Private Hospital: ಖಾಸಗಿ ಆಸ್ಪತ್ರೆಗೆ ಹೋಗುವ ಮುನ್ನ ಸರ್ಕಾರದ ಹೊಸ ನಿಯಮ ತಿಳಿದುಕೊಳ್ಳಿ, ಬಿಲ್ ಕೊಡುವ ಮುನ್ನ ಎಚ್ಚರ.

ಇನ್ನುಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಈ ನಿಯಮ ಕಡ್ಡಾಯ, ಸರ್ಕಾರದ ಆದೇಶ

New Rule For Private Hospital: ಸದ್ಯ ರಾಜ್ಯ ಸರ್ಕಾರ ವಿವಿಧ ನಿಯಮಗಳನ್ನು ಜಾರಿಗೊಳಿಸುತ್ತಿದೆ. ರಾಜ್ಯದ ಜನತೆಯ ಒಳಿತಿಗಾಗಿ ಸಾಕಾರ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಇನ್ನು ಜನಸಾಮನ್ಯರು ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದಾರೆ. ಸೈಬರ್ ಕ್ರಿಮಿನಲ್ಸ್ ಗಳು ಮೋಸ ಮಾಡುವುದಲ್ಲದೆ ವಿವಿಧ ರೀತಿಯಲ್ಲಿ ಜನರನ್ನು ವಂಚಿಸಲಾಗುತ್ತಿದೆ.

ಅದರಲ್ಲಿ ಖಾಸಗಿ ಆಸ್ಪತ್ರೆಗಳು ಕೂಡ ಜನರನ್ನು ವಂಚಿಸುವ ಪ್ರಯತ್ನ ಮಾಡುತ್ತಿದೆ. ಇದೀಗ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡುವ ಜನಸಾಮಾನ್ಯರಿಗೆ ಎಚ್ಚರಿಕೆ ನೀಡಿದೆ. ಹಾಗೆಯೆ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮವನ್ನು ಜಾರಿಗೊಳಿಸಿದೆ.

Private Hospital Latest Update
Image Credit: Economic Times

ಖಾಸಗಿ ಆಸ್ಪತ್ರೆಗೆ ಹೋಗುವ ಮುನ್ನ ಸರ್ಕಾರದ ಹೊಸ ನಿಯಮ ತಿಳಿದುಕೊಳ್ಳಿ
ಬಡ ಜನರಿಗೆ ಸರ್ಕಾರೀ ಆಸ್ಪತ್ರೆಗಳು ಉಚಿತ ಸೇವೆಯನ್ನು ನೀಡುತ್ತದೆ. ಆದರೆ ಸರ್ಕಾರೀ ಆಸ್ಪತ್ರೆಗಳಲ್ಲಿ ಕೆಲವೊಂದು ಸಮಸ್ಯೆಗಳಿಗೆ ತ್ವರಿತ ಚಿಕಿತ್ಸೆ ಲಭ್ಯವಾಗುವುದಿಲ್ಲ. ಈ ಕಾರಣಕ್ಕೆ ಜನರು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕಾಗುತ್ತದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಬಾರಿ ದುಬಾರಿಯಾಗಿರುತ್ತದೆ. ಬಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುವುದು ಕಷ್ಟವಾಗುತ್ತದೆ ಎನ್ನಬಹುದು.

ಇನ್ನು ಕೆಲವೊಮ್ಮೆ ಚಿಕಿತ್ಸೆ ನಿಗದಿಪಡಿಸಿರುವ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ರೋಗಿಗಳಿಂದ ಪಡೆಯುವ ಸಾಧ್ಯತೆ ಕೂಡ ಇರುತ್ತದೆ. ಇದರಿಂದ ಜನಸಮಾನ್ಯರಿಗೆ ಹೆಚ್ಚಿನ ತೊಂದರೆ ಉಂಟಾಗುತ್ತದೆ. ಸದ್ಯ ರಾಜ್ಯ ಸರ್ಕಾರ ಈ ಅಕ್ರಮದ ತಡೆಗಾಗಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಇನ್ನುಮುಂದೆ ಜನರು ಖಾಸಗಿ ಆಸ್ಪತ್ರೆಗೆ ಹೋಗುವ ಮುನ್ನ ಸರ್ಕಾರದ ಈ ನಿಯಮ ತಿಳಿದುಕೊಂಡು ವಂಚನೆಗೆ ಒಳಗಾಗುವುದನ್ನು ತಪ್ಪಿಸಿಕೊಳ್ಳಿ.

New Rule For Private Hospital
Image Credit: Live Mint

ಖಾಸಗಿ ಆಸ್ಪತ್ರೆಗಳಲ್ಲಿ ಈ ನಿಯಮ ಕಡ್ಡಾಯ
ಸದ್ಯ ರಾಜ್ಯ ಸರ್ಕಾರ ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಹೊಸ ನಿಯಮ ಜಾರಿ ಮಾಡಿದೆ. ಹೌದು ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸಾ ದರಪಟ್ಟಿ ಅಳವಡಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ತಮಗೆ ಇಷ್ಟಬಂದಂತೆ ಹಣವನ್ನು ವಸೂಲಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಯಾವ ಯಾವ ಚಿಕಿತ್ಸೆಗೆ ಎಷ್ಟು ಹಣ ಎನ್ನುವ ಬಗ್ಗೆ ಚಿಕಿತ್ಸಾ ದರಪಟ್ಟಿಯನ್ನು ಹಾಕುವಂತೆ ಸರ್ಕಾರ ಆದೇಶಿಸಿದೆ. ಖಾಸಗಿ ಆಸ್ಪತ್ರೆಗಳು ಈ ನಿಯಮ ಪಾಲಿಸುವಲ್ಲಿ ಎಡವಿದರೆ ಅಂತಹ ಆಸ್ಪತ್ರೆಗಳನ್ನು ಸೀಜ್ ಮಾಡಲಾಗವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.

Join Nadunudi News WhatsApp Group

Join Nadunudi News WhatsApp Group