Mobile Charge in Train: ರೈಲಿನಲ್ಲಿ ಇನ್ನುಮುಂದೆ ಮೊಬೈಲ್ ಚಾರ್ಜ್ ಮಾಡುವಂತಿಲ್ಲ, ಹೊಸ ನಿಯಮ ಜಾರಿಗೆ.
Indian Railway Passanger Rules: ರೈಲಿನಲ್ಲಿ ಪ್ರಯಾಣಿಸುವವರಿಗೆ ಹೊಸ ಮಾಹಿತಿ ಒಂದು ಹೊರ ಬಿದ್ದಿದೆ. ಈ ವಿಚಾರವನ್ನು ರೈಲು ಪ್ರಯಾಣಿಕರು ಗಮನದಲ್ಲಿಟ್ಟುಕೊಳ್ಳಬೇಕು.
ರೈಲಿನಲ್ಲಿ ಪ್ರಯಾಣಿಸುವಾಗ ಅನೇಕ ಜನರು ಮೊಬೈಲ್ ಅನ್ನು ಚಾರ್ಜ್ ಮಾಡುತ್ತಾರೆ. ಆದರೆ ಈ ಬಗ್ಗೆ ರೈಲ್ವೆ ಇಲಾಖೆ ಅಧಿಕಾರಿಗಳು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ರೈಲು ಪ್ರಯಾಣಿಕರಿಗೆ ಹೊಸ ಸುದ್ದಿ
ರೈಲಿನಲ್ಲಿ ಪ್ರಯಾಣಿಸುವ ವ್ಯಕ್ತಿಗಳಿಗೆ ಭಾರತೀಯ ರೈಲ್ವೆ ಇಲಾಖೆಯವರಿಂದ ಹೊಸ ಮಾಹಿತಿಯೊಂದು ಹೊರ ಬಿದ್ದಿದೆ. ಪ್ರಯಾಣದ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ ಅನ್ನು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ರಾತ್ರಿಯಿಡಿ ಚಾರ್ಜ್ ಮಾಡಲು ಅನುಮತಿಸದದಿರಲು ಭಾರತೀಯ ರೈಲ್ವೆ ನಿರ್ಧರಿಸಿದೆ.
ರೈಲು ಪ್ರಯಾಣಿಕರಿಗೆ ಮೊಬೈಲ್ ಚಾರ್ಜ್ ಮಾಡಲು ನಿಷೇಧ
ಕೆಲವು ರೈಲುಗಳಲ್ಲಿ ಬೆಂಕಿಯ ಘಟನೆಗಳು ಬೆಳಕಿಗೆ ಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಾತ್ರಿ ವೇಳೆ ರೈಲುಗಳಲ್ಲಿ ಮೊಬೈಲ್ ಚಾರ್ಜ್ ಮಾಡುವ ಸೌಲಭ್ಯವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ಮೊಬೈಲ್ ಹಾಗು ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಚಾರ್ಜ್ ಮಾಡಲು ಬಯಸುವ ಪಾಯಿಂಟ್ ಗಳನ್ನೂ ಮುಚ್ಚಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.
ರೈಲು ಬೆಂಕಿಯ ಕುರಿತು ಬಿಡುಗಡೆಯಾದ ವರದಿಯಲ್ಲಿ, ರಾತ್ರಿಯಲ್ಲಿ ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಚಾರ್ಜ್ ಮಾಡಲು ಬಳಸುವ ಪಾಯಿಂಟ್ ಗಳನ್ನೂ ಸ್ವಿಚ್ ಆಫ್ ಮಾಡಲು ಅಧಿಕಾರಿಗಳು ಸೂಚಿಸಿದ್ದಾರೆ.
ಫೋನ್ ಚಾರ್ಜ್ ಮಾಡುವುದು ಮತ್ತು ಓವರ್ ಚಾರ್ಜ್ ಮಾಡುವುದರಿಂದ ಅನೇಕ ಸಮಸ್ಯೆಗಳು ಬರುತ್ತದೆ. ಆದ್ದರಿಂದ ರೈಲ್ವೆ ಇಲಾಖೆಯವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.