June 1st Rules: LPG ಯಿಂದ ಹಿಡಿದು ಕ್ರೆಡಿಟ್ ಕಾರ್ಡ್ ವರೆಗೆ ಈ ಎಲ್ಲಾ ನಿಯಮಗಳು ಚೇಂಜ್, ಜೇಬಿಗೆ ಕತ್ತರಿ

ದೇಶದಲ್ಲಿ ಬದಲಾಗಿದೆ ಈ ಎಲ್ಲಾ ನಿಯಮಗಳು, ನಿಮ್ಮ ಜೇಬಿಗೆ ಕತ್ತರಿ

New Rules From June 1st: ಜೂನ್ 1 ರಿಂದ ದೇಶದಲ್ಲಿ ಅನೇಕ ನಿಯಮಗಳು ಬದಲಾಗುತ್ತಿವೆ. ಪ್ರತಿ ತಿಂಗಳು ಮುಗಿಯುತ್ತಿದ್ದಂತೆ ಹೊಸ ಹೊಸ ನಿಯಮಗಳು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಏಪ್ರಿಲ್ ಮತ್ತು ಮೇ ತಿಂಗಳ ಆರಂಭದಿಂದ ಸಾಕಷ್ಟು ನಿಯಮಗಳು ಬದಲಾಗಿವೆ. ಜೂನ್ ತಿಂಗಳಿನಲ್ಲಿ ಅನೇಕ ವಹಿವಾಟುಗಳ ನಿಯಮಗಳು ಬದಲಾಗಿವೆ. ನೀವು ಬದಲಾಗಿರುವ ನಿಯಮಗಳನ್ನು ತಿಳಿಯಲು ಈ ಲೇಖನವನ್ನು ಓದಿ.

New Rules From June 1st
Image Credit: HMTV Live

•ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿತ
ನಿಮಗೆ ತಿಳಿದಿರುವ ಹಾಗೆ ಗ್ಯಾಸ್ ಸಿಲಿಂಡರ್ ಬೆಲೆಗಳು ತಿಂಗಳ ಮೊದಲ ದಿನದಂದು ಬದಲಾಗುತ್ತದೆ. ಸತತ ಮೂರನೇ ತಿಂಗಳಿನಿಂದ LPG ಬೆಲೆಗಳನ್ನು ಕಡಿತಗೊಳಿಸಲಾಗಿದೆ. 19 KG ಸಿಲಿಂಡರ್‌ನಲ್ಲಿ 72 ರೂ. ಇಳಿಕೆಯಾಗಿದೆ. ಆದರೆ ಈ ಬಾರಿಯೂ 14 KG ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

•SBI ಕ್ರೆಡಿಟ್ ಕಾರ್ಡ್ ಬದಲಾವಣೆಗಳು
ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ SBI ಕ್ರೆಡಿಟ್ ಕಾರ್ಡ್ ಗೆ ಸಂಬಂಧಿಸಿದಂತೆ ಅನೇಕ ನಿಯಮವನ್ನು ಬದಲಾವಣೆ ಮಾಡಿದೆ. SBI ಕ್ರೆಡಿಟ್ ಕಾರ್ಡ್‌ಗಳಿಗೆ ಸರ್ಕಾರಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ರಿವಾರ್ಡ್ ಪಾಯಿಂಟ್‌ಗಳು ಅನ್ವಯಿಸುವುದಿಲ್ಲ.

Rules Changing From June 1
Image Credit: Patrika

•ಡ್ರೈವಿಂಗ್ ಲೈಸೆನ್ಸ್ ನಿಯಮ
ಜೂನ್ 1 2024 ರಿಂದ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಸರ್ಕಾರಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಹೋಗಿ ಪರೀಕ್ಷೆಗೆ ಹಾಜರಾಗುವ ಅಗತ್ಯವಿಲ್ಲ. ಬದಲಾಗಿ ಖಾಸಗಿ ಸಂಸ್ಥೆಗಳಿಗೆ ಚಾಲನಾ ಪರೀಕ್ಷೆ ನಡೆಸಿ ಪ್ರಮಾಣಪತ್ರ ನೀಡಲು ಅಧಿಕಾರ ನೀಡಲಾಗಿದೆ. ಈ ಹೊಸ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ. ಜೂನ್ 1 ರಿಂದ ಹೊಸ ನಿಯಮದ ಪ್ರಕಾರ ವಾಹನ ಸವಾರರು DL ಅನ್ನು ಪಡೆದುಕೊಳ್ಳಬಹುದು.

•ಉಚಿತ ಆಧಾರ್ ಕಾರ್ಡ್ ನವೀಕರಣ
ಸದ್ಯ UIDAI ಹತ್ತು ವರ್ಷ ಹಳೆಯ ಆಧಾರ್ಡ್ ಕಾರ್ಡ್ ನವೀಕರಣಕ್ಕೆ ಸಂಬಂಧಿಸಿದಂತ ಹೊಸ ಅಪ್ಡೇಟ್ ನೀಡಿದೆ. June 14 ಉಚಿತ ನವೀಕರಣಕ್ಕೆ ಕೊನೆಯ ದಿನಾಂಕವಾಗಿದೆ. ನೀವು ಜೂನ್ 14 ರೊಳಗೆ ನಿಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಿಕೊಳ್ಳಬಹುದು. ಇದಕ್ಕೆ ಯಾವುದೇ ಶುಲ್ಕ ಪಾವತಿಸುವ ಅಗತ್ಯ ಇಲ್ಲ. ಆದರೆ ಜೂನ್ 14 ರ ನಂತರ ನೀವು ಆನ್ಲೈನ್ ನಲ್ಲಿ ಆಧಾರ್ ಕಾರ್ಡ್ ನವೀಕರಣ ಮಾಡಿದರೆ 50 ರೂ. ಶುಲ್ಕವನ್ನು ಪಾವತಿಸಬೇಕಾಗಬಹುದು

Join Nadunudi News WhatsApp Group

New Rules From June 1st 2024
Image Credit: Times Now Hindi

Join Nadunudi News WhatsApp Group