Ads By Google

OPS: OPS ಬಗ್ಗೆ ಇನ್ನೊಂದು ಘೋಷಣೆ ಮಾಡಿದ ಸಿದ್ದರಾಮಯ್ಯ, ಈ ನೌಕರರಿಗೆ ಮಾತ್ರ ಸಿಗಲಿದೆ ಹಳೆಯ ಪಿಂಚಣಿ

Old pesnion scheme in karnataka

Image Credit: Original Source

Ads By Google

Old Pension Scheme Update: ಸದ್ಯ ರಾಜ್ಯ  ಮತ್ತು ಕೇಂದ್ರ ಸರ್ಕಾರ ಹಳೆಯ ಪಿಂಚಣಿಯ ಜಾರಿಯ ಬಗ್ಗೆ ಸಾಕಷ್ಟು ಚರ್ಚೆ ನಡೆಸುತ್ತಿದೆ. ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವುದು ಸರ್ಕಾರೀ ನೌಕರರ ಬಹುದಿನದ ಬೇಡಿಕೆಯಾಗಿದೆ. ಸದ್ಯ ಸಿದ್ದರಾಮಯ್ಯ ಸರ್ಕಾರ ಸರ್ಕಾರೀ ನೌಕರರ ಹಳೆಯ ಪಿಂಚಣಿ ಜಾರಿಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಘೋಷಣೆ ಹೊರಡಿಸಿದ್ದಾರೆ.

Image Credit: NDTV

ಹಳೆಯ ಪಿಂಚಣಿ ವ್ಯವಸ್ಥೆ ಜಾರಿ ಬಗ್ಗೆ ಬಿಗ್ ಅಪ್ಡೇಟ್
ಹೊಸ ವರ್ಷದ ಆರಂಭದಲ್ಲಿ ಸರ್ಕಾರೀ ನೌಕರರ ಹಳೆಯ ಪಿಂಚಣಿಯ ಬಗ್ಗೆ ಘೋಷಣೆಯಾಗುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಆದರೆ ಜನವರಿ ತಿಂಗಳಿನಲ್ಲಿ ಈವರೆಗೂ ಹಳೆಯ ಪಿಂಚಣಿಯ ವ್ಯವಸ್ಥೆಯ ಬಗ್ಗೆ ಯಾವುದೇ ರೀತಿಯ ಘೋಷಣೆ ಹೊರಬಿದ್ದಿಲ್ಲ. ಸದ್ಯ ಫೆಬ್ರವರಿಯಲ್ಲಿ ಮಂಡನೆಯಾಗಲಿರುವ 2024 ರ ಬಜೆಟ್ ಗು ಮುನ್ನ ಸರ್ಕಾರ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಮಾಡುವುದಾಗಿ ಹೇಳಿಕೊಂಡಿದೆ.

ಇಂತಹ ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ
ಪ್ರಸ್ತುತ ರಾಜ್ಯ ಸರ್ಕಾರ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13000 ಸರ್ಕಾರೀ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವುದಾಗಿ ಸರ್ಕಾರ ಘೋಷಣೆ ಹೊರಡಿಸಿದೆ. ಈ ಹಿಂದೆ ಇದ್ದ ಹಳೆಯ ಪಿಂಚಣಿ ವ್ಯವಸ್ಥೆಯಲ್ಲೂ ರದ್ದುಪಡಿಸಿ 2006 ರ ನಂತರ ನೇಮಕಗೊಂಡ ನೌಕರರಿಗೆ ಹೊಸ ಪಿಂಚಣಿಯ ವ್ಯವಸ್ಥೆಯಡಿ ಪಿಂಚಣಿ ನೀಡಲಾಗಿತ್ತು.

ಈ ಹಿನ್ನಲೆ ಸರ್ಕಾರೀ  ನೌಕರರು 2006 ರ ನಂತರ ನೇಮಕಗೊಂಡ ನೌಕರರಿಗೆ ಮತ್ತೆ ಹಳೆಯ ಪಿಂಚಣಿ ವ್ಯವಸ್ಥೆಯಡಿ ಪಿಂಚಣಿ ನೀಡಬೇಕು ಎನ್ನುವ ಬಗ್ಗೆ ಮನವಿ ಮಾಡಿಕೊಂಡಿದೆ. ಇದೀಗ ರಾಜ್ಯ ಸರ್ಕಾರ ಈ ಬಗ್ಗೆ ಚರ್ಚಿಸಿ ಒಂದು ಬಾರಿ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಸರ್ಕಾರ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ಹಲವು ಷರತ್ತುಗಳನ್ನು ವಿಧಿಸಿದ್ದು, ನೌಕರರು  ಇಷ್ಟಪಟ್ಟಲ್ಲಿ ಮಾತ್ರ ಒಮ್ಮೆ ಅವಕಾಶ ನೀಡಲಿದೆ. ಈ ಕುರಿತು ಅರ್ಜಿ ನಮೂನೆಯನ್ನು ಜೂನ್ 30 ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Ads By Google
Ramya M: Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.