New Scheme: ಈ ರೈತರಿಗಾಗಿ ಹೊಸ ಕಾಯ್ದೆ ಜಾರಿಗೆ ತಂದ ಸಿದ್ದರಾಮಯ್ಯ, ರೈತರಿಗೆ ಗುಡ್ ನ್ಯೂಸ್.

ಈ ರೈತರಿಗಾಗಿ ಹೊಸ ಕಾಯ್ದೆ ಜಾರಿಗೆ ತಂದ ಸಿದ್ದರಾಮಯ್ಯ

New Scheme For Farmers: ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ರೈತರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ರೈತಾಯಿಗಾಗಿ ಸಾಕಷ್ಟು ಯೋಜನೆಯನ್ನು ಪರಿಚಯಿಸಿದೆ. ರೈತರು ಎಲ್ಲ ಯೋಜನೆಗಳ ಲಾಭವನ್ನು ಪಡೆಯುತ್ತಿದ್ದಾರೆ ಎನ್ನಬಹುದು.

ಸದ್ಯ ರಾಜ್ಯ ಸರ್ಕಾರ ಕುರಿಗಾಯಿಗಳಿಗಾಗಿ ವಿಶೇಷ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಕುರಿಗಾಯಿಗಳಿಗೆ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರಕಾರ ಹೊಸ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯ ಮೂಲಕ ರೈತರ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಮುಂದಾಗಿದೆ.

New Scheme For Shepherds
Image Credit: Original Source

ರಾಜ್ಯದ ರೈತರಿಗೆ ಗುಡ್ ನ್ಯೂಸ್
2024-25ನೇ ಸಾಲಿನಲ್ಲಿ ಕುರುಬ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರುಬ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಈ ರೈತರಿಗಾಗಿ ಹೊಸ ಕಾಯ್ದೆ ಜಾರಿಗೆ ತಂದ ಸಿದ್ದರಾಮಯ್ಯ
•ಕುರಿಗಳು ಸತ್ತರೆ ಪ್ರತಿ ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಮತ್ತಷ್ಟು ಹೆಚ್ಚಿಸಲು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

•ವಲಸೆ ಕುರಿ ಸಾಕಣೆದಾರರು ಹಾಗೂ ಅವರ ಆಸ್ತಿಪಾಸ್ತಿ ಮೇಲಿನ ದೌರ್ಜನ್ಯ ತಡೆಗೆ ಕಾಯ್ದೆ ರೂಪಿಸಲು ಹಾಗೂ ಕುರಿಗಳಿಗೆ ಉಚಿತವಾಗಿ ಲಸಿಕೆ ಹಾಕಲು ಅಗತ್ಯ ಸೂಚನೆ ನೀಡಲಾಗುವುದು ಎಂದರು.

Join Nadunudi News WhatsApp Group

New Scheme For Farmer
Image Credit: Agriland

•ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿಯ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಕಾಳಜಿ ವಹಿಸಲಾಗುವುದು ಎಂದರು.

•ಬಂದೂಕು ಪರವಾನಗಿ ನೀಡುವ ವ್ಯವಸ್ಥೆ ಹಾಗೂ ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಿಗೆ ಆದ್ಯತೆಯ ಪ್ರವೇಶಕ್ಕೆ ಸರ್ಕಾರ ಬಜೆಟ್‌ ನಲ್ಲಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

•ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿಯಿದ್ದು, ಪ್ರಸ್ತುತ 400 ವೈದ್ಯರ ನೇಮಕಾತಿ ನಡೆಯುತ್ತಿದೆ. ಉಳಿದ ವೈದ್ಯರನ್ನು ಮುಂದಿನ ವರ್ಷ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

•ಕುರುಬರ ಕುರಿಗಳು ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಿ ತನಿಖೆ ನಡೆಸಿ ರಕ್ಷಣೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.

Shepherds Latest News
Image Credit: Telanganatoday

Join Nadunudi News WhatsApp Group