Additional Charge: ಡೀಸೆಲ್ ವಾಹನ ಖರೀದಿ ಮಾಡುವವರಿಗೆ ಕೇಂದ್ರದಿಂದ ಹೊಸ ನಿಯಮ, ಬೇಸರ ಹೊರಹಾಕಿದ ಜನರು.

ಡೀಸೆಲ್ ವಾಹನಗಳ ಮೇಲೆ ಇನ್ನೊಂದು ಹೊಸ ನಿಯಮ ಜಾರಿಗೆ ತಂದ ನಿತಿನ್ ಗಡ್ಕರಿ.

Nitin Gadkari Clarification On Additional GST: ಕೇಂದ್ರ ರಸ್ತೆ ಸಾರಿಗೆ ಸಚಿವ Nitin Gadkari ಅವರು ದೇಶದಲ್ಲಿ ಹೊಸ ಹೊಸ ನಿಯಮವನ್ನು ಜಾರಿಗೊಳಿಸುತ್ತಿದ್ದಾರೆ. ದೇಶದ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಸಾಕಷ್ಟು ನಿಯಮಗಳನ್ನು ರಸ್ತೆ ಸಂಚಾರಕ್ಕೆ ವಿಧಿಸಲಾಗಿದೆ. ಆದರೂ ಕೂಡ ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಬೀಳುತ್ತಿಲ್ಲ.

ಹೀಗಾಗಿ ಹೊಸ ಹೊಸ ನಿಯಮಗಳು ಜಾರಿಯಾಗುತ್ತಲೇ ಇರುತ್ತವೆ. ಇನ್ನು ರಸ್ತೆ ಸಾರಿಗೆ ಸಚಿವರಾದ Nitin Gadkari ಅವರು ಈಗಾಗಲೇ ದೇಶದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ತಡೆಗಾಗಿ ಎಥನಾಲ್ ಚಾಲಿತ ವಾಹನ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದ್ದಾರೆ. ಎಥನಾಲ್ ಚಾಲಿತ ವಾಹನಗಳನ್ನು ಬಿಡುಗಡೆಗೊಳಿಸುವ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

Nitin Gadkari Clarification On Additional GST
Image Credit: Jagran

ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10 ರಷ್ಟು ಹೆಚ್ಚುವರಿ GST
ನವದೆಹಲಿಯಲ್ಲಿ ನೆಡೆದ ಭಾರತೀಯ ಆಟೋ ಮೊಬೈಲ್ ತಯಾರಕ ಸಂಘದ 63 ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು ಹೆಚ್ಚುತ್ತಿರುವ ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್ ಸೆಟ್ ಗಳ ಮೇಲೆ ಮಾಲಿನ್ಯ ತೆರಿಗೆ ರೂಪದಲ್ಲಿ ಶೇಕಡಾ 10 ರಷ್ಟು ಹೆಚ್ಚುವರಿ GST ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿ ಪತ್ರವನ್ನು ಹಸ್ತಾಂತರಿಸಲಿದ್ದೇನೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Nitin Gadkari ಹೇಳಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂತಹ ಯಾವುದೇ ವರದಿಯು ಸರ್ಕಾರದ ಮುಂದಿಲ್ಲ ಎಂದು ಖುದ್ದಾಗಿ ಸಚಿವರೇ ಸ್ಫಷ್ಟನೇ ನೀಡಿದ್ದಾರೆ.


ಹೆಚ್ಚುವರಿ GST ಕುರಿತು ಸಚಿವರ ಸ್ಪಷ್ಟನೆ
ಡೀಸೆಲ್ ಚಾಲಿತ ವಾಹನಗಳ ಮೇಲೆ ಶೇ.10 ರಷ್ಟು ಹೆಚ್ಚುವರಿ GST ಕುರಿತು ವರದಿಯಾದ ಬಗ್ಗೆ ಸಚಿವ ನಿತಿನ್ ಗಡ್ಕರಿ ಅವರು “ಡೀಸೆಲ್ ವಾಹನಗಳ ಮಾರಾಟದ ಮೇಲೆ ಹೆಚ್ಚುವರಿ 10 % GST ಯನ್ನು ಸೂಚಿಸುವ ಮಾಧ್ಯಮ ವರದಿಗಳನ್ನು ಸ್ಪಷ್ಟಪಡಿಸುವ ತುರ್ತು ಅಗತ್ಯವಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಸಕ್ರಿಯ ಪರಿಗಣನೆಯಲ್ಲಿಲ್ಲ ಎಂಬುದನ್ನು ಸ್ಪಷ್ಟಪಡಿಸುದು ಅತ್ಯಗತ್ಯ.

2070ರ ವೇಳೆಗೆ ಕಾರ್ಬನ್ ನೆಟ್​ ಶೂನ್ಯವನ್ನು ಸಾಧಿಸಲು ಮತ್ತು ಡೀಸೆಲ್‌ನಂತಹ ಅಪಾಯಕಾರಿ ಇಂಧನಗಳಿಂದ ಉಂಟಾಗುವ ವಾಯು ಮಾಲಿನ್ಯದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಆಟೋಮೊಬೈಲ್ ಮಾರಾಟದಲ್ಲಿನ ತ್ವರಿತ ಬೆಳವಣಿಗೆಗೆ ಅನುಗುಣವಾಗಿ, ಸ್ವಚ್ಛ ಮತ್ತು ಹಸಿರು ಪರ್ಯಾಯ ಇಂಧನಗಳನ್ನು ಸಕ್ರಿಯವಾಗಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಇಂಧನಗಳು ಆಮದು ಬದಲಿಗಳಾಗಿರಬೇಕು, ವೆಚ್ಚ ಪರಿಣಾಮಕಾರಿ, ಸ್ಥಳೀಯ ಮತ್ತು ಮಾಲಿನ್ಯ ಮುಕ್ತವಾಗಿರಬೇಕು”. ಎಂದು ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group