Nikhil Kumaraswamy: ಸತತ ಸೋಲಿನ ಬಳಿಕ ಮಹತ್ವದ ನಿರ್ಧಾರ ತಗೆದುಕೊಂಡ ನಿಖಿಲ್, ಬೇಸರದಲ್ಲಿ ಅಭಿಮಾನಿಗಳು.
ಸತತ ಸೋಲಿನ ಬಳಿಕ ರಾಜಕೀಯಕ್ಕೆ ರಾಜೀನಾಮೆ ನೀಡಲು ನಿಖಿಲ್ ಕುಮಾರಸ್ವಾಮಿ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Nikhil Kumaraswami Resign: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಂತಿದ್ದ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ಸಾಕಷ್ಟು ಪ್ರಚಾರ ಮಾಡಿದರು.
ನಿಖಿಲ್ ಕುಮಾರಸ್ವಾಮಿ ಅವರಿಗೆ ಬೆಂಬಲವಾಗಿ ಅವರ ತಂದೆ ಮಾಜಿ ಸಿಎಂ ಕುಮಾರಸ್ವಾಮಿ ನಿಂತಿದ್ದರು. ಆದರೂ ಸಹ ನಿಖಿಲ್ ಕುಮಾರಸ್ವಾಮಿ (Nikhil Kumaraswami ) ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ನಿಖಿಲ್ ಕುಮಾರಸ್ವಾಮಿ
ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ವಿರುದ್ಧ ಸ್ಪರ್ಧಿಸಿ ಸೋತಿದ್ದಾರೆ. ಇದೀಗ ಮೇ 10 ರಂದು ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೆತ್ರದಲ್ಲಿ ಸ್ಪರ್ಧಿಸಿ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ನ ಇಕ್ಬಾಲ್ ಹುಸೇನ್ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದಾರೆ.
ಚುನಾವಣೆಯಲ್ಲಿ ಸೋಲು ಕಂಡ ನಿಖಿಲ್ ಕುಮಾರಾಸ್ವಾಮಿಗೆ ಅದರಿಂದ ಹೊರಬರಲು ತುಂಬಾ ಸಮಯ ಬೇಕಾಯಿತು. ಇದೀಗ ಅವರು ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿಯಾದ ನಿಖಿಲ್ ಕುಮಾರಸ್ವಾಮಿ
ಸತತ ಎರಡು ಸೋಲುಗಳಿಂದ ಕಂಗಾಲಾಗಿರುವ ನಿಖಿಲ್ ಕುಮಾರಸ್ವಾಮಿ ಅವರು ಇದೀಗ ಮಹತ್ವ ನಿರ್ಧಾರ ಒಂದನ್ನು ತೆಗೆದುಕೊಳ್ಳುವ ಯೋಚನೆಯಲ್ಲಿದ್ದಾರಂತೆ. ಜೆಡಿಎಸ್ ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು ಸಿನಿಮಾದಲ್ಲಿ ಮಾತ್ರ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ. ಇದಕ್ಕೆ ಎಚ್ ಡಿ ಕುಮಾರಸ್ವಾಮಿ ಸಹ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ.