ದೇಶದಲ್ಲಿ ಹೊಸಹೊಸ ನಿಯಮಗಳು ಜಾರಿಗೆ ಬರುತ್ತಿರುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ ಎಂದು ಹೇಳಬಹುದು. ಹೌದು ಹೊಸ ನಿಯಮಗಳು ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದ್ದು ಸರ್ಕಾರದ ಈ ನಿರ್ಧಾರಕ್ಕೆ ಜನರು ಬೇಸರಕ್ಕೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲಿ ವಿದ್ಯುತ್ ಬಳಕೆ ಮಾಡುತ್ತಾರೆ ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೆಲವು ಯೋಜನೆಗಳ ಅಡಿಯಲ್ಲಿ ಪ್ರತಿಯೊಂದು ಮನೆಯವರು ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈಗ ಮನೆಯಲ್ಲಿ ವಿದ್ಯುತ್ ಬಳಕೆ ಮಾಡುತ್ತಿರುವವರಿಗೆ ದೊಡ್ಡ ಶಾಕಿಂಗ್ ಸುದ್ದಿ ಬಂದಿದ್ದು ಇದು ಜನರ ಕೋಪಕ್ಕೆ ಕಾರಣವಾಗಿದೆ ಎಂದು ಹೇಳಬಹುದು.
ಹಾಗಾದರೆ ಏನದು ಶಾಕಿಂಗ್ ಸುದ್ದಿ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಬೆಸ್ಕಾಂ ಕೂಡ ಶಾಕ್ ನೀಡಲು ಮುಂದಾಗಿದೆ. ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಾಗುವ ಮುನ್ಸೂಚನೆ ಸಿಕ್ಕಿದೆ. ಪ್ರತಿ ಯುನಿಟ್‌ಗೆ 1.50 ರೂಪಾಯಿ ಹೆಚ್ಚಳಕ್ಕೆ ಬೆಸ್ಕಾಂ ಅಧಿಕಾರಿಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ದೇಶದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು ಈಗ ವಿದ್ಯುತ್ ಬೆಲೆ ಕೂಡ ಏರಿಕೆ ಆಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ವಿದ್ಯುತ್ ಬೆಲೆ ಏರಿಕೆಯರೆ ಮತ್ತೆ ಅಗತ್ಯ ವಸ್ತುಗಳ ಬೆಲೆ ಇನ್ನಷ್ಟು ಏರಿಕೆ ಆಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ವಿದ್ಯುತ್ ದರ ಏರಿಕೆಯಾದರೆ ಅದು ಪರೋಕ್ಷವಾಗಿ ಅಗತ್ಯ ವಸ್ತುಗಳ ದರ ಮತ್ತಷ್ಟು ಹೆಚ್ಚಾಗಲು ಕಾರಣವಾಗುತ್ತದೆ.
ಹೀಗಾಗಿ ವ್ಯಾಪಾರಿಗಳು ಹಾಗೂ ಉದ್ಯಮಿಗಳಿಗೂ ದೊಡ್ಡ ತಲೆನೋವು ಶುರುವಾಗಿದೆ. ಇನ್ನು ಬೆಸ್ಕಾಂ ಮಾತ್ರವಲ್ಲದೆ ಮೆಸ್ಕಾಂ, ಚೆಸ್ಕಾಂ ಅಧಿಕಾರಿಗಳು ಕೂಡ ನಷ್ಟದ ನೆಪ ಹೇಳಿ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಕಳೆದ ಬಾರಿ ಪ್ರತಿ ಯುನಿಟ್‌ಗೆ ರೂಪಾಯಿ 1.39 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ 30 ಪೈಸೆ ಮಾತ್ರ ದರ ಪರಿಷ್ಕರಣೆ ಮಾಡಲಾಗಿತ್ತು. ಸದ್ಯ ಈಗ KERC ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಾ ಅನ್ನೋ ಪ್ರಶ್ನೆ ಮೂಡಿದೆ, ಒಂದು ವೇಳೆ ಬೆಸ್ಕಾಂ ಪ್ರಸ್ತಾವನೆಗೆ KERC ಒಪ್ಪಿಗೆ ಕೊಟ್ಟರೆ ಜನರಿಗೆ ದರ ಹೆಚ್ಚಳದ ಬಿಸಿ ತಟ್ಟಲಿದೆ. ಸ್ನೇಹಿತರೆ ವಿದ್ಯುತ್ ಬೆಲೆ ಹೆಚ್ಚಾಗುತ್ತಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಾಮಗೆ ತಿಳಿಸಿ.