Two Wheeler Rule: ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗುವ ಪೋಷಕರಿಗೆ ಹೊಸ ನಿಯಮ, ದಂಡ ಖಚಿತ

ಪೋಷಕರೇ ನಿಮ್ಮ ಮಕ್ಕಳನ್ನು ಟು ವೀಲರ್ ನಲ್ಲಿ ಕರೆದೊಯ್ಯುವ ಮುನ್ನ ಎಚ್ಚರ...!

New Traffic Rule For Two Wheeler: ಸದ್ಯ ಮಳೆಗಾಲ ಆರಂಭವಾಗಿದ್ದು, ಮಳೆಯ ಕಾರಣ ಶಾಲೆಗಳಿಗೆ ಹೋಗಲು ಮಕ್ಕಳು ತೊಂದರೆ ಎದುರಿಸುವಂತಾಗಿದೆ. ಇನ್ನು ಮಕ್ಕಳನ್ನು ಶಾಲೆಗೆ ಬಿಡಲು ಪೋಷಕರು ಹೋಗುವುದು ಸಹಜ. ತಮ್ಮ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಶಾಲೆಗೆ ಬಿಡುವುದು ಅಥವಾ ಬೇರೆ ಕಡೆ ಹೋಗುವುದು ಮಾಡುವವರಿಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ಹೌದು, ನೀವು ನಿಮ್ಮ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುವ ಮುನ್ನ ಸಂಚಾರಿ ಪೊಲೀಸರು ಜಾರಿಗೊಳಿಸಿರುವ ಈ ನಿಯಮದ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. ಈ ನಿಯಮ ಉಲ್ಲಂಘನೆ ಮಾಡಿದರೆ ನೀವು ದಂಡ ಪಾವತಿಸಬೇಕಾಗುತ್ತದೆ. ದ್ವಿಚಕ್ರ ವಾಹನದಲ್ಲಿ ಮಕ್ಕಳನ್ನು ಕೂರಿಸಿಕೊಂಡು ಓಡಾಡುವರಿಗೆ ಸಂಚಾರಿ ಪೊಲೀಸರು ಯಾವ ಹೊಸ ನಿಯಮವನ್ನು ಜಾರಿಗೊಳಿಸಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

New Traffic Rule For Two Wheeler
Image Credit: Zeebiz

ಪೋಷಕರೇ ನಿಮ್ಮ ಮಕ್ಕಳನ್ನು ಟು ವೀಲರ್ ನಲ್ಲಿ ಕರೆದೊಯ್ಯುವ ಮುನ್ನ ಎಚ್ಚರ…!
ರಾಜ್ಯಾದ್ಯಂತ ಟ್ರಾಫಿಕ್ ಪೊಲೀಸರು ಜನಸಾಮಾನ್ಯರ ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ. ಮಕ್ಕಳನ್ನು ಬೈಕ್‌ ಗಳ ಹಿಂಬದಿಯಲ್ಲಿ ಕುರಿಸಿಕೊಳ್ಳುವ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಮಕ್ಕಳನ್ನು ಬೈಕ್‌ ನಲ್ಲಿ ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್ ಬೆಲ್ಟ್ ಹಾಕದಿದ್ದರೆ ಅಂತವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಮಕ್ಕಳು ದ್ವಿಚಕ್ರ ವಾಹನದಲ್ಲಿ ಹೋಗುವ ಸೇಫ್ಟಿ ಹಾರ್ನೆಸ್ ಬೆಲ್ಟ್ ಧರಿಸದಿದ್ದರೆ ಪ್ರಕರಣ ದಾಖಲಿಸಿ 500 ರಿಂದ 1000 ರೂ.ವರೆಗೆ ದಂಡ ವಿಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ತಪ್ಪು ಮಾಡಿದರೆ ದಂಡ ಖಚಿತ
ಇನ್ನು 9 ತಿಂಗಳ ಮೇಲ್ಪಟ್ಟ ಮತ್ತು 4 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಸುರಕ್ಷತಾ ಬೆಲ್ಟ್ ಕಡ್ಡಾಯವಾಗಿದೆ. ಕೇಂದ್ರ ಮೋಟಾರು ವಾಹನ ನಿಯಮಗಳು, 1989 ರ ನಿಯಮ 138 (7) ರ ಪ್ರಕಾರ, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳು ಸೇಫ್ಟಿ ಹಾರ್ನೆಸ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಜುಲೈ ಮೊದಲ ವಾರದಲ್ಲಿ ಪೋಷಕರು ಮತ್ತು ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುತ್ತೇವೆ. ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ ಮಾತನಾಡಿ, ಎರಡನೇ ವಾರದಿಂದ ವಾಹನ ತಪಾಸಣೆ ನಡೆಸಿ ದಂಡ ವಿಧಿಸುತ್ತೇವೆ ಎಂದಿದ್ದಾರೆ.

New Traffic Rule
Image Credit: Informalnewz

Join Nadunudi News WhatsApp Group

Join Nadunudi News WhatsApp Group