Septembar Rule: ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು, ನಿಮ್ಮ ಜೇಬಿಗೆ ಕತ್ತರಿ ಪಕ್ಕಾ.
ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಯಾವ ಯಾವ ನಿಯಮಗಳು ಬದಲಾಗಲಿದೆ.
New Rule From Septembar 1st: ಪ್ರತಿ ತಿಂಗಳು ಮುಗಿಯುತ್ತಿದ್ದಂತೆ ಹೊಸ ಹೊಸ ನಿಯಮಗಳು (New Rule) ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಏಪ್ರಿಲ್ ಮತ್ತು ಮೇ ತಿಂಗಳ ಆರಂಭದಿಂದ ಸಾಕಷ್ಟು ನಿಯಮಗಳು ಬದಲಾಗಿವೆ. ಇದೀಗ ಆಗಸ್ಟ್ ತಿಂಗಳು ಮುಗಿದು ಸೆಪ್ಟೆಂಬರ್ ಆರಂಭಗೊಳ್ಳಲಿದೆ. ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಕೂಡ ಅನೇಕ ನಿಯಮಗಳು ಬದಲಾಗಲಿದೆ.
ಇನ್ನು ಸೆಪ್ಟೆಂಬರ್ 1 ರಿಂದ ಈ ಎಲ್ಲಾ ನಿಯಮಗಳು ಬದಲಾಗಲಿವೆ. ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ಯಾವ ಯಾವ ನಿಯಮಗಳು ಬದಲಾಗಲಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ. ಯಾವುದೇ ರೀತಿಯ ವ್ಯವಹಾರವನ್ನು ಮಾಡುವ ಮುನ್ನ ಬದಲಾಗಿರುವ ನಿಯಮದ ಮಾಹಿತಿ ತಿಳಿಯುವುದು ಉತ್ತಮ.
ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು
*ನೋಟು ವಿನಿಮಯಕ್ಕೆ ಕೊನೆಯ ದಿನಾಂಕ
ಸೆಪ್ಟೆಂಬರ್ 30 ರದ್ದಾಗಿರುವ 2,000 ಮುಖಬೆಲೆಯ ನೋಟಿನ ಬದಲಾವಣೆ ಅಥವಾ ವಿನಿಮಯಕ್ಕೆ ಕೊನೆಯ ದಿನಾಂಕವಾಗಿದೆ. ಸೆಪ್ಟೆಂಬರ್ 30 ರೋಳಗೆ ನಿಮ್ಮ ಬಳಿ ಇರುವ 2000 ಮುಖಬೆಲೆಯ ನೋಟಿನ ಠೇವಣಿ ಅಥವಾ ವಿನಿಮಯ ಪ್ರಕ್ರಿಯೆಯನ್ನು ಮುಗಿಸಿಕೊಳ್ಳಬಹುದು.
*ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. ಸೆಪ್ಟೆಂಬರ್ 30 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆದ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕು. ಆದ್ದರಿಂದ ಕೇಂದ್ರ ಸರ್ಕಾರ ಜನರಿಗೆ ಆಧಾರ್ ಗೆ ಪಡಿತರ ಲಿಂಕ್ ಮಾಡುವಂತೆ ಸೂಚನೆ ನೀಡಿದೆ.
*ಭಾರತೀಯ ಜೀವ ವಿಮಾ
ಇನ್ನು ಭಾರತೀಯ ಜೀವ ವಿಮೆ ಜನರಿಗಾಗಿ ಧನ್ ವೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಎಲ್ ಐಸಿ ಪಾಲಿಸಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ.
*ಸುಕನ್ಯಾ ಸಮೃದ್ಧಿ ಯೋಜನೆ
ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆದಾರರು ಆಧಾರ್ ಕಾರ್ಡ್ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಖಾತೆದಾರರು ಸೆಪ್ಟೆಂಬರ್ 30 ರ ಒಳಗೆ ಆಧಾರ್ ಹಾಗು ಪ್ಯಾನ್ ಕಾರ್ಡ್ ವಿವರವನ್ನು ನೀಡಬೇಕಾಗುತ್ತದೆ. ಆಧಾರ್ ಕಾರ್ಡ್ ಅನ್ನು ಸಕ್ರಿಯಗೊಳಿಸದಿದ್ದರೆ ನಿಮ್ಮ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆ ಸ್ಥಗಿತಗೊಳ್ಳಲಿದೆ.
*LPG ಗ್ಯಾಸ್ ಸಿಲಿಂಡರ್ ಬೆಲೆ
ಪ್ರತಿ ತಿಂಗಳ ಆರಂಭದಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ ಆಗುತ್ತದೆ. ಇನ್ನು ಪ್ರತಿ ತಿಂಗಳ ಆರಂಭದಲ್ಲಿ ಜನರು ಗ್ಯಾಸ್ ಬೆಲೆಯ ಇಳಿಕೆಯ ನೀರಿಕ್ಷೆಯಲ್ಲಿರುತ್ತಾರೆ. ಹೊಸ ಹಣಕಾಸು ವರ್ಷದ ಪ್ರಾರಂಭದಿಂದ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ರೀತಿಯ ಇಳಿಕೆ ಕಂಡು ಬಂದಿಲ್ಲ. ಇದೀಗ ಸೆಪ್ಟೆಂಬರ್ ನ ಆರಂಭದಲ್ಲಿ ಗ್ಯಾಸ್ ಬೆಲೆಯ ಇಳಿಕೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
*ಆದಾಯ ತೆರಿಗೆ ನಿಯಮ ಬದಲಾವಣೆ
ಸೆಪ್ಟೆಂಬರ್ 1 ರಿಂದ ಆದಾಯ ತೆರಿಗೆ ನಿಯಮದಲ್ಲಿ ಕೂಡ ಬದಲಾವಣೆ ಆಗಲಿದೆ. ಆದಾಯ ತೆರಿಗೆ ಪಾವತಿದಾರರು ಎರಡನೆ ಮುಂಗಡ ತೆರಿಗೆ ಕಂತು ಪಾವತಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ. ಎರಡನೇ ತೆರಿಗೆ ಕಂತನ್ನು ತೆರಿಗೆ ಪಾವತಿದಾರರು ನಿಗದಿತ ಸಮಯದೊಳಗೆ ಪಾವತಿಸಬೇಕಿದೆ.