Education Rule: ರಾಜ್ಯದ ಎಲ್ಲಾ ಶಾಲಾ ಕಾಲೇಜು ಮಕ್ಕಳಿಗೆ ಹೊಸ ನಿಯಮ, ಶಿಕ್ಷಣ ನೀತಿಯಲ್ಲಿ ದೊಡ್ಡ ಬದಲಾವಣೆ.

ರಾಜ್ಯದ ಎಲ್ಲಾ ಶಾಲಾ ಕಾಲೇಜು ಮಕ್ಕಳಿಗೆ ಈ ಪಠ್ಯ ಕಡ್ಡಾಯ.

New Rules For School And College: ರಾಜ್ಯದಲ್ಲಿ Congress ಸರ್ಕಾರ ಜನತೆಗೆ ವಿವಿಧ ಯೋಜನೆಗಳನ್ನು ಪರಿಚಯಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸಾಕಷ್ಟು ಸೌಲಭ್ಯವನ್ನು ಒದಗಿಸಲು ಮುಂದಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದು ಸರ್ಕಾರದ ಗುರಿಯಾಗಿದೆ. ಈಗಾಗಲೇ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶಾಲೆಗಳಲ್ಲಿ ಹೊಸ ಹೊಸ ನಿಯಮವನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ.

Preamble of the Indian Constitution compulsory in all schools in the state.
Image Credit: Indiatimes

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಮಹತ್ವದ ಮಾಹಿತಿ
2023 -24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾದಾಗಿನಿಂದ ಅನೇಕ ಶಿಕ್ಷಣ ನೀತಿಯಲ್ಲಿ ಸಾಕಷ್ಟು ನಿಯಮಗಳು ಬದಲಾಗುತ್ತಿದೆ. ಈ ಬಾರಿ ಶಾಲಾ ಮಕ್ಕಳು ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎನ್ನಬಹುದು.

ಇನ್ನು ಇತ್ತೀಚಿಗೆ ಶಿಕ್ಷಣವು ಡಿಜಿಟಲೀಕರಣವಾಗುತ್ತಿದೆ. ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರ ಈಗಾಗಲೇ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲು ಮುಂದಾಗಿದೆ. ಇನ್ನು ವಿದ್ಯಾರ್ಥಿ ವೇತನವನ್ನು ನೀಡುತ್ತಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿರುವ ರಾಜ್ಯ ಸರ್ಕಾರ ಇದೀಗ ಶಾಲೆಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ.

ಇಂದಿನಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ನಿಯಮ ಕಡ್ಡಾಯ
ರಾಜ್ಯದ ಶಾಲಾ ಮಕ್ಕಳಿಗೆ ಸಂವಿಧಾನ ಪೀಠಿಕೆ ಓದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದೀಗ ಈ ಬಗ್ಗೆ ರಾಜ್ಯ ಸರ್ಕಾರ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ. ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದನ್ನು ಕಡ್ಡಾಯಗೊಳಿಸಿದೆ. ರಾಜ್ಯ ಸರ್ಕಾರ ಈ ಹೊಸ ನಿಯಮವನ್ನು ಎಲ್ಲ ಶಾಲಾ ಕಾಲೇಜುಗಳು ತಪ್ಪದೆ ಪಾಲಿಸಬೇಕಿದೆ.

New Rules For School And College
Image Credit: Telegraphindia

ಇನ್ನುಮುಂದೆ ಪ್ರತಿನಿತ್ಯ ಪ್ರಾಥನೆಯಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯ
ರಾಜ್ಯದ ಎಲ್ಲಾ ಸರ್ಕಾರೀ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅಳವಡಿಸಬೇಕು ಹಾಗೆಯೆ ಪ್ರತಿನಿತ್ಯ ಪ್ರಾರ್ಥನೆಯ ವೇಳೆ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

Join Nadunudi News WhatsApp Group

ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ Dr. B.R Ambedkar ಅವರು ಹೇಳಿರುವಂತಹ ಸಂವಿಧಾನ ಪೀಠಿಕೆ ಅದರ ಆತ್ಮವಾಗಿದೆ. ಹೀಗಾಗಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆಯ ಕೇಂದ್ರದಿಂದ ಸಂವಿಧಾನ ಪೀಠಿಕೆಯನ್ನು ಖರೀದಿಸಿ ಕಾಲೇಜಿನಲ್ಲಿ ಫಲಕ ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿದೆ.

Join Nadunudi News WhatsApp Group