distribution: ಸದ್ಯ ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಕೂಡ ಮುಖ್ಯ ದಾಖಲೆಯಾಗಿ ಕಾರ್ಯನಿರ್ವಹಿಸುತ್ತಿದೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರ ಉಚಿತ ಪಡಿತರನ್ನು ನೀಡಲು ರೇಷನ್ ಕಾರ್ಡ್ ವಿಷಯವಾಗಿ ರಾಜ್ಯದಲ್ಲಿ ಹಲವು ಹೊಸ ನಿಯಮವನ್ನ ಜಾರಿಗೆ ತರಲಾಗಿದೆ ಎಂದು ಹೇಳಬಹುದು.

ಸರ್ಕಾರದ ಉಚಿತ ಯೋಜನೆಗಳ ಲಾಭ ಪಡೆಯಲು Ration Card ಅಗತ್ಯವಾಗಿದೆ. ಯೋಜನೆಗಳ ಲಾಭ ಪಡೆಯಬೇಕಿದ್ದರೆ ರೇಷನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಇದೀಗ ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಸಿಹಿಸುದ್ದಿ ಹೊರಬಿದ್ದಿದೆ.

New Ration Card Distribution
Image Credit: DNA India

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗೂಸ್ ನ್ಯೂಸ್
ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ರಾಜ್ಯದ ಜನತೆಗೆ ರೇಷನ್ ಕಾರ್ಡ್ ಮಾಡುಸುವಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ರಾಜ್ಯ ಸರಕಾರ ನೀಡುವ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಅರ್ಹರ ಕೈ ತಪ್ಪಿ ಹೋಗಬಾರದು ಎನ್ನುವ ಕಾರಣಕ್ಕೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸರ್ಕಾರ ಅನುಮತಿ ನೀಡುತ್ತಿದೆ. ಆಹಾರ ಇಲಾಖೆಯಿಂದ ಹೊಸ ಅಪ್ಡೇಟ್ ಬಂದಿದೆ.

ಈ ದಿನದಂದು ಸಿಗಲಿದೆ ಹೊಸ ಕಾರ್ಡ್
ಆಹಾರ ಇಲಾಖೆ ಹೊಸ APL ಮತ್ತು BPL ಕಾರ್ಡ್ ಅರ್ಜಿ ಸಲ್ಲಿಕೆ ಹಾಗೂ ತಿದ್ದುಪಡಿಗೆ ಅವಕಾಶವನ್ನು ನೀಡಿದೆ. ಯಾರು ಯಾರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಪರಿಶೀಲನೆ ನಡೆಸುತ್ತಿದೆ. ಯಾರು ಸರ್ಕಾರದ ಉಚಿತ ಪಡಿತರ ವಿತರಣೆಯ ಲಾಭವನ್ನು ಪಡೆಯಲು ಅರ್ಹರಾಗಿರುತ್ತಾರೋ ಅಂತವರ ಅರ್ಜಿಯನ್ನು ಆಹಾರ ಇಲಾಖೆ ಸ್ವೀಕರಿಸಲಿದೆ.

Ration Card Latest Update
Image Credit: Thehindubusinessline

ಹೊಸ ಪಡಿತರ ಚೀಟಿಗಾಗಿ ಸುಮಾರು 3 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು ಇಲಾಖೆಯಿಂದ ಪರಿಶೀಲನೆ ಹಂತ ಕೊನೆಯಲ್ಲಿದ್ದು, ಸದ್ಯದಲ್ಲೇ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ನು ಕೇವಲ 15 ದಿನಗಳಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿಕೆ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group