Ration Card Distribution: ಹೊಸ BPL ಮತ್ತು APL ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್, ಸರ್ಕಾರದಿಂದ ಮಹತ್ವದ ಘೋಷಣೆ.

ಹೊಸ BPL ಮತ್ತು APL ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಮಹತ್ವದ ಘೋಷಣೆ.

New Ration Card Distribution Latest Update: ಪ್ರಸ್ತುತ ರಾಜ್ಯದಲ್ಲಿ Ration Card ಗೆ ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳನ್ನು ಜನತೆಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ.ಇನ್ನು ಲೋಕಸಭಾ ಚುನಾವಣೆಯ ಬಳಿಕ ಹೊಸ ರೇಶ್ನ ಕಾರ್ಡ್ ವಿಲೇವಾರಿ ಮಾಡುವುದಾಗಿ ಸರಕಾರ ಹೇಳಿಕೆ ನೀಡಿತ್ತು.

ಆದರೆ ಕಳೆದ ತಿಂಗಳು ಆಹಾರ ಇಲಾಖೆಯ ಸಚಿವರಾದ ಮುನಿಯಪ್ಪ ಅವರು ಸದ್ಯ ರೇಷನ್ ಕಾರ್ಡ್ ವಿಲೇವಾರಿಯ ಬಗ್ಗೆ ಸರ್ಕಾರ ಯೋಜನೆ ಹಾಕಿಕೊಂಡಿಲ್ಲ ಎಂದಿದ್ದರು. ಈ ಕಾರಣಕ್ಕೆ ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರು. ಬೇಸರಗೊಂಡಿದ್ದರು. ಇದೀಗ ರಾಜ್ಯ ಸರ್ಕಾರದಿಂದ ಜೂನ್ ಅಂತ್ಯದಲ್ಲಿ ಸಿಹಿ ಸುದ್ದಿ ಲಭಿಸಿದೆ.

New Ration Card Distribution Latest Update
Image Credit: Indiatodayne

ಹೊಸ BPL ಮತ್ತು APL ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್
ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ. ಉಳಿದ ಕಾರ್ಡ್ ಗಳಲ್ಲಿ ಶೀಘ್ರವೇ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡುವಂತೆ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ ನೀಡಿದ್ದಾರೆ. ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಯಲ್ಲಿ ಪಡಿತರದಾರರಿಗೆ ನೀಡುತ್ತಿರುವ ಅಕ್ಕಿ, ರಾಗಿ, ಜೋಳ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದಿಂದ ಮಹತ್ವದ ಘೋಷಣೆ
ಗೋದಾಮುಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯಗಳನ್ನು ಪೂರೈಸಬೇಕು. ಉಳಿದ ಕಾರ್ಡ್ ಗಳಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡುವಂತೆ ಸೂಚಿಸಲಾಯಿತು. ಪ್ರತಿ ತಿಂಗಳ ಅಂತ್ಯದೊಳಗೆ ಫಲಾನುಭವಿಗಳ ಖಾತೆಗೆ ಡಿಬಿಟಿ ಮೊತ್ತ ಜಮಾ ಆಗುವಂತೆ ಕ್ರಮಕೈಗೊಳ್ಳಬೇಕು. ಇಲಾಖೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇನ್ನು ಹೊಸ APL ಮತ್ತು BPL ರೇಷನ್ ಕಾರ್ಡಗಾಗಿ ಅರ್ಜಿ ಸಲ್ಲಿಸಿದವರು ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅನ್ನು ಪಡೆಯುವ ಮೂಲಕ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಬಹುದು.

New Ration Card Distribution
Image Credit: DNA India

Join Nadunudi News WhatsApp Group

Join Nadunudi News WhatsApp Group